Leopard Attacks: ರಾಮನಗರ ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಿದ ಚಿರತೆ ದಾಳಿ ಭೀತಿ: ತಪ್ಪಿಸಿಕೊಳ್ಳಲು ಹೋಗಿ ಮರದಿಂದ ಕೆಳಗೆಬಿದ್ದ ಯುವತಿ

ರಾಮನಗರ ಜಿಲ್ಲೆಯಲ್ಲಿ ಮತ್ತಷ್ಟು ಚಿರತೆ ದಾಳಿ ಭೀತಿ ಹೆಚ್ಚಿದ್ದು, ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಕುರಿ ಕಾಯುತ್ತಿದ್ದ ಯುವತಿ ಮರವೇರಿರುವಂತಹ ಘಟನೆ ನಡೆದಿದೆ.

Leopard Attacks: ರಾಮನಗರ ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಿದ ಚಿರತೆ ದಾಳಿ ಭೀತಿ: ತಪ್ಪಿಸಿಕೊಳ್ಳಲು ಹೋಗಿ ಮರದಿಂದ ಕೆಳಗೆಬಿದ್ದ ಯುವತಿ
ಪ್ರಾತಿನಿಧಿಕ ಚಿತ್ರImage Credit source: newindianexpress.com
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 25, 2023 | 10:31 PM

ರಾಮನಗರ: ಜಿಲ್ಲೆಯಲ್ಲಿ ಮತ್ತಷ್ಟು ಚಿರತೆ ದಾಳಿ ಭೀತಿ ಹೆಚ್ಚಿದ್ದು, ಚಿರತೆ ದಾಳಿ (Leopard Attacks) ಯಿಂದ ತಪ್ಪಿಸಿಕೊಳ್ಳಲು ಕುರಿ ಕಾಯುತ್ತಿದ್ದ ಯುವತಿ ಮರವೇರಿರುವಂತಹ ಘಟನೆ ನಡೆದಿದೆ. ಗಡಿಬಿಡಿಯಲ್ಲಿ ಮರ ಏರುವಾಗ ಕೆಳಗೆಬಿದ್ದು ಯುವತಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ. ಮರಳುದೇವನಪುರ ಗ್ರಾಮದ ವಿಜಯಲಕ್ಷ್ಮೀ ಚಿರತೆಯಿಂದ ಪಾರಾದ ಯುವತಿ. ಗಾಯಾಳು ವಿಜಯಲಕ್ಷ್ಮೀಯನ್ನು ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಿರತೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಕರು ಬಲಿ

ಚಾಮರಾಜನಗರ: ಚಿರತೆ ದಾಳಿಗೆ ಕರು ಬಲಿಯಾದ ಘಟನೆ ತಾಲೂಕಿನ ಬಂಡೀಪುರ ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ಕಿಲಗೆರೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪ್ರಜ್ವಲ್ ಎಂಬವರಿಗೆ ಸೇರಿದ ಕರುವಿನ ಮೇಲೆ ಹುತ್ತೂರು ಕಿಲಗೆರೆ ಗೇಟ್ ಹಾಗೂ ಮಾದಲವಾಡಿ ಗ್ರಾಮದ ಮಾರ್ಗಮಧ್ಯೆ ಇರುವ ಜಮೀನಿನಲ್ಲಿ ತಡರಾತ್ರಿ ದಾಳಿ ನಡೆಸಿ ಕೊಂದು ಹಾಕಿದೆ.

ಇದನ್ನೂ ಓದಿ: Leopard Attack: ವಾಹನದ ಮೇಲೆ ಏಕಾಏಕಿ ಚಿರತೆ ದಾಳಿ: ಅದೃಷ್ಟವಶಾತ್​ ಪಾರಾದ ಚಾಲಕ

ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಜನರ ನಿದ್ದೆಗೆಡಿಸಿದ ಚಿರತೆಗಳ ಸೆರೆಗೆ ಟಾಸ್ಕ್​ ಫೋರ್ಸ್​ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಚಿರತೆ ದಾಳಿ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಿಎಂ ಬೊಮ್ಮಾಯಿ ಅವರು ಚಿರತೆ ದಾಳಿಯಲ್ಲಿ ಸಂಭವಿಸಿದ ಸಾವು ನೋವಿನ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಂತರ ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಎಲ್ಲ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಮಡಿಕೇರಿ:‌ ನದಿಯಲ್ಲಿ ಸ್ನಾನ ಮಾಡ್ತಿದ್ದಾಗ ಎಂಟ್ರಿಕೊಟ್ಟ ಗಜಪಡೆ, ಎದ್ದುಬಿದ್ದು ಓಡಿದ ಯುವಕರು

ಪ್ರಸ್ತುತ ತಾಲೂಕಿನಲ್ಲಿ ಚಿರತೆ ಸೆರೆ ಹಿಡಿಯಲು 158 ಮಂದಿ ಕೆಲಸ ಮಾಡುತ್ತಿದ್ದಾರೆ. ಕೋಂಬಿಂಗ್ ಆಪರೇಷನ್ ಪ್ರಾರಂಭವಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು. ಈ ವೇಳೆ ಸಿಎಂ ಬೊಮ್ಮಾಯಿ, ಪ್ರಕರಣ ಸಂಭವಿಸಿದ 3-4 ಕಿ.ಮೀ. ಸುತ್ತಳತೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು. ಚಿರತೆ ದಾಳಿಯಿಂದಾಗಿ ಟಿ. ನರಸೀಪುರ ತಾಲ್ಲೂಕಿನ 21 ಹಳ್ಳಿಗಳು ಬಾಧಿತವಾಗಿದ್ದು, ಈ ಹಳ್ಳಿಗಳಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳೀಯರ ನೆರವು ಪಡೆಯಬೇಕು. ಅಗತ್ಯವಿದ್ದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ ನೆರವು ಪಡೆಯಲು ಮುಖ್ಯಮಂತ್ರಿಯವರು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Wed, 25 January 23