ರಾಮನಗರ: ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣ; ಸಿಕ್ಕಿಬಿದ್ದ ಕಳ್ಳ ಯಾರು ಗೊತ್ತಾ?

ನಿನ್ನೆ(ನ.22) ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ ಕೇಳಿಬಂದಿತ್ತು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ ಬರೊಬ್ಬರಿ 50 ಲಕ್ಷ ಬೆಲೆಯ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಕಳ್ಳತನವಾಗಿತ್ತು. ಘಟನೆಗೆ  ಸಂಬಂಧಪಟ್ಟಂತೆ ಇದೀಗ ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರ ಚಂದ್ರು ಎಂಬಾತನೇ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ರಾಮನಗರ: ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣ; ಸಿಕ್ಕಿಬಿದ್ದ ಕಳ್ಳ ಯಾರು ಗೊತ್ತಾ?
ರಾಮನಗರ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 23, 2023 | 4:21 PM

ರಾಮನಗರ, ನ.23: ಜಿಲ್ಲೆಯ ಚನ್ನಪಟ್ಟಣದಲ್ಲಿ ಟಿಎಪಿಸಿಎಂಎಸ್​(TAPCMS) ಗೋದಾಮಿನಲ್ಲಿದ್ದ 1500 ಕ್ವಿಂಟಾಲ್ ಅನ್ನಭಾಗ್ಯ(Anna Bhagya) ಅಕ್ಕಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬುವ​ರಿಂಲೇ ಪಡಿತರ ಅಕ್ಕಿ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರದಿಂದ ಜಿಲ್ಲೆಗೆ 1400 ಕ್ವಿಂಟಾಲ್ ಪಡಿತರ ಅಕ್ಕಿ ಬಂದಿದ್ದು, ಎರಡು ತಿಂಗಳ ಪಡಿತರ ಅಕ್ಕಿ ಒಂದೇ ಬಾರಿಗೆ ಬಂದ ಹಿನ್ನೆಲೆ ಈ ಅವ್ಯವಹಾರ ನಡೆದಿದೆ ಎನ್ನಲಾಗಿದೆ.

ಖಾಸಗಿ ವ್ಯಕ್ತಿಗಳಿಗೆ ಅಕ್ಕಿ ಮಾರಾಟ ಮಾಡಿರುವ ಗೋದಾಮು ವ್ಯವಸ್ಥಾಪಕ

ಅಕ್ಕಿ ಬಂದ ಒಂದೇ ವಾರಕ್ಕೆ 1250 ಕ್ವಿಂಟಾಲ್​ಗೂ ಹೆಚ್ಚು ಅಕ್ಕಿ ಕಳ್ಳತನವಾಗಿದ್ದು, ಗೋದಾಮು ವ್ಯವಸ್ಥಾಪಕ ಚಂದ್ರಶೇಖರ್,  ಖಾಸಗಿ ವ್ಯಕ್ತಿಗಳಿಗೆ ಅಕ್ಕಿ  2500 ಅಕ್ಕಿ ಮೂಟೆಗಳಲ್ಲಿ ಮಾರಾಟ ಮಾಡಿದ್ದಾರೆ. ಈ ಹಿನ್ನಲೆ ಅಧಿಕಾರಿಗಳು TAPCMS ಗೋದಾಮು ಸೀಜ್ ಮಾಡಿ ಲೈಸೆನ್ಸ್ ರದ್ದುಪಡಿಸಿದ್ದು, ಗೋದಾಮು ವ್ಯವಸ್ಥಾಪಕ ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಈ ಕುರಿತು ಮಾತನಾಡಿದ ಆಹಾರ ಇಲಾಖೆಯ ಉಪನಿರ್ದೇಶಕಿ ರಮ್ಯಾ ‘ಇನ್ಮುಂದೆ ಆಹಾರ ಇಲಾಖೆ ಗೋದಾಮಿನಿಂದಲೇ ಪಡಿತರ ಸರಬರಾಜು ಮಾಡಲಾಗುವುದು. ಅಕ್ಕಿ ಕಳವು ಹಿನ್ನೆಲೆ ಡಿಸೆಂಬರ್ ತಿಂಗಳ ಪಡಿತರ ವಿತರಣೆ ವಿಳಂಬವಾಗುವ ಸಾಧ್ಯತೆಯಿದೆ. ಹೆಚ್ಚುವರಿ ಅಕ್ಕಿ ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ:ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ; ಓರ್ವನ ಬಂಧನ

ಘಟನೆ ವಿವರ

ನಿನ್ನೆ(ನ.22) ಡಿಸಿಎಂ ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ಕಳವು ಆರೋಪ ಕೇಳಿಬಂದಿತ್ತು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಗೋದಾಮಿನಲ್ಲಿದ್ದ ಬರೊಬ್ಬರಿ 50 ಲಕ್ಷ ಬೆಲೆಯ 1500 ಕ್ವಿಂಟಾಲ್ ಅಕ್ಕಿ ಇದ್ದಕ್ಕಿದ್ದಂತೆ ಕಳ್ಳತನವಾಗಿತ್ತು. ಇದೇ ಗೋದಾಮಿನಿಂದ ಚನ್ನಪಟ್ಟಣ ತಾಲೂಕಿನ 65 ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇನ್ನು ಘಟನೆಗೆ  ಸಂಬಂಧಪಟ್ಟಂತೆ ಅನ್ನಭಾಗ್ಯ ಅಕ್ಕಿ ಗೋದಾಮಿನ ಸಿಬ್ಬಂದಿಯಿಂದಲೇ ಅವ್ಯವಹಾರ ಶಂಕೆ ವ್ಯಕ್ತವಾದ ಹಿನ್ನಲೆ ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರ ಚಂದ್ರು ಎಂಬಾತನನ್ನು ಚನ್ನಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us