ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು

ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರದ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಗುದ್ದಿ ಎದುರು ಬದಿಯಿಂ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ಸಾವು
ಸಾಂದರ್ಭಿಕ ಚಿತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on:Nov 27, 2024 | 7:03 AM

ರಾಮನಗರ, ನವೆಂಬರ್ 27: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಎಷ್ಟೇ ಕ್ರಮ ಕೈಗೊಂಡರೂ ಅವಘಡಗಳು ನಿಲ್ಲುತ್ತಿಲ್ಲ. ಈಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಗುದ್ದಿದ ಕಾರು ಎದುರು ಬದಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿಗೆ ಗುದ್ದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ‌ ಸಂಗಬಸವನದೊಡ್ಡಿ ಬಳಿ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಘಟನೆ ಸಂಭವಿಸಿದೆ.

ಮೃತರು ಬೆಂಗಳೂರಿನ ಶಿವಾಜಿನಗರದವರು

ಡೆಲ್ಲಿ ಪಾಸಿಂಗ್ ನಂಬರ್ ಹೊಂದಿರುವ ಹ್ಯೂಂಡಯ್ ಐ ಟೆನ್ ಕಾರು ಹಳೆಯ ಮಾಡೆಲ್ ಆಗಿದ್ದು, ಬೆಂಗಳೂರಿನ ಶಿವಾಜಿನಗರದ ನಿವಾಸಿಗಳಾದ ಲಿಯಾಕತ್ (50), ಅಸ್ಮಾ (38), ನೂರ್ (40) ‌ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕುಟುಂಬ, ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ತೆರಳುತ್ತಿತ್ತು. ಕಾರು ಡಿವೈಡರ್​ಗೆ ಕಾರು ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಹರಸಾಹಸಪಡಬೇಕಾಯಿತು.

Ramanagara: Terrible accident on Bangalore-Mysore Expressway in Sangabasavanadoddi, three died in spot

ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿರುವ ಕಾರು

ಅಪಘಾತ ಕಾರಣ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಾಮನಗರ ಟ್ರಾಫಿಕ್ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದು ರಾಮನಗರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಷ್ಟೇ ಮುತುವರ್ಜಿ ವಹಿಸಿದರೂ ಅಪಘಾತಗಳು ನಿಲ್ಲುತ್ತಿಲ್ಲ. ಇರಲಿಲ್ಲ, ಹೀಗಾಗಿ ರಾಜ್ಯದ ಪೊಲೀಸ್ ಇಲಾಖೆಯೇ ಜೀವ ಉಳಿಸುವಂತಹ ನಿಟ್ಟಿನಲ್ಲಿ ಸ್ಪೀಡ್ ಡಿಟೆಕ್ಟರ್​ಗಳನ್ನು ಅಳವಿಡಿಸಿ ಗಂಟೆಗೆ 100 ಕಿಲೋಮೀಟರ್​​ಗಿಂತ ಹೆಚ್ಚು ವೇಗವಾಗಿ ಹೋದರೆ ದಂಡ ವಿಧಿಸುವಂತೆ ಮಾಡಿದ್ದಾರೆ. ಆದರೆ ಈ ಅಪಘಾತದ ಸಂದರ್ಭದಲ್ಲಿ ಕಾರಿನ ವೇಗದ ಮಿತಿ ಗಂಟೆಗೆ 70 ಕಿಲೋಮೀಟರ್ ಕೂಡ ದಾಟಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅಪಘಾತಕ್ಕೆ ನಿಖರ ಕಾರಣವೇನೆಂಬುದರ ಬಗ್ಗೆ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Wed, 27 November 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್