Ramanagara: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐವರು ವಿದ್ಯಾರ್ಥಿಗಳು ನೀರುಪಾಲು
ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.
ರಾಮನಗರ, ಏಪ್ರಿಲ್ 29: ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು (students) ನೀರುಪಾಲಾಗಿರುವಂತಹ (death) ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಹರ್ಷಿತಾ (18), ತೇಜಸ್ (19), ವರ್ಷಾ (18), ಸ್ನೇಹಾ (19), ಅಭಿಶೇಕ್ (19) ಮೃತರು. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.
ತೀವ್ರ ಬಿಸಿಲಿನಿಂದಾಗಿ ಕುಸಿದು ಬಿದ್ದು ಮಹಿಳೆ ಸಾವು
ಯಾದಗಿರಿ: ತೀವ್ರ ಬಿಸಿಲಿನಿಂದಾಗಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಕುರಕುಂದಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹಣಮಂತಿ (60) ಮೃತ ಕಾರ್ಮಿಕ ಮಹಿಳೆ. ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದರು. ಬಿಸಿಲಿನಲ್ಲೇ ಕೆಲಸ ಮಾಡುತ್ತಿದ್ದರು. ಹೀಗಾಗಿ ಅಧಿಕ ಬಿಸಿಲಿನಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ ರಥೋತ್ಸವ ವೇಳೆ ಅವಘಡ: ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ
ಮಹಿಳೆಯ ಮೃತದೇಹ ಯಾದಗಿರಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಡಗೇರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟಿವಿ9 ಜೊತೆ ವಡಗೇರ ತಾಲೂಕು ಪಂಚಾಯತಿ ಇಒ ಪ್ರತಿಕ್ರಿಯಿಸಿದ್ದು, ಮೃತ ಕೂಲಿ ಕಾರ್ಮಿಕ ಮಹಿಳೆ ಅಸ್ತಮಾದಿಂದ ಬಳಲುತ್ತಿದ್ದರೂ ಕೂಡ ಕೆಲಸ ಮಾಡಲು ಬಂದಿದ್ದರು ಎಂದು ಹೇಳಿದ್ದಾರೆ.
ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು
ಚಿಕ್ಕಮಗಳೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವನ್ನಪ್ಪಿರುವಂತಹ ಘಟನೆ ತರೀಕೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ರೈಲ್ವೆ ಪೊಲೀಸರಿಂದ ಸ್ಥಳ ಪರಿಶೀಲನೆ ಮಾಡಿದ್ದು, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯುವಕನ ಗುರುತು ಪತ್ತೆಗಾಗಿ ರೈಲ್ವೆ ಪೊಲೀಸರಿಂದ ಹರಸಾಹಸ ಪಟ್ಟಿದ್ದಾರೆ.
ಸಿಡಿಲು ಬಡಿದು ಹದಿನಾರು ವರ್ಷದ ಬಾಲಕ ಸಾವು
ಕೊಪ್ಪಳ: ಸಿಡಿಲು ಬಡಿದ ಪರಿಣಾಮ ಹದಿನಾರು ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸುತ್ತಿದ್ದ ಶ್ರೀನಿವಾಸ್ ಗೊಲ್ಲರ್ಗೆ ಸಿಡಿಲು ಬಡಿದಿದ್ದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲಬುರ್ಗಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:44 pm, Mon, 29 April 24