AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 

ಮಧ್ಯರಾತ್ರಿ ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ರಿಕ್ಕಿ ರೈ ಕಾರು ಚಾಲಕ ಬಸವರಾಜ್​ ದೂರು ಆಧರಿಸಿ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 
ರಿಕ್ಕಿ ರೈ ಮೇಲೆ ಫೈರಿಂಗ್​
ಪ್ರಶಾಂತ್​ ಬಿ.
| Edited By: |

Updated on:Apr 19, 2025 | 11:13 AM

Share

ರಾಮನಗರ, ಏಪ್ರಿಲ್​ 19: ಸದಾ ಗನ್​ ಮ್ಯಾನ್​ ಇಟ್ಕೊಂಡು ಓಡಾಡುವ ರಿಕ್ಕಿ ರೈ (Rikki Rai) ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಮೂವರ ವಿರುದ್ಧ ದೂರು

ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.

ಇದನ್ನೂ ಓದಿ: Gun Firing on Rikki Rai: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್: ಮೂಗು, ಕೈಗೆ ತಾಕಿದ ಗುಂಡು

ಭದ್ರಕೋಟೆಯಂತೆ ಇರುವ ಮುತ್ತಪ್ಪ ರೈ ಅವರ ಮನೆಯಿಂದ ಹೊರಬರ್ತಿದ್ದಂತೆ ರಸ್ತೆಯಲ್ಲಿ ಕಾರಿನ ಮೇಲೆ ಅಟ್ಯಾಕ್ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಫೈರಿಂಗ್ ಹಿಂದೆ ಭೂಗತ ಲೋಕದ ಕೈವಾಡ ಇರುವ ಶಂಕೆ ಕೂಡ ವ್ಯಕ್ತವಾಗಿದೆ. ತಂದೆಯ ಮೇಲಿನ ದ್ವೇಷ, ರಿಕ್ಕಿಯ ವೈಯಕ್ತಿಕ ದ್ವೇಷಕ್ಕೆ ಫೈರಿಂಗ್ ನಡೆದಿರುವ ಅನುಮಾನಗಳು ಹುಟ್ಟಿಕೊಂಡಿವೆ.

ತನಿಖೆ ಚುರುಕುಗೊಳಿಸಿದ ಪೊಲೀಸ್​​

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮಾಜಿ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ, 2ನೇ ಪತ್ನಿ ಮಕ್ಕಳ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ‌ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್​ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯಾರೋ ಟಾರ್ಗೆಟ್ ಮಾಡಿ ರಿಕ್ಕಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ: ಪ್ರಕಾಶ್ ರೈ

ಬಿಡದಿಯಲ್ಲಿ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಹೇಳಿಕೆ ನೀಡಿದ್ದು, ರಾತ್ರಿ ವಿಚಾರ ಗೊತ್ತಾಯ್ತು, ಸೆಕ್ಯುರಿಟಿ ನನಗೆ ಫೋನ್ ಮಾಡಿದ್ದರು. ಮುತ್ತಪ್ಪ ರೈ ಕುಟುಂಬದ ಮೇಲೆ ಸಾಕಷ್ಟು ಜನರಿಗೆ ದ್ವೇಷ ಇದೆ. ಆಸ್ತಿ ವಿಚಾರಕ್ಕೂ ಸಂಬಂಧಿಸಿದಂತೆ ಒಂದಷ್ಟು ವಿವಾದ ಇತ್ತು. ರಿಕ್ಕಿ ಹೆಚ್ಚಿನ ಸಮಯ ಬಿಡದಿಯಲ್ಲಿ ಕಳೆಯುತ್ತಿದ್ದ. ಬೆಂಗಳೂರಿನ ಸದಾಶಿವ ನಗರದಲ್ಲೂ ರಿಕ್ಕಿ ರೈ ಮನೆ ಇದೆ. ರಾತ್ರಿ ಹೋಗುವಾಗ ಯಾರೋ ರಿಕ್ಕಿ ಮೇಲೆ ದಾಳಿ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲೋರ್ವ ವಿಕೃತ ಕಾಮುಕ: ಮಹಿಳೆಯರಿಗೆ ಖಾಸಗಿ ಅಂಗ ತೋರಿಸುವುದೇ ಈತನ ಕಾಯಕ

ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಇರುವ ಸಾಧ್ಯತೆ ಇದೆ. ಯಾರೋ ಟಾರ್ಗೆಟ್ ಮಾಡಿ ರಿಕ್ಕಿ ರೈ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ. ಮುತ್ತಪ್ಪ ರೈ ಇದ್ದಾಗಲೇ ರಿಕ್ಕಿ ಮೊದಲ ಪತ್ನಿಯಿಂದ ಡೈವರ್ಸ್ ಆಗಿತ್ತು. 2ನೇ ಪತ್ನಿ ವಿದೇಶದವರು, ಅವರು ಮಗು ಜತೆ ವಿದೇಶದಲ್ಲಿದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ದರು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:37 am, Sat, 19 April 25

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ