ರಾಮನಗರ ವಕೀಲರ ಪ್ರತಿಭಟನೆ; ಜಿಲ್ಲಾಧಿಕಾರಿ, ಎಸ್​ಪಿ, ಪಿಎಸ್​ಐ ವರ್ಗಾವಣೆ ಕೋರಿ ರಾಜ್ಯಪಾಲರಿಗೆ ಪತ್ರ

ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಹಾಗೂ ಜಿಲ್ಲಾಧಿಕಾರಿ, ಎಸ್​ಪಿ, ಪಿಎಸ್​ಐ ವರ್ಗಾವಣೆ ಮಾಡುವಂತೆ ಕೋರಿ ಪತ್ರ ಬರೆದಿದ್ದಾರೆ.

ರಾಮನಗರ ವಕೀಲರ ಪ್ರತಿಭಟನೆ; ಜಿಲ್ಲಾಧಿಕಾರಿ, ಎಸ್​ಪಿ, ಪಿಎಸ್​ಐ ವರ್ಗಾವಣೆ ಕೋರಿ ರಾಜ್ಯಪಾಲರಿಗೆ ಪತ್ರ
ರಾಮನಗರ ವಕೀಲರ ಪ್ರತಿಭಟನೆ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಆಯೇಷಾ ಬಾನು

Updated on:Feb 20, 2024 | 12:34 PM

ರಾಮನಗರ, ಫೆ.20: ರಾಮನಗರದಲ್ಲಿ (Ramanagar) ಪೊಲೀಸರು (Police) ಮತ್ತು ವಕೀಲರ (Lawyers) ಜಟಾಪಟಿ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಎಸ್​ಪಿ, ಪಿಎಸ್​ಐ ವರ್ಗಾವಣೆ ಮಾಡುವಂತೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರಿಗೆ ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಪತ್ರ ಬರೆದಿದ್ದಾರೆ. ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಲಾಗಿದ್ದು ರಾಮನಗರದಲ್ಲಿ ಅಶಾಂತಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಜಿಲ್ಲೆಯಿಂದ ಮೂವರನ್ನೂ ವರ್ಗಾವಣೆ ಮಾಡುವಂತೆ‌ ಪತ್ರ ಬರೆಯಲಾಗಿದೆ.

ಮಾತುಕತೆಯಲ್ಲಿ ಬಗೆಹರಿಸಬಹುದಾದ ವಿಷಯ ದೊಡ್ಡದಾಗಿ ಮಾಡಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಮಾಡದೇ FIR ಹಾಕಿ ದೊಂಬಿ ಎಬ್ಬಿಸಿದ್ದಾರೆ. ಇಷ್ಟಕ್ಕೆಲ್ಲಾ ಜಿಲ್ಲಾಡಳಿತದ ನಿರ್ಲಕ್ಷ್ಯತನವೇ ಕಾರಣ ಎಂದು ಪತ್ರದಲ್ಲಿ ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಆರೋಪ ಮಾಡಿದ್ದಾರೆ.

ಇದನ್ನೂ ಓದಿ:  ರಾಮನಗರ ವಕೀಲರ ಪ್ರತಿಭಟನೆ: ವಿವಾದದ ಕಿಡಿ ಹೊತ್ತಿಕೊಂಡಿದ್ದೆಲ್ಲಿಂದ? ಇಲ್ಲಿದೆ ಪೂರ್ಣ ವಿವರ

ಏನಿದು ಘಟನೆ?

ರಾಮನಗರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಉಂಟಾಗಿದ್ದು ಪ್ರಕರಣದಲ್ಲಿ 40 ವಕೀಲರ ಮೇಲೆ ಎಫ್ಐಆರ್ ದಾಖಲಾಗಿದೆ. ಎಫ್​ಐಆರ್ ದಾಖಲಾಗಿದ್ದನ್ನು ಖಂಡಿಸಿ ವಕೀಲ ಸಂಘ ಬೃಹತ್ ಪ್ರತಿಭಟನೆ ನಡೆಸಿದೆ. ವಿವಿಧ ಜಿಲ್ಲೆಗಳಿಂದ ರಾಮನಗರಕ್ಕೆ ಆಗಮಿಸಿ ವಕೀಲರು ಪ್ರತಿಭಟಿಸಿದ್ದಾರೆ. ಸತತ 1 ವಾರದಿಂದ ನ್ಯಾಯಾಲಯದ ಕಾರ್ಯ ಕಲಾಪ ಬಹಿಷ್ಕರಿಸಿ ವಕೀಲರು ಧರಣಿಗಿಳಿದಿದ್ದಾರೆ. ಸೋಮವಾರ ತೀವ್ರ ಹೋರಾಟಕ್ಕಿಳಿದ ವಕೀಲರು, ರಾಮನಗರ ಡಿಸಿ ಕಚೇರಿಗೆ ದಿಗ್ಭಂದನ ಹಾಕಿದ್ರು. ಎರಡೂ ಗೇಟ್ ಮುಂಭಾಗದಲ್ಲಿ ಧರಣಿ ಕುಳಿತ ವಕೀಲರು, ಡಿಸಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಮನೆಗೆ ಹೋಗದಂತೆ ತಡೆದ್ರು. ಇಡೀ ರಾತ್ರಿ‌ ಧರಣಿ ನಡೆಸಿದ್ರು.

ವಕೀಲರ ಪ್ರತಿಭಟನೆ ಹಿನ್ನಲೆ, ರಾಮನಗರ ಟೌನ್ ನಲ್ಲಿ 700ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜಿಸಲಾಗಿದೆ. 100 ಬಾಡಿ ಕ್ಯಾಮೆರಾ, ಸಿಸಿಟಿವಿ, 40 ಹ್ಯಾಂಡಿ ಕ್ಯಾಮೆರಾ, 2 ಡ್ರೋನ್ ಕ್ಯಾಮೆರಾದಿಂದ ನಿಗಾ ಇಡಲಾಗಿದೆ. ಪ್ರತಿಭಟನಾನಿರತರು, ಪಿಎಸ್ ಐ ತನ್ವೀರ್ ಹುಸೇನ್ ನ ಅಮಾನತ್ತು ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಗಲಾಟೆ ಪ್ರಕರಣವೊಂದರಲ್ಲಿ ವಕೀಲರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸಿದ ಆರೋಪ ಕೇಳಿಬಂದಿದೆ. FIR ದಾಖಲಿಸಿದರ ವಿರುದ್ಧ ನ್ಯಾಯಾಲಯ ಆವರಣದಿಂದ ಜಿಲ್ಲಾಧಿಕಾರಿ ಕಛೇರಿವರೆಗೂ ಮೆರವಣಿಗೆ ನಡೆಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:19 pm, Tue, 20 February 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ