ಕರ್ನಾಟಕದಲ್ಲಿ ಜಾನುವಾರುಗಳ ಮೇಲೆ ಕ್ರೌರ್ಯ ಹೆಚ್ಚಳ: ರಾಮನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಾಲಿನ ಡೈರಿ ಅಧ್ಯಕ್ಷರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿದೆ. ಆ ಮೂಲಕ ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂತಹ ಘಟನೆಗಳ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಜಾನುವಾರುಗಳ ಮೇಲೆ ಕ್ರೌರ್ಯ ಹೆಚ್ಚಳ: ರಾಮನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು
ಹಸು (ಸಂಗ್ರಹ ಚಿತ್ರ)
Edited By:

Updated on: Jun 21, 2025 | 1:17 PM

ರಾಮನಗರ, ಜೂನ್ 21: ಕರ್ನಾಟಕದಲ್ಲಿ (Karnataka) ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ (cow) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ ಪ್ರಾಣಿಯ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕೌರ್ಯ ಎಸಗುತ್ತಿದ್ದಾರೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿದೆ. ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವರಿಗೆ ಹಸು ಸೇರಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಬೆನ್ನಲ್ಲೇ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ: ಮಾರಕಾಸ್ತ್ರದಿಂದ ಬಾಲ ತುಂಡರಿಸಿ ದುಷ್ಕರ್ಮಿಗಳು ಪರಾರಿ

ಇದನ್ನೂ ಓದಿ
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಒಂದೇ ತಿಂಗಳಲ್ಲಿ ಕುಡಿತಕ್ಕೆ ಗ್ರಾಮದ ಐವರು ಬಲಿ, ಡಂಗುರ ಸಾರಿ ಜಾಗೃತಿ
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಕೆಆರ್​ಎಸ್​ಗೆ ಹೆಚ್ಚಿದ ಒಳಹರಿವು: ಕರ್ನಾಟಕದ ಜಲಾಶಯಗಳ ಮಟ್ಟದ ವಿವರ ಇಲ್ಲಿದೆ

ಗುರುಸಿದ್ದಪ್ಪ ಎಂಬುವರರ ಜಮೀನಿನಲ್ಲಿ ಹಸುವಿನ ಮೇಲೆ ಕೌರ್ಯ ಎಸಗಲಾಗಿದ್ದು, ಅವರ ವಿರುದ್ಧ ಹಸುವಿನ ಮಾಲೀಕ ಮರಿಬಸವಯ್ಯ ಆರೋಪ ಮಾಡಿದ್ದಾರೆ. ಈ ಹಿಂದೆ ಡೇರಿ ಅಧ್ಯಕ್ಷ ಚುನಾವಣೆ ವೇಳೆ  ಮರಿಬಸವಯ್ಯ ಮತ್ತು ಗುರುಸಿದ್ದಪ್ಪ ನಡುವೆ ವೈಮನಸ್ಸು ಏರ್ಪಟ್ಟಿತು. ಹೀಗಾಗಿ ಗುರುಸಿದ್ದಪ್ಪ ವಿರುದ್ಧ ಹಸುವಿನ ‌ಕೆಚ್ಚಲು ಕೊಯ್ದಿರುವ ಆರೋಪ ಮಾಡಲಾಗಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಘಟನೆ ನಡೆದಿದೆ.

ಕರ್ನಾಟಕದ ಹಲವೆಡೆ ಕೃತ್ಯ

  • ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿ ಕಿಡಿಗೇಡಿ ಕ್ರೌರ್ಯ ಮೆರೆದ ಘಟನೆ ಜನವರಿ 12ರಂದು ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ದೂರು ಸಹ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಸಾಕಷ್ಟು ಸುದ್ದಿಯಾಗಿತ್ತು.
  • ಬೆಂಗಳೂರಿನ ಘಟನೆ ಮಾಸುವ ಮುನ್ನವೇ ಜನವರಿ 12ರಂದು ಮೈಸೂರಿನಲ್ಲಿ ಸಹ ಮಚ್ಚಿನಿಂದ ಹಸುವಿನ ಬಾಲ ಕತ್ತರಿಸಿ ವಿಕೃತಿ ಮೆರೆಯಲಾಗಿತ್ತು.
  • ಇನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಹಸುವಿನ ತಲೆ ಕಡಿದು ಬಳಿಕ ಅದರ ದೇಹವನ್ನು ತೆಗೆದುಕೊಂಡು ಹೋಗಲಾಗಿತ್ತು. ಕೃಷ್ಣ ಆಚಾರಿ ಎಂಬುವವರಿಗೆ ಹಸು ಸೇರಿತ್ತು.

ಇದನ್ನೂ ಓದಿ: ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು

  • ಜೂನ್​ 13ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್​​ನಲ್ಲಿ ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆಯಲಾಗಿತ್ತು. ಬರಮಪ್ಪ ಎಂಬುವರಿಗೆ ಹಸು ಸೇರಿತ್ತು. ರಕ್ತಸ್ರಾವದಿಂದ ಬಳಲಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
  • ಮೇ 13 ರಂದು ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಹಸು ಕಳ್ಳತನ ಯತ್ನ ವಿಫಲವಾದಾಗ ರೋಷದಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಕಳ್ಳರು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us