AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ರಾಮನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಹರಿದಿರುವ ರಾಷ್ಟ್ರಧ್ವಜ ಹಾರುತ್ತಿದೆ. ಆ ಮೂಲಕ ಜಿಲ್ಲಾಧಿಕಾರಿ ಕಚೇರಿಯಿಂದಲೇ ಧ್ವಜಸಂಹಿತೆ ಉಲ್ಲಂಘನೆ ಮಾಡಿರುವಂತಹ ಘಟನೆ ಒಂದು ಜಿಲ್ಲೆಯಲ್ಲಿ ಕಂಡುಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ
ಹರಿದ ತ್ರಿವರ್ಣ ಧ್ವಜ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 20, 2023 | 9:18 PM

Share

ರಾಮನಗರ, ಜುಲೈ 20: ಹರಿದ ಧ್ವಜ (national flag) ವನ್ನು ಹಾರಾಟ ಮಾಡುವುದು ಧ್ವಜಸಂಹಿತೆಯ ಪ್ರಕಾರ ನಿಷೇಧ. ಆದರೆ ಜಿಲ್ಲಾಧಿಕಾರಿ ಕಚೇರಿಯಿಂದಲೇ ಧ್ವಜಸಂಹಿತೆ ಉಲ್ಲಂಘನೆ ಮಾಡಿರುವಂತಹ ಘಟನೆ ಒಂದು ಜಿಲ್ಲೆಯಲ್ಲಿ ಕಂಡುಬಂದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಹರಿದಿರುವ ರಾಷ್ಟ್ರಧ್ವಜ ಹಾರುತ್ತಿದೆ. ಜಿಲ್ಲಾ ಆಡಳಿತದ ಶಕ್ತಿ ಕೇಂದ್ರವಾಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹತ್ತಾರು ಇಲಾಖೆಗಳಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರತಿದಿನ ಧ್ವಜಾರೋಹಣ ಮತ್ತು ಅವರೋಹಣ ಮಾಡುವಾಗಲೂ ಧ್ವಜ ಹರಿದಿರುವುದನ್ನು ಜಿಲ್ಲಾಡಳಿತ ಗಮನಿಸದೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದು, ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಹರಿದಿರುವ ಧ್ವಜ ಹಾರಿಸಬಾರದು‌‌ ಎಂದು ನಿಯಮಾವಳಿ ಇದೆ. ಒಂದು ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ‌ ಮಾಡಿದರೆ ಶಿಕ್ಷೆಗೂ ಗುರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮುಂದುವರಿದ ಪೊಲೀಸ್ “ದಂಡಯಾತ್ರೆ”

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪೊಲೀಸ್​ ದಂಡಯಾತ್ರೆ ಮುಂದುವರೆದಿದ್ದು, 15 ದಿನದಲ್ಲಿ 16‌2400 ದಂಡ ವಸೂಲಿ ಮಾಡಲಾಗಿದೆ. 2340‌ಸಂಚಾರಿ ಉಲ್ಲಂಘನೆ ಕೇಸ್ ದಾಖಲಾಗಿದೆ. 887‌ ಓವರ್ ಸ್ಪೀಡ್, 580‌ಲೇನ್ ಡಿಸಿಪ್ಲೇನ್, 189‌ ಸೀಟ್ ಬೆಲ್ಟ್ ಧರಿಸದೇ‌ ಇರುವುದು, 224‌ ಹೆಲ್ಮೆಟ್ ರಹಿತ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Bengaluru-Mysore Expressway Accident: ಮೊದಲ ಹಂತದ ಸಮೀಕ್ಷೆ ಪೂರ್ಣಗೊಳಿಸಿದ ಎನ್​ಹೆಚ್ಎ​ಐನ ವಿಶೇಷ ಸಮಿತಿ

ವೇಗಕ್ಕೆ ಬ್ರೇಕ್ ಬಿದ್ದ ನಂತರ ಅಪಘಾತಗಳ ಸಂಖ್ಯೆ ತುಸು ಇಳಿಮುಖವಾಗಿದ್ದು, ಕಳೆದ 20‌ ದಿನಗಳಿಂದ  ರಾಮನಗರ ಪೊಲೀಸರ ಕಾರ್ಯಾಚರಣೆ ನಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:11 pm, Thu, 20 July 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು