AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು

ರೇಷ್ಮೇ ಗೂಡಿನ ಧಾರಣೆ ಏಕಾಏಕಿ ಕುಸಿತವಾಗಿದ್ದು ರೇಷ್ಮೆ ವ್ಯವಸಾಯ ನಂಬಿಕೊಂಡಿದ್ದ ರೈತರಿಗೆ ಭಾರೀ ನಷ್ಟವಾಗಿದೆ. ರಾಮನಗರ ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ.

ಏಕಾಏಕಿ ಕುಸಿತ ಕಂಡ ರೇಷ್ಮೆ ಗೂಡಿನ ಧಾರಣೆ, ಕಂಗಾಲಾದ ರೇಷ್ಮೆ ಬೆಳೆಗಾರರು
ರೇಷ್ಮೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 17, 2023 | 11:19 AM

Share

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿರುವ ರಾಮನಗರ (Ramnagar) ಜಿಲ್ಲೆ ರೇಷ್ಮೆ (Silk) ವ್ಯಾಪರಕ್ಕೆ ಬಹಷ್ಟು ಪ್ರಸಿದ್ಧಿ. ರಾಮನಗರ ಮಾರುಕಟ್ಟೆಗೆ ಜಿಲ್ಲೆಯ ಮತ್ತು ಬೇರೆ ಜಿಲ್ಲೆಯ ರೈತರು (Farmers) ಬಂದು ರೇಷ್ಮೆ ವ್ಯಾಪಾರ ಮಾಡುತ್ತಾರೆ. ಇನ್ನು ಜಿಲ್ಲೆಯ ಬಹುತೇಕ ರೈತರು ರೇಷ್ಮೆ ಕೃಷಿ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ರೇಷ್ಮೆ ಗೂಡಿನ ಧಾರಣೆ ಏಕಾಏಕಿ ಕುಸಿತ ಕಂಡಿದ್ದು, ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೇಷ್ಮೆ ವ್ಯವಸಾಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿಲ್ಲೆಯಲ್ಲಿ ಕನಕಪುರ, ಚನ್ನಪಟ್ಟಣ, ರಾಮನಗರ, ಮಾಗಡಿ 4 ತಾಲ್ಲೂಕುಗಳಿದ್ದು, ಇದರ ಪೈಕಿ 3 ತಾಲ್ಲೂಕುಗಳಲ್ಲಿ ಪ್ರಮುಖ ರೇಷ್ಮೆ ಬೆಳೆಯು ವಾಣಿಜ್ಯ ಬೆಳೆಯಾಗಿದೆ. ರಾಮನಗರ ಮಾತ್ರವಲ್ಲದೆ ಹಾವೇರಿ ಇನ್ನೀತರ ಜಿಲ್ಲೆಗಳಲ್ಲೂ ರೈತರು ರೇಷ್ಮೆ ವ್ಯವಸಾಯವನ್ನು ನಂಬಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ರೇಷ್ಮೆಗೂಡಿನ ಧಾರಣೆ ಕಡಿಮೆಯಾಗಿದೆ. ಒಂದು ತಿಂಗಳ ಹಿಂದೆ ಬಿಳಿ ರೇಷ್ಮೆ ಗೂಡು ಪ್ರತಿ ಕೆಜಿಗೆ ಸಾವಿರ ರೂ. ಗಡಿ ದಾಟಿತ್ತು. ಆದರೆ ಇದೀಗ ಬಿಳಿಗೂಡು ಪ್ರತಿ ಕೆಜಿ 500 ರೂ. ರಿಂದ 600 ರೂ. ಬಂದಿದೆ. ಇನ್ನು ಹಳದಿ ರೇಷ್ಮೆಗೂಡು ಪ್ರತಿ ಕೆಜಿಗೆ 400 ರೂ. ವರೆಗೂ ಕಡಿಮೆ ಆಗಿದೆ. ಹೀಗಾಗಿ ರೇಷ್ಮೆ ಗೂಡನ್ನು ನಂಬಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.

ಇದನ್ನೂ ಓದಿ: ತುಂಗಾ ಮೆಲ್ದಂಡೆ ಯೋಜನೆಯಡಿಯಲ್ಲಿ ಕಾಲುವೆ ನಿರ್ಮಾಣ; ಅಸಮರ್ಪಕ ನಿರ್ವಹಣೆಯಿಂದ ಬರದ ನೀರು, ರೈತರು ಕಂಗಾಲು

ಅಂದಹಾಗೆ ರಾಮನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ, ದೇಶದಲ್ಲಿಯೇ ದೊಡ್ಡದಾದ ಮಾರುಕಟ್ಟೆ. ರಾಮನಗರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ರೈತರು ಹಾಗೂ ಹೊರ ರಾಜ್ಯದ ರೈತರು ಇಲ್ಲಿಗೆ ರೇಷ್ಮೆ ಗೂಡು ತಂದು ಮಾರುತ್ತಾರೆ. 45 ರಿಂದ 50 ಟನ್ ಗೂಡು ಪ್ರತಿನಿತ್ಯ ವಹಿವಾಟು ನಡೆಯುತ್ತದೆ. ಪ್ರತಿದಿನ ಕೋಟ್ಯಾಂತರ ರೂ. ವಹಿವಾಟು ನಡೆಯುತ್ತದೆ. ಇಲ್ಲಿ ಉತ್ತಮ ಬೆಲೆ ಸಿಗುತ್ತದೆ, ಎಂಬ ಕಾರಣಕ್ಕೆ ದೂರದ ಊರುಗಳಿಂದ ತಂದು ಮಾರಾಟ ಮಾಡುತ್ತಾರೆ.

ಆದರೆ ಕಳೆದ ಒಂದು ತಿಂಗಳಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಇನ್ನು ಏಕಾಏಕಿ ಕುಸಿತಕ್ಕೆ ಒಂದೆಡೆ ರಾಜ್ಯ ವಿಧಾನಸಭಾ ಚುನಾವಣೆಯ ಎಫೆಕ್ಟ್ ಕಾರಣವಾದರೇ, ಮತ್ತೊಂದಡೆ ಕೆಎಎಸ್​ಐಸಿ ದ್ವಿತಳಿ ಗೂಡು ವ್ಯಪಾರ ಕೂಡ ನಿಂತಿದೆ. ಜೊತೆಗೆ ರೇಷ್ಮೆ ನೂಲಿನ ಬೆಲೆ ಕೂಡ ಕಡಿಮೆ ಆಗಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ರೇಷ್ಮೆಗೂಡಿನ ಬೆಲೆ ಕಳೆದ ಒಂದು ತಿಂಗಳಿಂದ ಕುಸಿತ ಕಂಡಿರುವುದು ರೇಷ್ಮೆ ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು