ರಾಮನಗರ ಪೊಲೀಸರ ನಡೆಗೆ ಸಿಟ್ಟು: ಕೊಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ ನ್ಯಾಯಾಧೀಶರು

ರಾಮನಗರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಧೀಶರು ಮೂವರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳು ಜೈಲಿನಿಂದ ಹೊರಗೆ ಬರುವಂತಾಗಿದೆ. ಈ ಘಟನೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಮುಂದಿನ ನಡೆ ಏನು ಎಂಬುವುದು ಕಾದು ನೋಡಬೇಕಿದೆ.

ರಾಮನಗರ ಪೊಲೀಸರ ನಡೆಗೆ ಸಿಟ್ಟು: ಕೊಲೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ ನ್ಯಾಯಾಧೀಶರು
ಕೊಲೆ ಆರೋಪಿಗಳು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on:Dec 14, 2024 | 12:54 PM

ರಾಮನಗರ, ಡಿಸೆಂಬರ್​ 14: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಯ್ಯಾಲಯದ (Court) ವಿಚಾರಣೆಗೆ ಹಾಜರಾಗದ ಪೊಲೀಸರ ವಿರುದ್ಧ ಆಕ್ರೋಶಗೊಂಡ ನ್ಯಾಯಾಧೀಶರು (Judge) ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಚಂದು, ಮುರುಳಿ, ನಾಗೇಶ್ ಜೈಲಿನಿಂದ ಹೊರ ಬಂದ ಆರೋಪಿಗಳು. ರಾಮನಗರ ಹೊರವಲಯದಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿ ಪುನಿತ್ ಕೊಲೆ ಆಗಿತ್ತು.

ನವೆಂಬರ್​ 26 ರಂದು ಕೆಲ ವಿದ್ಯಾರ್ಥಿಗಳು ಬ್ಯಾಚುಲರ್ ಪಾರ್ಟಿಗಾಗಿ ರಾಮನಗರ ಹೊರವಲಯದಲ್ಲಿನ ರೆಸಾರ್ಟ್​ಗೆ‌ ಬಂದಿದ್ದರು. ಈ ವೇಳೆ ರೆಸಾರ್ಟ್​ ಒಳಗೆ ಮೂವರು ಆರೋಪಿಗಳು ನುಗ್ಗಿದ್ದರು. ಎ1 ಚಂದು ಎಂಬುವನು ಪುನೀತ್ ಮೇಲೆ ಹಲ್ಲೆ‌ ಮಾಡಿದ್ದನು. ಬಳಿಕ ಮೂವರು ಸೇರಿಕೊಂಡು ಪುನಿತ್​​ ಮೇಲೆ ಹಲ್ಲೆ‌ ಮಾಡಿ ಕೊಲೆ ಮಾಡಿದ್ದರು. ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಹಲ್ಲೆ ಆರೋಪದಲ್ಲಿ ಚಂದ್ರು, ಮುರುಳಿ ಮತ್ತು ನಾಗೇಶ್​ನನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ರಿಮ್ಯಾಂಡ್ (ಪೊಲೀಸ್​ ಬಂಧನ ವಿಸ್ತರಣಾ) ಅರ್ಜಿಯನ್ನು ರಾಮನಗರದ ಸೀನಿಯರ್ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ಆದರೆ, ರಿಮ್ಯಾಂಡ್​ ಅರ್ಜಿಯನ್ನು ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮತ್ತು ನ್ಯಾಯಾಲಯದ ಕಲಾಪ‌ ಪ್ರಾರಂಭವಾದರೂ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಪೊಲೀಸರು ಹಾಜರಾಗಲಿಲ್ಲ. ಇದರಿಂದ ಕೋಪಗೊಂಡು  ತನಿಖೆ ಯಾಕೆ ಬೇಕು ಅಂತ‌ ಕೊಲೆ ಆರೋಪ ಎದುರಿಸುತ್ತಿದ್ದ ಮೂವರನ್ನೂ ಬಿಟ್ಟು ಕಳಿಸುವಂತೆ ನ್ಯಾಯಾಧೀಶ ಗುಲ್ಜಾರ್ ಲಾಲ್ ಡಿ ಮಹಾವರ್ಕರ್ ಅವರು ಡಿಸೆಂಬರ್​ 6 ರಂದು ಆದೇಶ ಹೊರಡಿಸಿದರು.

ಇದೆ ವೇಳೆ, ಪೊಲೀಸರು ಅರ್ಜಿಸಲ್ಲಿಸಿದರೆ ಆಗ ಬಂಧಿಸುವಂತೆ ಆದೇಶಿಸಿದರು. ನ್ಯಾಯಾಲಯದ ಆದೇಶ ಸಿಕ್ಕ ಬೆನ್ನಲ್ಲೆ ಮೂವರು ಕೊಲೆ ಆರೋಪಿಗಳನ್ನು ರಾಮನಗರ ಜೈಲು ಅಧಿಕಾರಿಗಳು ಬಿಟ್ಟು ಕಳುಹಿಸಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ಮೂವರು ಆರೋಪಿಗಳು ಜೈಲಿನಿಂದ ಹೊರ ಬಂದಿದ್ದಾರೆ. ನ್ಯಾಯಾದೀಶರ ಈ ಆದೇಶ ದೇಶದಲ್ಲೇ ಅತಿ ಅಪರೂಪ ಆದೇಶವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 14 December 24