AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವು ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿದಂತೆ ತಂಡವನ್ನು ರಾಮನಗರಕ್ಕೆ ಕರೆತಂದ ಪೊಲೀಸರು

ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಸಾತನೂರು ಪೊಲೀಸರು ಬಂಧಿಸಿ ಕನಕಪುರಕ್ಕೆ ಕರೆತಂದಿದ್ದಾರೆ.

ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವು ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿದಂತೆ ತಂಡವನ್ನು ರಾಮನಗರಕ್ಕೆ ಕರೆತಂದ ಪೊಲೀಸರು
ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ತಂಡ
ವಿವೇಕ ಬಿರಾದಾರ
|

Updated on: Apr 09, 2023 | 8:05 AM

Share

ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾತನೂರು ಪೊಲೀಸರು (Sathanoor Police) ಕಾರ್ಯಾಚರಣೆ ನಡೆಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಏಪ್ರಿಲ್​ 05 ರಂದು ರಾಜಸ್ಥಾನದಲ್ಲಿ ಬಂಧಿಸಿದ್ದರು. ಈಗ ಪೊಲೀಸರು ಆರೋಪಿಗಳನ್ನು ಕನಕಪುರಕ್ಕೆ ಕರೆತಂದಿದ್ದು, ಇಂದು (ಏ.09) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್‌ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹವವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ (Idrish Pasha) ಎಂಬುವರ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಪಬ್ಲಿಕ್​ನಲ್ಲಿ ಡ್ರ್ಯಾಗರ್ ತೋರಿಸಿ ಬೈಕ್ ಸವಾರನಿಗೆ ಬೆದರಿಕೆ ಹಾಕಿದ್ದ ಕಾರು ಚಾಲಕ ಅರೆಸ್ಟ್

ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬುಧವಾರ (ಏ.5) ರಾಜಸ್ಥಾನದಲ್ಲಿ ಬಂಧಿಸಿದ್ದರು. ಆರೋಪಿಗಳಾದ ಪುನೀತ್ ಕೆರೆಹಳ್ಳಿ(ಎ1), ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗರ್, ಸುರೇಶ್ ಕುಮಾರ್​ ಆರೋಪಿಗಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?