ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ: ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ
ಮಂದಿರ ಅಭಿವೃದ್ಧಿ ಸಮಿತಿ ರಚಿಸಿ, ಸೂಕ್ತ ಪ್ರಸ್ತಾವನೆ ಸಲ್ಲಿಸಲು ರಾಮನಗರ ಡಿಸಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ಗೆ ಸೂಚನೆ ನೀಡಲಾಗಿದೆ.
ರಾಮನಗರ: ಅತ್ತ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ 2024ರ ಜನವರಿ 1ಕ್ಕೆ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಘೋಷಿಸಿರುವ ಬೆನ್ನಿಗೆ ಜಿಲ್ಲೆಯ ರಾಮದೇವರಬೆಟ್ಟದಲ್ಲಿ ರಾಮಮಂದಿರ (Ram Mandir) ನಿರ್ಮಾಣ ಮಾಡುವ ವಿಚಾರಕ್ಕೆ ಮತ್ತಷ್ಟು ಬಿರುಸು ಸಿಕ್ಕಿದೆ. ರಾಮದೇವರಬೆಟ್ಟದಲ್ಲಿ (Ramdevara Betta) ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಪ್ರಸ್ತಾವನೆ (Proposal) ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ (Ramanagara DC) ಸೂಚನೆ ನೀಡಲಾಗಿದೆ.
ಮಂದಿರ ಅಭಿವೃದ್ಧಿ ಸಮಿತಿ ರಚಿಸಿ, ಸೂಕ್ತ ಪ್ರಸ್ತಾವನೆ ಸಲ್ಲಿಸಲು ರಾಮನಗರ ಡಿಸಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಡಿಸಿಗೆ ಪತ್ರ ಬಂದಿದೆ.
Also Read:
Ramadevara Betta: ಚುನಾವಣೆ ನಿಮಿತ್ತ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಂದಾಯ್ತಾ ಬಿಜೆಪಿ?
ರಾಮದೇವರಬೆಟ್ಟದಲ್ಲಿ ರಾಮಮಂದಿರ ಸಂಬಂಧ ಪ್ರಸ್ತಾಪಿತ 19 ಎಕರೆಯ ಭೂದಾಖಲೆಗಳ ಸಂಪೂರ್ಣ ಮಾಹಿತಿ ಕಲೆ ಹಾಕಿ, ತಮ್ಮ ಸ್ಪಷ್ಟ ಅಭಿಪ್ರಾಯದ ಮೂಲಕ ಅಗತ್ಯ ಪ್ರಸ್ತಾಪನೆಯನ್ನು ತ್ವರಿತವಾಗಿ ಕಳಿಸುವಂತೆ ಸೂಚಿಸಲಾಗಿದೆ.
ಮತ್ತಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ