ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ; ಓರ್ವನ ಬಂಧನ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 9:59 PM

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಮಾಯವಾಗಿದೆ. ಇದೇ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಅನ್ನಭಾಗ್ಯ ಅಕ್ಕಿ ಗೋದಾಮಿನ ಸಿಬ್ಬಂದಿಯಿಂದಲೇ ಅವ್ಯವಹಾರ ಶಂಕೆ ವ್ಯಕ್ತವಾಗಿದೆ.

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ; ಓರ್ವನ ಬಂಧನ
ರಾಮನಗರ
Follow us on

ರಾಮನಗರ, ನ.22: ಡಿಸಿಎಂ ಡಿಕೆ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಯೋಜನಾ(Anna Bhagya Yojana) ಅಕ್ಕಿ ಕಳವು ಆರೋಪ ಕೇಳಿಬಂದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಮಾಯವಾಗಿದೆ. ಇದೇ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಅನ್ನಭಾಗ್ಯ ಅಕ್ಕಿ ಗೋದಾಮಿನ ಸಿಬ್ಬಂದಿಯಿಂದಲೇ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಳೆದ 6 ತಿಂಗಳಿನಿಂದ ಅನ್ನಭಾಗ್ಯ ಅಕ್ಕಿ ಕಳ್ಳತನ ಆಗಿರುವ ಅನುಮಾನ ಬಂದಿದೆ. ಈ ಹಿನ್ನಲೆ ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರ ಚಂದ್ರು ಎಂಬಾತನನ್ನು ಚನ್ನಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

50 ಲಕ್ಷ ರೂ. ಮೌಲ್ಯಕ್ಕೂ ಹೆಚ್ಚು ಮೊತ್ತದ ಅಕ್ಕಿ ಕಳವು ಆರೋಪ

ಇನ್ನು ಘಟನೆ ಸಂಬಂಧ ಓರ್ವನನ್ನು ಬಂಧಿಸಿದ್ದು, ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬರೊಬ್ಬರಿ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಅನ್ನಭಾಗ್ಯ ಅಕ್ಕಿ ಕಳವು ಆಗಿರುವ ಆರೋಪ ಕೇಳಿಬಂದಿದೆ. ಇದು ಮುಖ್ಯವಾಗಿ ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿದೆ. ಕೂಡಲೇ ಈ ಕುರಿತು ತನಿಖೆ ನಡೆಸಿ, ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದವರನ್ನ ಬಂಧಿಸುವ ಕೆಲಸ ಮಾಡಬೇಕಾಗಿದೆ. ಜೊತೆಗೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ.

ಇದನ್ನೂ ಓದಿ:ಅನ್ನಭಾಗ್ಯ ಅಕ್ಕಿ ಹೊರ ರಾಜ್ಯಕ್ಕೆ ಸಾಗಿಸುವ ಜಾಲ ಪತ್ತೆ: ಕಂಪ್ಲಿ ಶಾಸಕ ಜೆ.ಎನ್.ಗಣೇಶ್​​ ರಾತ್ರೋ ರಾತ್ರಿ‌ ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ