AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ: ಮೋರಿ ನೀರನ್ನು ಕೈಯಲ್ಲೇ ತೆಗೆಯುತ್ತಿರುವ ಜನ, ಅಧಿಕಾರಿಗಳು – ಜನಪ್ರತಿನಿಧಿಗಳಿಗೆ ಹಿಡಿಶಾಪ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ. ಚನ್ನಪಟ್ಟಣ ತಾಲೂಕು ಕಚೇರಿಯ ಅನತಿ ದೂರದಲ್ಲೇ ಇರುವ ಆನಂದಪುರದ 1ನೇ ಅಡ್ಡರಸ್ತೆಯ ನಿವಾಸಿಗಳ ಸ್ಥಿತಿ ಹೇಳತೀರದಾಗಿದೆ. ಹಲವು ದಶಕಗಳು ಕಳೆದರೂ ಇಲ್ಲಿನ ನಿವಾಸಿಗಳ ಬದುಕು ಶೋಚನೀಯವಾಗಿದೆ.

ಚನ್ನಪಟ್ಟಣ: ಮೋರಿ ನೀರನ್ನು ಕೈಯಲ್ಲೇ ತೆಗೆಯುತ್ತಿರುವ ಜನ, ಅಧಿಕಾರಿಗಳು - ಜನಪ್ರತಿನಿಧಿಗಳಿಗೆ ಹಿಡಿಶಾಪ
ವ್ಯಕ್ತಿಯೊಬ್ಬರು ಕೈಯಲ್ಲೇ ಒಳಚರಂಡಿ ನೀರು ತೆಗೆಯುತ್ತಿರುವುದು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Oct 26, 2023 | 4:26 PM

Share

ರಾಮನಗರ, ಅಕ್ಟೋಬರ್ 26: ಅತ್ತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕನಕಪುರ (Kanakapur) ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಜತೆ ವಾಕ್ಸಮರಕ್ಕಿಳಿದಿದ್ದರೆ, ಇತ್ತ ಅವರ ಕ್ಷೇತ್ರ ಚನ್ನಪಟ್ಟಣದ (Channapatna) ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ನಾಗರೀಕ ಸಮಾಜವೇ ತಲೆತಗ್ಗಿಸುವಂತಹ ದುಸ್ಥಿತಿಯ ಜೀವನ ನಡೆಸ್ತಿದ್ದು, ಶೌಚಾಲಯಕ್ಕೂ ಬಳಿಸಿದ ನೀರನ್ನು ತಾವೇ ತಮ್ಮ ಕೈಯ್ಯಲ್ಲಿ ಎತ್ತಿ ಬೇರೆಡೆ ಸಾಗಿಸಬೇಕಿದೆ.

ಪ್ರತಿ ಮನೆಯ ಮುಂದೆ ಕಿರು ಚರಂಡಿ ಗುಂಡಿಗಳು, ಬೆಳಗಾದರೆ ಸಾಕು ಕಲುಷಿತ ನೀರನ್ನು ಕೋರುವ ಕಾಯಕ, ಒಂದು ಲೋಟ ನೀರು ಬಳಸಲೂ ಯೋಚಿಸಬೇಕಾದ ದುಸ್ಥಿತಿ, ಚರಂಡಿ ನೀರಲ್ಲೇ ಕಂದಮ್ಮಗಳ ಆಟ, ಊಟ. ಈ ಸ್ಥಿತಿ ಕಂಡು ಬಂದಿರೋದು ಯಾವುದೋ ಕುಗ್ರಾಮವಲ್ಲ, ಅಸಲಿಗೆ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣ. ಚನ್ನಪಟ್ಟಣ ತಾಲೂಕು ಕಚೇರಿಯ ಅನತಿ ದೂರದಲ್ಲೇ ಇರುವ ಆನಂದಪುರದ 1ನೇ ಅಡ್ಡರಸ್ತೆಯ ನಿವಾಸಿಗಳ ಸ್ಥಿತಿ ಹೇಳತೀರದಾಗಿದೆ. ಹಲವು ದಶಕಗಳು ಕಳೆದರೂ ಇಲ್ಲಿನ ನಿವಾಸಿಗಳ ಬದುಕು ಶೋಚನೀಯವಾಗಿದೆ.

ಚನ್ನಪಟ್ಟಣ ನಗರಸಭಾ ವ್ಯಾಪ್ತಿಯ 29ನೇ ವಾರ್ಡ್‌ಗೆ ಸೇರುವ ಆನಂದಪುರ 1ನೇ ಅಡ್ಡರಸ್ತೆಯಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ತಮಿಳು ಹಾಗೂ ಮುಸ್ಲಿಂ ಸಮುದಾಯ ಸೇರಿ 300ಕ್ಕೂ ಹೆಚ್ಚು ಮಂದಿ ಈ ಬಡಾವಣೆಯಲ್ಲಿದ್ದಾರೆ. ಸಣ್ಣ ಮನೆಗಳನ್ನ ಕಟ್ಟಿಕೊಂಡು ಜೀವನ ನಡೆಸುತ್ತಿರುವ ಈ ಬಡಾವಣೆಯ ನಿವಾಸಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿವೆ. ರಸ್ತೆ, ಚರಂಡಿ ಸೇರಿ ಹಲವು ಸಮಸ್ಯೆಗಳಿವೆ. ಮನೆಯ ಕೊಳಚೆ ನೀರನ್ನು ಮನೆಯವರೇ ಎತ್ತಿ ಬಹುದೂರ ಹೋಗಿ ಸುರಿದು ಬರುವ ಅನಿವಾರ್ಯತೆಯಿದೆ. ಮನೆಮುಂದೆ ಗುಂಡಿ ನಿರ್ಮಿಸಿಕೊಂಡು ಬರಿಗೈಯಲ್ಲಿ ಮೋರಿ ನೀರನ್ನ ಬಾಚಿ ಹೊರಹಾಕುವ ಪರಿಸ್ಥಿತಿ ಇದೆ. ಒಂದು ಲೋಟ ನೀರು ಬಳಸಲು ಯೋಚಿಸುವ ಸಂದರ್ಭ ಎದುರಾಗಿದೆ.

ಇದನ್ನೂ ಓದಿ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್

3 ಈ ಹಿಂದೆ ಈ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಇತ್ತು. ಇಲ್ಲಿನ ಮನೆಗಳ ಚರಂಡಿ ನೀರು ಪಕ್ಕದ ಖಾಸಗಿ ಜಾಗದಲ್ಲಿ ಹರಿದುಹೋಗುತ್ತಿತ್ತು. ಆದರೆ, ಕಳೆದ ಐದಾರು ವರ್ಷಗಳ ಹಿಂದೆ ಜಾಗದ ಮಾಲೀಕರು ಕಾಂಪೌಂಡ್ ಹಾಕಿಕೊಂಡ ಪರಿಣಾಮ ಈ ಬಡಾವಣೆ ನಿವಾಸಿಗಳಿಗೆ ಚರಂಡಿಯೇ ಇಲ್ಲವಾಗಿದೆ. ಪ್ರತಿ ಮನೆಯ ಎದುರು ಕಿರುಗುಂಡಿಗಳನ್ನು ನಿರ್ಮಿಸಿಕೊಳ್ಳಲಾಗಿದೆ. ಸ್ನಾನ ಮಾಡುವ, ಪಾತ್ರೆ ತೊಳೆದ, ಬಟ್ಟೆ ಒಗೆದ ನೀರು ಈ ಗುಂಡಿಯಲ್ಲಿ ಶೇಖರಣೆಯಾಗುತ್ತದೆ. ಇದನ್ನು ಪ್ರತಿನಿತ್ಯ ಬಕೆಟ್‌ನಲ್ಲಿ ತುಂಬಿಕೊಂಡು ಪಕ್ಕದ ರಸ್ತೆಯಲ್ಲಿರುವ ಚರಂಡಿಗೆ ಸುರಿಯುತ್ತಿದ್ದಾರೆ. ಇನ್ನು ಕೆಲವೆಡೆ ರಸ್ತೆಯೇ ಬಯಲು ಚರಂಡಿಯಾಗಿದೆ. ಈ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಅನಾರೋಗ್ಯದ ಆತಂಹ ಹೆಚ್ಚಾಗಿದೆ. ಇನ್ನೂ ಈ ಕ್ಷೇತ್ರವನ್ನ ಪ್ರತಿನಿಧಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಹಾಗೂ ನಗರಸಭೆ ಅಧ್ಯಕ್ಷರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದೇ ಇರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಒಟ್ಟಾರೆ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿರುವ ಈ ಆನಂದಪುರ ಬಡಾವಣೆಯ ಜನ, ರಾಜಕೀಯ ಗುದ್ದಾಟ ಏನಾದ್ರೂ ಇರಲಿ ಮೊದಲು ಮೂಲಭೂತ ಅವಶ್ಯಕ ಕೆಲಸ ಮಾಡುವಂತೆ ಕೋರಿದ್ದಾರೆ. ತಾವೂ ಜಳಕ ಮಾಡಿ ಶೌಚ ಮಾಡಿದ ನೀರು ಬೇರೆಡೆಗೆ ಹರಿದು ಹೋಗಲು ವ್ಯವಸ್ಥೆ ಇಲ್ಲದೇ ಬದುಕು ದುಸ್ತವಾಗಿದ್ದು ಕೂಡಲೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಡಬೇಕು ಅಂತ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:20 pm, Thu, 26 October 23

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ