ರಾಮನಗರ: ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ, ಯುವತಿ ದುರ್ಮರಣ
ಕನಕಪುರ(Kanakapura) ತಾಲೂಕಿನ ಕೆಬ್ಬಹಳ್ಳಿ ಬಳಿ ತಡರಾತ್ರಿ ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ಇಬ್ಬರು ಕೂಡ ಕಾರಿನಲ್ಲಿ ಕನಕಪುರದಿಂದ ಸ್ವಗ್ರಾಮ ಕೆಬ್ಬಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಈ ಕುರಿತು ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಮನಗರ, ಡಿ.10: ಮಿನಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ(Kanakapura) ತಾಲೂಕಿನ ಕೆಬ್ಬಹಳ್ಳಿ ಬಳಿ ತಡರಾತ್ರಿ ನಡೆದಿದೆ. ದೀಪಕ್(25) ಮತ್ತು ಶೈಲಾ(22) ಮೃತ ರ್ದುದೈವಿಗಳು. ಶೈಲಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ದೀಪಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇನ್ನು ಇಬ್ಬರು ಕೂಡ ಕಾರಿನಲ್ಲಿ ಕನಕಪುರದಿಂದ ಸ್ವಗ್ರಾಮ ಕೆಬ್ಬಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಈ ಕುರಿತು ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
2 ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ
ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನು ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ:ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣ; ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ಭಯಾನಕ ವಿಡಿಯೋ
ಅಪಘಾತದಿಂದ ಎರಡು ಬಸ್ಸಿನ ಚಾಲಕರು ಸೇರಿದಂತೆ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಅಂಕು-ಡೊಂಕಾದ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಇನ್ನು ಈ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:45 pm, Sun, 10 December 23