ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಅದೊಂದು ಖತರ್ನಾಕ್ ಗ್ಯಾಂಗ್. ಹಳ್ಳಿಗಳಲ್ಲಿ ರಂಗೋಲಿ ಹಾಗೂ ಫಿನಾಯಲ್ ಮಾರುವ ನೆಪದಲ್ಲಿ ಬೀಗ ಹಾಕಿರೋ ಮನೆಗಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು, ಮತ್ತೊಂದೆಡೆ ಎದುರಿಗೆ ಸಿಗುವ ಮಹಿಳೆಯರ ಮಾಂಗಲ್ಯ ಸರಗಳನ್ನ ಕ್ಷಣಾರ್ಧದಲ್ಲಿ ಎಗರಿಸಿ ಎಸ್ಕೇಪ್ ಆಗುತ್ತಿದ್ರು, ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿದ್ದಾರೆ.

ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ರಾಮನಗರ ಮನೆ, ಸರಗಳ್ಳರ ಬಂಧನ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 09, 2023 | 2:14 PM

ರಾಮನಗರ: ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್​ಗಳು ಕೊನೆಗೂ ಪೊಲೀಸರ ಖೆಡ್ಡಾಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ ಜನವರಿ 20ರಂದು ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಹೋಗುತ್ತಿದ್ದ ಐವರು ಮಹಿಳೆಯರಲ್ಲಿ ಪ್ರೇಮಾ ಹಾಗೂ ಚನ್ನಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕೊನೆಗೂ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಬೆಂಗಳೂರಿನ ಅಂದರಹಳ್ಳಿ ನಿವಾಸಿ ಸುದೀಪ್, ಮೈಸೂರು ಜಿಲ್ಲೆ ಟೀ ನರಸಿಪುರ ತಾಲೂಕಿನ ಚಾಮೇನಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಆತನ ತಂದೆ ನಂಜುಂಡ, ತಾಯಿ ರಾಜೇಶ್ವರಿ ಎಂಬುವವರನ್ನ ಬಂಧಿಸಿ, ಒಟ್ಟು 11 ಪ್ರಕರಣಗಳನ್ನ ಭೇದಿಸಿ ಸುಮಾರು 20 ಲಕ್ಷ ರೂ ಮೌಲ್ಯದ 358 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ಸೋನಿ ಕ್ಯಾಮರಾ ಹಾಗೂ ಒಂದು ಬೈಕ್ ಅನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಕರಣ ಸಂಬಂಧ ಗಣೇಶ್ ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಈ ಖತರ್ನಾಕ್ ಕಳ್ಳರು ಕಳ್ಳತನ ಮಾಡಲು ಹೊಸ ಮಾರ್ಗ ಅಯ್ದುಕೊಂಡಿದ್ರು. ಪರಾರಿಯಾಗಿರೋ ಆರೋಪಿ ಗಣೇಶ್ ಎಂಬಾತ ಗ್ರಾಮೀಣ ಭಾಗದಲ್ಲಿ ರಂಗೋಲಿಪುಡಿ ಹಾಗೂ ಫಿನಾಯಲ್ ಮಾರುವ ನೆಪದಲ್ಲಿ ಹಳ್ಳಿಗಳಲ್ಲಿ ಸಂಚರಿಸುತ್ತಿದ್ದ. ಈ ವೇಳೆ ಹಳ್ಳಿಗಳಲ್ಲಿ ಬೀಗ ಹಾಕಿರೋ ಮನೆಗಳನ್ನ ಗುರುತಿಸಿ, ಸುದೀಪ್ ಹಾಗೂ ಮಂಜುನಾಥ್​ಗೆ ತಿಳಿಸುತ್ತಿದ್ದ. ಇಬ್ಬರು ಸಹ ಪಲ್ಸರ್ ಬೈಕ್​ನಲ್ಲಿ ಬಂದು ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ ಚಿನ್ನಾಭರಣಗಳನ್ನ ದೋಚುತ್ತಿದ್ದರು. ಇನ್ನು ಗ್ರಾಮೀಣ ಭಾಗದಲ್ಲಿ ಮಹಿಳೆಯರು ಬರುವ ವೇಳೆ ಅವರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದರು.

ಇದನ್ನೂ ಓದಿ:Crime News: ಜೈಲಿನಲ್ಲಿದ್ದ ಸ್ನೇಹಿತನ ಬಿಡಿಸಿಕೊಳ್ಳಲು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಮನೆಗಳ್ಳರ ಬಂಧನ

ಇನ್ನು ಕದ್ದ ಚಿನ್ನಾಭರಣಗಳನ್ನ ಮಂಜುನಾಥ್​ನ ತಂದೆ ನಂಜುಂಡ ಹಾಗೂ ತಾಯಿ ರಾಜೇಶ್ವರಿ ಕೈಗೆ ಕೊಟ್ಟು ಅದನ್ನ ಚಿನ್ನಾಭರಣ ಅಂಗಡಿಗಳಲ್ಲಿ ಮಾರಾಟ ಮಾಡಿಸುತ್ತಿದ್ದರು. ಇದೇ ರೀತಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಲ್ಲಿ ಕಳ್ಳತನ ಮಾಡಿದ್ದಾರೆ. ಪ್ರಕರಣದ ಆರೋಪಿ ಸುದೀಪ್ ಪೊಲೀಸರಿಗೆ ಗುರುತು ಸಿಗಬಾರದು ಎಂದು ಕಳ್ಳತನ ಮಾಡಿದ ನಂತರ ತಲೆ ಬೋಡು ಹೊಡಿಸಿಕೊಳ್ಳುತ್ತಿದ್ದ. ಆದರೆ ಕೊನೆಗೂ ಆರೋಪಿಗಳು ಅಂದರ್ ಆಗಿದ್ದಾರೆ. ಒಟ್ಟಾರೆ ಗ್ರಾಮೀಣ ಭಾಗದಲ್ಲಿ ಮನೆ ಹಾಗೂ ಸರಗಳ್ಳತನ ಮಾಡುತ್ತಿದ್ದ ಟೀಂ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ ಟಿವಿ9 ರಾಮನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!