Bomb Threat: ಬೆಂಗಳೂರು ಆಯ್ತು ಈಗ ಕಗ್ಗಲಿಪುರ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ

| Updated By: Ganapathi Sharma

Updated on: May 14, 2024 | 2:43 PM

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಬೆದರಿಕೆ ಕರೆ, ಸಂದೇಶಗಳ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

Bomb Threat: ಬೆಂಗಳೂರು ಆಯ್ತು ಈಗ ಕಗ್ಗಲಿಪುರ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ
ಕಗ್ಗಲಿಪುರ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ
Follow us on

ರಾಮನಗರ, ಮೇ 14: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ದಾಳಿ (Bomb Threat) ಬೆದರಿಕೆಯುಳ್ಳ ಇ ಮೇಲ್ ಸಂದೇಶ ಬಂದ ಪ್ರಕರಣದ ಬೆನ್ನಲ್ಲೇ ಇದೀಗ ಕಗ್ಗಲಿಪುರದ ಈಡಿಫೈ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರ (Kaggalipura) ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.

ಶಾಲೆಯ ಆಡಳಿತ ಮಂಡಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ‌ ಕಗ್ಗಲಿಪುರ ಪೊಲೀಸರ ದೌಡಾಯಿಸಿದ್ದು, ಶ್ವಾನ ದಳ, ಮೆಟಲ್ ಡಿಟೆಕ್ಟರ್​​ನಿಂದ ಇಡೀ ಆವರಣ ಪರಿಶೀಲನೆ ನಡೆಸಲಾಗಿದೆ. ಹುಸಿ ಬಾಂಬ್ ಸಂದೇಶ ಎಂಬುದು ಖಚಿತವಾದ ನಂತರವೂ ಮುನ್ನೆಚ್ಚರಿಕಾ ಕ್ರಮವಾಗಿ ಪರಿಶೀಲನೆ ನಡೆಸಲಾಯಿತು.

ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಸೋಮವಾರ ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ದಾಳಿ ಬೆದರಿಕೆಯುಳ್ಳ ಸಂದೇಶ ಬಂದಿತ್ತು. ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್​ ಪರಿಶೀಲಿಸಿದಾಗ ಬಾಂಬ್​ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿತ್ತು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ಬಳಿಕ ಇದು ಹುಸಿ ಬೆದರಿಕೆ ಎಂಬುದು ಗೊತ್ತಾಗಿತ್ತು.

ಕಳೆದ ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಈ ಮಧ್ಯೆ, ದೆಹಲಿಯ ನಾಲ್ಕು ಆಸ್ಪತ್ರೆಗಳಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದಾದ ಬಳಿಕವೂ ಕೆಲವು ಬಾರಿ ಹುಸಿ ಬಾಂಬ್ ದಾಳಿ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ