ಅಡುಗೆ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ 

ರಾಮನಗರದ ಮತ್ತಿಕೆರೆ ಗ್ರಾಮದಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಉಂಟಾದ ಜಗಳದಲ್ಲಿ ಪತ್ನಿಯನ್ನು ತುರಿಮಣೆಯಿಂದ ಹೊಡೆದು ಪತಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮಾಗಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ.

ಅಡುಗೆ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ 
ತಿಮ್ಮಮ್ಮ, ರಂಗಯ್ಯ
Edited By:

Updated on: Jun 26, 2025 | 12:50 PM

ರಾಮನಗರ, ಜೂನ್​ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಎದುರೇ ಬ್ಲೇಡ್​ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ

ಸಾರ್ವಜನಿಕರ ಎದುರೇ ಬ್ಲೇಡ್​ನಿಂದ‌ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಬಳಿ ನಡೆದಿದೆ. ವ್ಯಕ್ತಿ ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬಂತು ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್​​

ಇದನ್ನೂ ಓದಿ
ಬೈಕ್ ಟ್ಯಾಕ್ಸಿ ನಿಷೇಧದಿಂದ ಸ್ವಿಗ್ಗಿ, ಜೊಮೆಟೋ ಡೆಲಿವರಿ ಬಾಯ್​ಗಳಿಗೂ ಕಷ್ಟ!
ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಜೋರು
ಗ್ರಾಹಕರಿಗೆ ಮತ್ತೊಂದು ಶಾಕ್: ಬೆಸ್ಕಾಂ ವಿದ್ಯುತ್ ಬಿಲ್ ನೋಡಿ ಜನ ಬೇಸ್ತು
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ಮೆಟ್ರೋ ಟಿಕೆಟ್!

ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕತ್ತು ಕೊಯ್ದುಕೊಂಡ ವ್ಯಕ್ತಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಪೊಲೀಸರು ಅಪರಿಚಿತ ವ್ಯಕ್ತಿಯ ಮಾಹಿತಿ ಕಲೆಹಾಕುತ್ತಿದ್ದಾರೆ.

ಮಹಿಳೆಯ ಕೊರಳಲ್ಲಿದ್ದ ನಕಲಿ ಸರ ಕದ್ದು ಪರಾರಿಯಾದ ಕಳ್ಳರು

ಮಹಿಳೆಯನ್ನು ಹಿಂಬಾಲಿಸಿದ ಖದೀಮರು ಸರಗಳ್ಳತನ ಮಾಡಿ ಪರಾರಿಯಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಸಂಜಪ್ಪ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯ ಕೊರಳಲ್ಲಿದ್ದ ನಕಲಿ ಸರ ಕದ್ದು ಸರಗಳ್ಳರು ಪರಾರಿಯಾಗಿದ್ದಾರೆ. ಸರಗಳ್ಳತನದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಸುಪಾರಿ ಕೊಟ್ಟವನನ್ನೇ ಕೊಂದರು: ಶಿಗ್ಗಾಂವಿ ಗುತ್ತಿಗೆದಾರನ ಹತ್ಯೆ ಹಿಂದೆ ರಾಸಲೀಲೆ, ವಿಡಿಯೋ ಫೋಟೋಗಳು

ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದ ಸರಗಳ್ಳರು ಸ್ಕೂಟರ್ ನಿಲ್ಲಿಸುತ್ತಿದ್ದಂತೆ ನಕಲಿ ಸರ ಕದ್ದು ಪರಾರಿ ಆಗಿದ್ದಾರೆ. ಸರಗಳ್ಳತನ ಕುರಿತು ದೂರು‌ ನೀಡಿಲ್ಲ. ಹೀಗಾಗಿ ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:47 pm, Thu, 26 June 25