ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾತನೂರು ಪೊಲೀಸರು (Sathanoor Police) ಕಾರ್ಯಾಚರಣೆ ನಡೆಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಏಪ್ರಿಲ್ 05 ರಂದು ರಾಜಸ್ಥಾನದಲ್ಲಿ ಬಂಧಿಸಿದ್ದರು. ಈಗ ಪೊಲೀಸರು ಆರೋಪಿಗಳನ್ನು ಕನಕಪುರಕ್ಕೆ ಕರೆತಂದಿದ್ದು, ಇಂದು (ಏ.09) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್ ಬಂಧಿತ ಆರೋಪಿಗಳು.
ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹವವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ (Idrish Pasha) ಎಂಬುವರ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಪಬ್ಲಿಕ್ನಲ್ಲಿ ಡ್ರ್ಯಾಗರ್ ತೋರಿಸಿ ಬೈಕ್ ಸವಾರನಿಗೆ ಬೆದರಿಕೆ ಹಾಕಿದ್ದ ಕಾರು ಚಾಲಕ ಅರೆಸ್ಟ್
ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬುಧವಾರ (ಏ.5) ರಾಜಸ್ಥಾನದಲ್ಲಿ ಬಂಧಿಸಿದ್ದರು. ಆರೋಪಿಗಳಾದ ಪುನೀತ್ ಕೆರೆಹಳ್ಳಿ(ಎ1), ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗರ್, ಸುರೇಶ್ ಕುಮಾರ್ ಆರೋಪಿಗಳು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ