ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಕಾರಿನಲ್ಲಿದ್ದ ಆರು ಜನ ದುರ್ಮರಣ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2023 | 9:29 PM

Ramanagara News: ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಕಾರಿನಲ್ಲಿದ್ದ ಆರು ಜನ ದುರ್ಮರಣ
ಕೆಎಸ್​ಆರ್​ಟಿಸಿ ಬಸ್​ ಹಾಗೂ ಕಾರಿನ‌ ನಡುವೆ ಅಪಘಾತ
Follow us on

ರಾಮನಗರ, ಆಗಸ್ಟ್​ 28: ಕೆಎಸ್‌ಆರ್‌ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ನಾಗೇಶ್, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಗೋವಿಂದ, ಕುಮಾರ ಸೇರಿದಂತೆ ಮತ್ತೊಬ್ಬರು ಮೃತರು. ಮೃತಪಟ್ಟ 6 ಜನರ ಪೈಕಿ 4 ಜನ ವಿಧಾನಸೌಧ ಸಿಬ್ಬಂದಿಗಳು. ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ. ಸದ್ಯ ಮೃತದೇಹಗಳನ್ನು ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಲಾರಿ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು: ನಾಲ್ವರಿಗೆ ಗಂಭೀರ ಗಾಯ

ಬೀದರ್​: ಆಟೋಗೆ ಲಾರಿ ಡಿಕ್ಕಿ ಹೊಡಿದಿದ್ದು, ಮಹಾರಾಷ್ಟ್ರ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಗಾಯಾಳುಗಳನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಮಹಾರಾಷ್ಟ್ರದ ಮುರುಮ್ ಗ್ರಾಮದವರಾದ ಇವರು ಆಟೋದಲ್ಲಿ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಬಳಿಯ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡಕ್ಕೆ ದರ್ಶನಕ್ಕೆಂದು ಆಗಮಿಸಿದ್ದರು. ದರ್ಶನ ಮುಗಿಸಿಕೊಂಡು ಗ್ರಾಮಕ್ಕೆ ಮರಳುವಾಗ ರಸ್ತೆ ಅಪಘಾತ ಸಂಭವಿಸಿದೆ. ಬಸವಕಲ್ಯಾಣದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆಲೆಮನೆಗೆ ಆಕಸ್ಮಿಕ ಬೆಂಕಿ: 3 ಹಸು, 1 ಮೇಕೆ ಸಾವು

ಮಂಡ್ಯ: ಪಾಂಡವಪುರ ತಾಲೂಕಿನ ದೇವೇಗೌಡನಕೊಪ್ಪಲು ಗ್ರಾಮದಲ್ಲಿ ಆಲೆಮನೆಗೆ ಆಕಸ್ಮಿಕ ಬೆಂಕಿ ತಗುಲಿ 3 ಹಸು, 1 ಮೇಕೆ ಸಜೀವದಹನವಾಗಿರುವಂತಹ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ 1 ಟ್ರ್ಯಾಕ್ಟರ್ ಸೇರಿದಂತೆ ಹಲವು ಸಾಮಗ್ರಿ ನಾಶವಾಗಿವೆ. ಉಮೇಶ್ ಎಂಬುವರಿಗೆ ಆಲೆಮನೆ  ಸೇರಿತ್ತು. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕ್ಯಾಂಟರ್​​ನ​​ ಚಕ್ರದ ಕೆಳಗೆ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕ್ಯಾಂಟರ್ ಕೆಳಗೆ‌ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಆತ್ಮಹತ್ಯೆಯ ದೃಶ್ಯ ಸಿಸಿಟಿವಿ‌ಯಲ್ಲಿ ಸೆರೆ ಆಗಿದೆ. ಮೃತನ ಗುರುತು ಹಾಗೂ ಆತ್ಮಹತ್ಯೆಗೆ ಕಾರಣ ಪತ್ತೆಯಾಗಿಲ್ಲ, ಆದರೆ ಸುಮಾರು 45 ರಿಂದ 50 ವರ್ಷ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:46 pm, Mon, 28 August 23