ರಾಮನಗರ: 100 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ

ಇತ್ತೀಚೆಗೆ ಕೂಡು ಕುಟುಂಬಗಳನ್ನ ಕಾಣುವುದು ತುಂಬಾ ಕಡಿಮೆಯಾಗಿದೆ. ಅದರಲ್ಲೂ ವಯಸ್ಸಾದವರನ್ನ ತಿರಸ್ಕಾರ ಮನೋಭಾವನೆಯಿಂದಲೇ ಕಾಣುತ್ತಾರೆ. ಆದರೆ ಇಲ್ಲೊಂದು ಕೂಡು ಕುಟುಂಬ ಇವತ್ತು ಒಟ್ಟಿಗೆ ಸೇರಿ ಶತಾಯುಷಿ ನಿಂಗಮ್ಮ ಅವರ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ.

ರಾಮನಗರ: 100 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ
100 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 10, 2023 | 10:45 PM

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆಯಲ್ಲಿ ನಿಂಗಮ್ಮ ಎನ್ನುವವರು 100 ವರ್ಷ ಪೂರೈಸಿ ಹುಟ್ಟು ಹಬ್ಬವನ್ನ ಇಂದು(ಜ.9) ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಅಂದಹಾಗೆ ನಿಂಗಮ್ಮನಿಗೆ ಏಳು ಜನ ಮಕ್ಕಳಿದ್ದು, ಅದರಲ್ಲಿ ಐದು ಹೆಣ್ಣು, ಇಬ್ಬರು ಗಂಡು ಮಕ್ಕಳು. ಇನ್ನು ಮೊಮ್ಮಕ್ಕಳು, ಮರಿಮಕ್ಕಳು ಸೇರಿ 80 ಜನ ಇದ್ದಾರೆ. ಎಲ್ಲರೂ ಒಳ್ಳೆಯ ಕೆಲಸಗಳಲ್ಲಿಯೇ ಇದ್ದಾರೆ. ಕೆಲವರು ರಾಮನಗರದಲ್ಲಿ ಇದ್ದರೇ, ಇನ್ನು ಕೆಲವರು ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಇದ್ದಾರೆ. ಒಟ್ಟಿಗೆ ಸೇರುವುದೇ ಅಪರೂಪವಾಗಿದ್ದು ಇವತ್ತು ಎಲ್ಲರೂ ಸೇರಿ ನಿಂಗಮ್ಮ ಅವರ ನೂರು ವರ್ಷ ಪೂರೈಸಿರುವ ಹಿನ್ನೆಲೆ ಅಜ್ಜಿಯ ಕೈಯಲ್ಲಿ ಕೇಕ್ ಕಟ್ ಮಾಡಿಸುವ ಮೂಲಕ ಸಂಭ್ರಮದಿಂದ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.

ನಿಂಗಮ್ಮ ಅವರು 1923ರಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹೊಸಳ್ಳಿ ಗ್ರಾಮದಲ್ಲಿ ಜನಸಿದರು. ಇದೀಗ ತನ್ನ ಎರಡನೇ ಮಗಳ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನು ಅಜ್ಜಿಗೆ ನೂರು ವರ್ಷ ಆದರೂ ಇದುವರೆಗೂ ಯಾವುದೇ ಅನಾರೋಗ್ಯದ ಸಮಸ್ಯೆ ಕಾಡಿಲ್ಲ. ಈಗಲೂ ಸಹ ಕಣ್ಣುಗಳು ಚೆನ್ನಾಗಿ ಕಾಣಿಸುತ್ತವೆ ಕೆಲವನ್ನ ಓದುತ್ತಾರೆ. ಅಷ್ಟೇ ಅಲ್ಲದೆ ಮಕ್ಕಳು, ಮೊಮ್ಮಕ್ಕಳನ್ನ ಗುರುತಿಸುತ್ತಾರೆ. ನೂರು ವರ್ಷಗಳ ಕಾಲ ಬದುಕುವುದು ಎಂದರೇ ಸಾಮಾನ್ಯವಲ್ಲ. ಹೀಗಾಗಿ ಅಜ್ಜಿಗೆ ಎಲ್ಲರೂ ಸೇರಿ ಏನಾದರೂ ಮಾಡಬೇಕು ಎಂದು ನೂರನೇ ವರ್ಷದ ಹುಟ್ಟುಹಬ್ಬವನ್ನ ಆಚರಣೆ ಮಾಡಿದ್ದಾರೆ.

ಇದನ್ನೂ ಓದಿ:Prashanth Neel: ಉರ್ದು ಭಾಷೆಯಲ್ಲಿ ಯಶ್​ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ ಪ್ರಶಾಂತ್​ ನೀಲ್​; ಕನ್ನಡಿಗರು ಗರಂ

ಒಟ್ಟಾರೆ ವಯಸ್ಸಾಗಿದೆ ಎಂದು ಮೂಗು ಮುರಿಯುವವರೇ ಎಷ್ಟು ಜನ ಇರುವಾಗ ಈ ಕುಟುಂಬ ನೂರು ವರ್ಷ ಪೂರೈಸಿರುವ ನಿಂಗಮ್ಮ ಅವರ ಹುಟ್ಟುಹಬ್ಬ ಸಂಭ್ರಮದಿಂದ ಆಚರಿಸಿ ಇತರರಿಗೂ ಮಾದರಿಯಾಗಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ