AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ 40 ಮಂದಿ ವಕೀಲರ ವಿರುದ್ಧ ಕೇಸ್: ಐಜೂರು PSI ಅಮಾನತು ಆದೇಶ ರದ್ದು, ಕರ್ತವ್ಯಕ್ಕೆ ಹಾಜರ್

ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್​ಐ ತನ್ವೀರ್ ಅವರು 40 ಮಂದಿ ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಪ್ರಕರಣ ರಾಜಕೀಯ ಆಯಾಮ ಪಡೆದುಕೊಂಡಿತ್ತು. ಪಿಎಸ್​ಐ ಅಮಾನತಿಗೆ ಸದನದಲ್ಲಿ ದೊಡ್ಡ ಗಲಾಟೆಯೇ ಆಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಪಿಎಸ್​ಐ ತನ್ವೀರ್ ಅವರನ್ನು ಆಮಾನತು ಮಾಡಿ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಪ್ರಕರಣದ ತನಿಖಾ ವರದಿ ಬಂದಿದ್ದು, ಇದರಲ್ಲಿ ಪಿಎಸ್​ಐ ತನ್ವೀರ್ ಯಾವುದೇ ತಪ್ಪಿಲ್ಲ ಎನ್ನುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರ ಅಮಾನತು ಆದೇಶವನ್ನು ರದ್ದುಪಡಿಸಲಾಗಿದೆ.

ರಾಮನಗರದ 40 ಮಂದಿ ವಕೀಲರ ವಿರುದ್ಧ ಕೇಸ್: ಐಜೂರು PSI ಅಮಾನತು ಆದೇಶ ರದ್ದು, ಕರ್ತವ್ಯಕ್ಕೆ ಹಾಜರ್
ಐಜೂರು ಠಾಣೆ PSI ತನ್ವೀರ್ ಹುಸೇನ್
TV9 Web
| Edited By: |

Updated on:Mar 05, 2024 | 3:34 PM

Share

ರಾಮನಗರ, (ಮಾರ್ಚ್ 05): ರಾಮನಗರದಲ್ಲಿ (Ramanagara) 40 ವಕೀಲರ(lawyers) ವಿರುದ್ಧ ದೂರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜೂರು ಠಾಣೆ PSI ತನ್ವೀರ್ ಹುಸೇನ್ ಅಮಾನತು ಆದೇಶ ತೆರವು ಮಾಡಲಾಗಿದೆ. ವಕೀಲರ ವಿರುದ್ಧ ಪಿಎಸ್​ಐ ಕೇಸ್ ಹಾಕಿರುವುದರಲ್ಲಿ ಯಾವುದೇ ತಪ್ಪಿಲ್ಲವೆಂದು ಕ್ಲೀನ್​ಚಿಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಐಜೂರು ಠಾಣೆ PSI ತನ್ವೀರ್ ಹುಸೇನ್ ಅಮಾನತು ರದ್ದುಗೊಳಿಸಿ ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಹೀಗಾಗಿ PSI ತನ್ವೀರ್ ಹುಸೇನ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ವಕೀಲರ ವಿರುದ್ಧ ಪಿಎಸ್​ಐ ಕೇಸ್ ಹಾಕಿದ್ದು ತಪ್ಪಿಲ್ಲವೆಂದು ವರದಿಯಲ್ಲಿ ಗೊತ್ತಾಗಿದೆ. ಪ್ರಕರಣದಲ್ಲಿ ಬಾಹ್ಯ ಒತ್ತಡವಿಲ್ಲದೆ PSI ತನ್ವೀರ್ ಹುಸೇನ್ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದ್ದಾರೆ. ಸಮುದಾಯದ ಪರ ಒಲವು ತೋರದೆ ಕಾರ್ಯನಿರ್ವಹಿಸಿದ್ದಾರೆಂದು ವರದಿಯಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ರಾಮನಗರದಲ್ಲಿ ತಡರಾತ್ರಿವರೆಗೂ ವಕೀಲರ ಪ್ರತಿಭಟನೆ, ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ರಾಜಕೀಯ ಸ್ವರೂಪ ಪಡೆದುಕೊಂಡಿದ್ದ ಪ್ರಕರಣ

ರಾಮನಗರದಲ್ಲಿ (Ramanagara) 40 ಮಂದಿ ವಕೀಲರ ವಿರುದ್ಧ ಪಿಎಸ್​ಐ ತನ್ವೀರ್ ಎಫ್​ಐಆರ್​ ದಾಖಲಿಸಿದ್ದು ರಾಜಕೀಯ ಆಯಾಮ ಪಡೆದುಕೊಂಡಿತ್ತು. ವಕೀಲರ ಪ್ರತಿಭಟನೆಗೆ ಬಿಜೆಪಿ, ಜೆಡಿಎಸ್​ ಬೆಂಬಲಿಸಿದ್ದವು.  ರಾಮನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದ್ದ ವಕೀಲರ ಪ್ರತಿಟನಾ ಸ್ಥಳಕ್ಕೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್​ ಭೇಟಿ ನೀಡಿ ಬೆಂಬಲಿಸಿದ್ದರು.

ಬಳಿಕ  ಈ ಬಗ್ಗೆ ವಿಪಕ್ಷ ನಾಯಕರು ಬಜೆಟ್ ಅಧಿವೇಶನದಲ್ಲೂ ಪ್ರಸ್ತಾಪಿಸಿ ಪಿಎಸ್​ಐ ಅಮಾನತಿಗೆ ಬಿಗಿಪಟ್ಟು ಹಿಡಿದಿದ್ದರು. ಅಲ್ಲದೇ ಸದನದ ಬಾವಿಗಿಳಿದು ಧರಣಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು. ವಕೀಲರ ಹೋರಾಟದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುವ ಮೂಲಕ ಆರೋಪ ಪ್ರತ್ಯಾರೋಪಗಳ ನಡುವೆ ಸರ್ಕಾರ ಪಿಎಸ್ ಐ ಸಸ್ಪೆಂಡ್ ಮಾಡುವ ಮೂಲಕ ಇಬ್ಬರ ನಡುವಿನ ಜಟಾಪಟಿ‌‌ಗೆ ಇತೀಶ್ರಿ ಹಾಡಿತ್ತು.

ಕಿಡಿ ಹೊತ್ತಿಸಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಚಾಂದ್ ಪಾಷಾ ಎಂಬವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಪ್ರಕಟಿಸಿದ್ದರು. ಫೆಬ್ರವರಿ 3ರಂದು ಈ ಪೋಸ್ಟ್ ಮಾಡಲಾಗಿತ್ತು. ಇದು ಸ್ಥಳೀಯ ಹಿಂದೂ ಪರ ಸಂಘಟನೆಗಳ ಮುಖಂಡರ ಕೆಂಗಣ್ಣಿಗೆ ಗುರಿಯಾಗಿತ್ತು. ಪಾಷಾ ಪೋಸ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಗಳ ಮುಖಂಡರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘವನ್ನು ಆಗ್ರಹಿಸಿದ್ದರು.

ಫೆಬ್ರವರಿ 4ರಂದು ಹಿಂದೂ ಸಂಘಟನೆಯೊಂದರ ಮುಖಂಡ ಶಿವಾನಂದ ಎಂಬವರು ಚಾಂದ್ ಪಾಷಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಪಾಷಾ ಅವರ ಕೆಲವು ಮಂದಿ ಬೆಂಬಲಿಗರು ವಕೀಲರ ಸಂಘದ ಕಚೇರಿಗೆ ತೆರಳಿ ಅವರ ವಿರುದ್ಧ ಕ್ರಮ ಕೈಗೊಳ್ಳದಂತೆ ಮನವಿ ಮಾಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಸುಮಾರು 11 ಮಂದಿ ವಕೀಲರು ತಮ್ಮ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ನಿಂದನೆ ಮಾಡಿದ್ದಾರೆ ಎಂದು ಪಾಷಾ ಬೆಂಬಲಿಗರು ಆರೋಪಿಸಿದ್ದರು.

ಇಷ್ಟಕ್ಕೆ ಸುಮ್ಮನಾಗದ ಪಾಷಾ ಬೆಂಬಲಿಗರು ಪೊಲೀಸ್ ಠಾಣೆಗೆ ತೆರಳಿ ವಕೀಲರ ಸಂಘದ ವಿರುದ್ಧ ದೂರು ನೀಡಿದ್ದರು. ಇದನ್ನು ಸ್ವೀಕರಿಸಿದ ಪಿಎಸ್​ಐ ತನ್ವೀರ್ 40 ಮಂದಿ ವಕೀಲರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು.ಇದು ವಕೀಲರ ಆಕ್ರೋಶಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:29 pm, Tue, 5 March 24

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!