ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ರದ್ದು: ಇದೊಂದು ಗಾಯವಾಗಿ ಉಳಿದುಕೊಂಡಿದೆ ಎಂದ ಶಿವಕುಮಾರ್

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ರದ್ದಾಗಿದ್ದು, ನನಗೆ ನೋವು ಆಗಿ ಇದೊಂದು ಗಾಯವಾಗಿ ಉಳಿದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೋವಿನ ಮಾತುಗಳನ್ನಾಡಿದ್ದಾರೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ರದ್ದು: ಇದೊಂದು ಗಾಯವಾಗಿ ಉಳಿದುಕೊಂಡಿದೆ ಎಂದ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್Image Credit source: hindustantimes.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 12, 2023 | 4:02 PM

ರಾಮನಗರ: ಸಚಿವ ಸುಧಾಕರ್ (Sudhakar) ಅವರ ಕ್ಷೇತ್ರದ ಕೆಲಸ ಮಾಡಿದ್ದಾರೆ. ಬಜೆಟ್​​ನಲ್ಲಿ ರಾಮನಗರಕ್ಕೆ ಮೆಡಿಕಲ್ ಕಾಲೇಜು ಘೋಷಣೆ ಆಗಿತ್ತು. ಆದರೆ ಬಳಿಕ ಅವರು ಮಾತು ತಪ್ಪಿದರು. ಸುಧಾಕರ್​ ನಮ್ಮ ಜಿಲ್ಲೆಗೆ ಬಂದಿದ್ದ ಮೆಡಿಕಲ್ ಕಾಲೇಜು ಕಿತ್ತುಕೊಂಡ್ರು ಎಂದು ಡಿ.ಕೆ.ಸುರೇಶ್​ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದರು. ಜಿಲ್ಲೆಯ ಕನಕಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ರದ್ದಾಗಿದ್ದು, ನನಗೆ ನೋವು ಆಗಿ ಇದೊಂದು ಗಾಯವಾಗಿ ಉಳಿದುಕೊಂಡಿದೆ. ಬಜೆಟ್​ನಲ್ಲಿ ಪಾಸ್ ಆಗಿ ಹಣ ಬಿಡುಗಡೆಯಾಗಿ ಟೆಂಡರ್ ಸಹ ಆಗಿತ್ತು. ಅಂತಹ ವೇಳೆ ವಾಪಸ್ ಪಡೆದಿದ್ದು ನೋವಾಗಿ, ಗಾಯವಾಗಿ ಉಳಿದಿದೆ ಎಂದು ಹೇಳಿದರು.

ಸರ್ಕಾರಿ ಶಾಲೆ ಅಭಿವೃದ್ಧಿ ಮಾಡುವಂತೆ ಡಿಕೆಶಿ ಮನವಿ

ಮನುಷ್ಯನ ಹುಟ್ಟು ಆಕಸ್ಮಿಕ, ಜನನ ಉಚಿತ, ಮರಣ ಖಚಿತ. ಕನಕಪುರ ಗಡಿಭಾಗದ 10 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡುವಂತೆ ಇನ್ಫೋಸಿಸ್ ಸಂಸ್ಥೆಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡರು.​ ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಶಾಶ್ವತ ಅಲ್ಲ. ನಿಮ್ಮ ಕೈಯಲ್ಲಿ ಪೆನ್ ಆಗಲಿ, ಅಧಿಕಾರ ಆಗಲಿ ಹೆಚ್ಚು ದಿನ ಇರಲ್ಲ. ಇನ್ನು 50‌ ದಿನ ಇರುತ್ತಿರೋ, 90 ದಿನ ಇರುತ್ತಿರೋ ನನಗೆ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಎದುರೇ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ ಕಿಡಿಕಾರಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಡಿಕೆ ಶಿವಕುಮಾರ್ ಕವನ ವಾಚನಕ್ಕೆ ವ್ಹಾ ವ್ಹಾ ಎಂದ ಜನ: ಬಿಜೆಪಿ, ಜೆಡಿಎಸ್​ಗೆ ಟಾಂಗ್​

ದಯವಿಟ್ಟು ಆಸ್ಪತ್ರೆಗೆ ಮೂಲಭೂತ ಸೌಕರ್ಯ ಒದಗಿಸಿ

ನಾನು ಸಚಿವ ಡಾ.ಕೆ.ಸುಧಾಕರ್ ಜೊತೆ ವೇದಿಕೆ ಹಂಚಿಕೊಂಡಿದ್ದೇನೆ. ಹಿಂದೆ ಬಿ.ಎಸ್​.ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಜೊತೆ ವೇದಿಕೆ ಹಂಚಿಕೊಂಡಾಗ 5 ಸಾವಿರ ಪೊಲೀಸರಿದ್ದರು. ಕ್ಷೇತ್ರದಲ್ಲಿ ರಾಜಕಾರಣಿಗಳ ಜತೆ ವೇದಿಕೆ ಹಂಚಿಕೊಳ್ಳೋದು ಅಪರೂಪ. ಇಂದು ಆರೋಗ್ಯ ಸಚಿವರ ಜೊತೆ ವೇದಿಕೆ ಹಂಚಿಕೊಂಡಿದ್ದೇನೆ ಅಂದರೆ ಅದು ನಿಮ್ಮ ಮೇಲಿನ ವಿಶ್ವಾಸ. ದಯವಿಟ್ಟು ಆಸ್ಪತ್ರೆಗೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡಿ ಎಂದು ಹೇಳಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಡಿಕೆಶಿ ಎಚ್ಚರಿಕೆ

ನನಗೆ ಡಿಸಿ, ಎಸ್​ಪಿ, ಜಿ.ಪಂ. ಸಿಇಒ ಯಾರು ಎಂಬುದೇ ಗೊತ್ತಿಲ್ಲ. ಆದರೆ ಅವರು ಆಡಿದ ಹಾಗೆ ಬಿಡಲಾಗಲ್ಲ ಎಂದು ಹೇಳಿದರು.​ಅವರ ಕೆಲಸಕ್ಕೆ ಅಡ್ಡಿಮಾಡಲ್ಲ, ಆದ್ರೆ ಸರಿಯಾಗಿ ಕೆಲಸ ಮಾಡಬೇಕು. ಏನಾದರೂ ವ್ಯತ್ಯಾಸ ಆದ್ರೆ ಅದು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ ತಾಕೀತು ಮಾಡಿದರು.

ಇದನ್ನೂ ಓದಿ: ಬಿಜೆಪಿಗೆ ಆಡಳಿತ ನಡೆಸಲು ಆಗಲ್ಲ, ವಿಪಕ್ಷದಲ್ಲಿರಲು ಸೂಕ್ತ: ಚಿತ್ರದುರ್ಗದಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ

ರಾಜ್ಯ ರಾಜಕಾರಣದ ಬಗ್ಗೆ ನನಗೆ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

ಸಂಸದ ಡಿ.ಕೆ.ಸುರೇಶ್​ ಮಾತನಾಡಿ, ರಾಜ್ಯ ರಾಜಕಾರಣದ ಬಗ್ಗೆ ನನಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟನೆ ನೀಡಿದರು. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ ಸಂಘಟನೆ ಮಾಡ್ತಿದ್ದೇನೆ. ನಾಲ್ಕೈದು ಕ್ಷೇತ್ರಗಳಲ್ಲಿ ನನಗೆ ಆಹ್ವಾನ ಬಂದಿರುವುದು ಸತ್ಯ. ಜವಾಬ್ದಾರಿ ಸ್ಥಾನದಲ್ಲಿ ಇರುವುದರಿಂದ ಬಿಟ್ಟು ಹೋಗಲು ಆಗಲ್ಲ. ಹೈಕಮಾಂಡ್ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:59 pm, Sun, 12 February 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ