ರಾಮನಗರದಲ್ಲಿ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮಧ್ಯೆ ಸರ್ಕಸ್!

ಗ್ರಾಮೀಣ ಪ್ರದೇಶದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ, ಸೌಲಭ್ಯವಿಲ್ಲದೇ ಇರುವುದರಿಂದ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕೆಂದು ರಾಮನಗರಕ್ಕೆ ವಿದ್ಯಾರ್ಥಿಗಳು ಬರುತ್ತಾರೆ.

ರಾಮನಗರದಲ್ಲಿ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮಧ್ಯೆ ಸರ್ಕಸ್!
ರಾಮನಗರದಲ್ಲಿ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 09, 2022 | 2:51 PM

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರೋ ರೇಷ್ಮೆನಗರಿ ರಾಮನಗರ (ramanagara) ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಗೋಳನ್ನ ಕೇಳುವವರು ಯಾರೂ ಇಲ್ಲ. ರಾಜಕೀಯವಾಗಿ ಘಟಾನುಘಟಿ ನಾಯಕರುಗಳು ಇದ್ದರೂ, ವಿದ್ಯಾರ್ಥಿಗಳ ಸಮಸ್ಯೆಯನ್ನ ಬಗೆಹರಿಸುವವರು ಇಲ್ಲದಂತೆ ಆಗಿದೆ. ಹೀಗಾಗಿ ವಿದ್ಯಾರ್ಥಿಗಳು ಒಂಡೆದೆ ಪ್ರಾಣದ ಹಂಗು ತೊರೆದು ಬಸ್ ಗಳಲ್ಲಿ ಹೋಗುವ ಪರಿಸ್ಥಿತಿ. ಮತ್ತೊಂಡೆದೆ ಬಸ್ ಗಾಗಿ (bus) ಪ್ರತಿಭಟನೆ ನಡೆಸುವ ದುಸ್ಥಿತಿ ಎದುರಾಗಿದೆ. ಬಸ್ ಗಾಗಿ ಕಾಯುತ್ತ ನಿಂತಿರೋ ವಿದ್ಯಾರ್ಥಿಗಳು (students)-ಪ್ರಾಣದ ಹಂಗು ತೋರೆದು ಸಾರಿಗೆ ಬಸ್ ನ ಫುಟ್ಬೋರ್ಡ್ ನಲ್ಲಿ ಪ್ರಯಾಣಿಸುತ್ತಿರೋ (public transportation) ಸ್ಟೂಡೆಂಟ್ಸ್-ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರೋ ಕಾಲೇಜುಗಳು ವಿದ್ಯಾರ್ಥಿಗಳು… ಅಂದಹಾಗೆ ಇಂತಹ ದೃಶ್ಯ ಕಂಡು ಬಂದಿದ್ದು, ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ.

ಹೌದು ರಾಮನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಗೋಳನ್ನ ಕೇಳುವವರೇ ಇಲ್ಲದಂತೆ ಆಗಿದೆ. ವಿದ್ಯಾರ್ಥಿಗಳ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಅಂದಹಾಗೆ ಪ್ರತಿನಿತ್ಯ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಕಾಲೇಜಿಗೆಂದು ಬರುತ್ತಾರೆ. ಆದರೆ ವಿವಿಧ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು, ನಗರ ಪ್ರದೇಶದಲ್ಲಿರೋ ದೂರದ ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಗಳ ಸೌಲಭ್ಯವಿಲ್ಲ.

ಹೆಚ್ಚುವರಿ ಸಾರಿಗೆ ಬಸ್ ಗಳ ಸೌಲಭ್ಯವಿಲ್ಲದೇ ಇರುವುದರಿಂದ ಸಿಕ್ಕ ಸಿಕ್ಕ ಸರ್ಕಾರಿ ಬಸ್ ಗಳ ಫುಟ್ ಬೋರ್ಡ್ ನಲ್ಲಿ ನಿಂತು, ಬಸ್ ಗಳಲ್ಲಿ ಜೋತು ಬಿದ್ದು, ಪ್ರಾಣದ ಹಂಗು ತೊರೆದು ಬಸ್ ನಲ್ಲಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲ ಬಸ್ ಗಳಂತೂ ನಿಲ್ಲಿಸುತ್ತಿಲ್ಲ. ಹೀಗಾಗಿ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಸಹಾ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಿಲ್ಲದಂತೆ ಆಗಿದೆ. ಬೇರೆ ದಾರಿಯಿಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆಯ ದಾರಿ ಹಿಡಿದ್ದಿದ್ದಾರೆ.

ಅಂದಹಾಗೆ ಗ್ರಾಮೀಣ ಪ್ರದೇಶದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ, ಸೌಲಭ್ಯವಿಲ್ಲದೇ ಇರುವುದರಿಂದ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕೆಂದು ರಾಮನಗರಕ್ಕೆ ವಿದ್ಯಾರ್ಥಿಗಳು ಬರುತ್ತಾರೆ.

ಇದನ್ನೂ ಓದಿ: Tv9 Exclusive: ಹಿಂದೂ ಪದಕ್ಕೆ ಹೀನಾರ್ಥವಿದೆ ಎಂದ ಸತೀಶ್ ಜಾರಕಿಹೊಳಿ ಹೇಳಿಕೆ ಭಾರತದ ಪರಂಪರೆಗೆ ಮಾಡಿದ ಅವಮಾನ; ಜಿ.ಬಿ.ಹರೀಶ್, ಶೆಲ್ವಪಿಳ್ಳೆ ಅಯ್ಯಂಗಾರ್

ಇದನ್ನೂ ಓದಿ: T20 World Cup 2022: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ಗೆ ಅಂಪೈರ್​ಗಳನ್ನು ಪ್ರಕಟಿಸಿದ ಐಸಿಸಿ: ಇಲ್ಲಿದೆ ಪಟ್ಟಿ ಆದರೆ ವಿವಿಧ ಕಾಲೇಜುಗಳಿಗೆ ತೆರಳಲು ಹೆಚ್ಚುವರಿ ಬಸ್ ಗಳ ಸೌಲಭ್ಯ ಸಹಾ ಇಲ್ಲ. ಹೀಗಾಗಿ ಕಾಲೇಜಿಗೆ ಹೋಗಲೇಬೇಕಾದ ಅನಿವಾರ್ಯ ಇರುವುದರಿಂದ ಸಿಕ್ಕ ಬಸ್ ಗಳಲ್ಲೇ ಪ್ರಾಣದ ಹಂಗು ತೊರೆದು ಫುಟ್ ಬೋರ್ಡ್ ಗಳ ಮೇಲೆ ನಿಂತು ಹೋಗುತ್ತಿದ್ದಾರೆ. ಏನಾದರೂ ಸ್ವಲ್ಪ ಯಾಮಾರಿದ್ರು ವಿದ್ಯಾರ್ಥಿಗಳ ಪ್ರಾಣಕ್ಕೆ ಅಪಾಯವಿದೆ.

ಇನ್ನು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯ ಈ ದೃಶ್ಯ ಸರ್ವೆ ಸಾಮಾನ್ಯವಾಗಿದೆ. ಇನ್ನು ಹೆದ್ದಾರಿಯಲ್ಲಿ ಅತೀ ಹೆಚ್ಚು ವಾಹನಗಳ ಸಂಚಾರ ಸಹಾ ಇರುತ್ತದೆ. ಸ್ವಲ್ಪ ಯಮಾರಿದ್ರು ವಿದ್ಯಾರ್ಥಿಗಳ ಪ್ರಾಣಕ್ಕೆ ಅಪಾಯವಿದೆ. ಇನ್ನು ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಬಸ್ ಶೆಲ್ಟರ್ ಸಹ ಇಲ್ಲ. ಹೀಗಾಗಿ ಮಳೆ, ಬಿಸಿಲು ಎನ್ನದೇ ಬಸ್ ಗಾಗಿ ಕಾಯುವ ಪರಿಸ್ಥಿತಿ.

ಮತ್ತೊಂದಡೆ ಚಿರತೆ ಕಾಟ ಕೂಡ ವಿದ್ಯಾರ್ಥಿಗಳಿಗೆ ಎದುರಾಗಿದೆ. ಆದರೆ ವಿದ್ಯಾರ್ಥಿಗ ಗೋಳನ್ನ ಕೇಳುವವರು ಯಾರು ಇಲ್ಲದಂತೆ ಆಗಿದೆ. ಇನ್ನು ಈ ಬಗ್ಗೆ ಮಾತನಾಡಿರೋ ಡಿಪೋ ಮ್ಯಾನೇಜರ್, ಬಸ್ ನಿಲ್ದಾಣಕ್ಕೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುತ್ತೇವೆ. ಹೆಚ್ಚುವರಿ ಬಸ್ ಗಳ ಸೌಲಭ್ಯ ಕೂಡ ಒದಗಿಸುತ್ತೇವೆ ಎನ್ನುತ್ತಿದ್ದಾರೆ.

ಒಟ್ಟಾರೆ ರಾಮನಗರದಲ್ಲಿ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕಿದೆ. (ಪ್ರಶಾಂತ್ ಹುಲಿಕೆರೆ, ಟಿವಿ 9, ರಾಮನಗರ)

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 9 November 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್