ರಾಮನಗರ: ದರ್ಶನ ಪರ ಬರಹ ಇದ್ದ ಲಾರಿ ಬೈಕ್​ಗೆ ಡಿಕ್ಕಿ, ಮೂವರು ಸಾವು

ಗೌರಿ ಹಬ್ಬದ ದಿನ ರಾಜ್ಯದ ಎರಡು ಜಿಲ್ಲೆಗಳಲ್ಲಿ ರಸ್ತೆ ಅಪಘಾತ ಸಂಭಸಿವೆ. ಈ ಅಪಘಾತಗಳಲ್ಲಿ ಒಟ್ಟು ಆರು ಜನ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​ ಸವಾರರು ಮೃತಪಟ್ಟಿದ್ದಾರೆ.

ರಾಮನಗರ: ದರ್ಶನ ಪರ ಬರಹ ಇದ್ದ ಲಾರಿ ಬೈಕ್​ಗೆ ಡಿಕ್ಕಿ, ಮೂವರು ಸಾವು
ಅಪಘಾತದ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Sep 06, 2024 | 12:36 PM

ರಾಮನಗರ ಸೆಪ್ಟೆಂಬರ್​ 06: ರಾಮನಗರ (Ramnagar) ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (50)‌ ಮೃತ ದುರ್ದೈವಿಗಳು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮತ್ತೋರ್ವ ಸಾವೀಗಿಡಾಗಿದ್ದಾನೆ.

ಡಿಕಿ ಹೊಡೆದ ಲಾರಿ ಮೇಲೆ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನನನ್ನು ಸಮರ್ಥಿಸಿಕೊಂಡು ಬರಹಗಳನ್ನು ಬರೆಯಲಾಗಿದೆ. ಲಾರಿಯ ಹಿಂಬದಿಯಲ್ಲಿ “ಆರೋಪಿ ಅಷ್ಟೇ, ಅಪರಾದಿ ಅಲ್ಲ” ಖೈದಿ ನಂಬರ್​​ 6106 ಬರೆಯೆಲಾಗಿದೆ.

ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿತ್ತು. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಾನ್ವಿ ಸ್ಕೂಲ್ ಬಸ್​ ಅಪಘಾತಕ್ಕೆ ರಸ್ತೆ ಗುಂಡಿಯೇ ವಿಲನ್

ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿದ್ದವು. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನು ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಮತ್ತು ಪೋಷಕರೊಂದಿಗೆ ವಾಗ್ವಾದ ಉಂಟಾಗಿತ್ತು.

ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದು ಹೇಳದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:49 am, Fri, 6 September 24

ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?