AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುನಾಮಕರಣಗೊಂಡರೂ ಬದಲಾಗಿಲ್ಲ ರಾಮನಗರದ ಸರ್ಕಾರಿ ಕಚೇರಿಗಳ ನಾಮಫಲಕ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಆದರೆ, ಸರ್ಕಾರಿ ಕಚೇರಿಗಳಲ್ಲಿ ಹಳೆಯ ನಾಮಫಲಕಗಳು ಬದಲಾಗಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನದ ಹೊರತಾಗಿಯೂ ಬದಲಾವಣೆ ಆಗಿಲ್ಲ. ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶ್ರೀಘ್ರವಾಗಿ ನಾಮಫಲಕ ಬದಲಾಯಿಸುವಂತೆ ಜನರು ಒತ್ತಾಯಿಸಿದ್ದಾರೆ.

ಮರುನಾಮಕರಣಗೊಂಡರೂ ಬದಲಾಗಿಲ್ಲ ರಾಮನಗರದ ಸರ್ಕಾರಿ ಕಚೇರಿಗಳ ನಾಮಫಲಕ
ಜಿಲ್ಲಾ ಪಂಚಾಯತ್​ ಭವನ, ರಾಮನಗರ
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ|

Updated on:Jun 16, 2025 | 7:08 PM

Share

ರಾಮನಗರ, ಜೂನ್​ 16: ರಾಮನಗರ (Ramnagara) ಜಿಲ್ಲೆಗೆ ಬೆಂಗಳೂರು ದಕ್ಷಿಣ (Bangalore South) ಎಂದು ಮರುನಾಮಕರಣ ಮಾಡಲಾಗಿದೆ. ಆದರೆ ಈವರೆಗೂ ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಯಲ್ಲಿಯೂ ಸಹ ನಾಮಫಲಕ ಮಾತ್ರ ಬದಲಾವಣೆಯಾಗಿಲ್ಲ. ಮೇ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿತ್ತು. ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದರು. ಈ ಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾತ್ರ ಹೆಚ್ಚಿತ್ತು. ಆದರೆ, ಸರ್ಕಾರ ಹೆಸರು ಬದಲಾಯಿಸಿದ್ದರು ಸಹ ನಾಮಫಲಕಗಳಲ್ಲಿ ಹೆಸರು ಬದಲಾಗಿಲ್ಲ.

ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ಯಶ್ವಂತ್ ವಿ ಗುರುಕರ್ ಅವರಿಗೆ ಕಡ್ಡಾಯವಾಗಿ ರಾಮನಗರ ಜಿಲ್ಲೆಯ ನಾಮಫಲಕಗಳು ಬೆಂಗಳೂರು ದಕ್ಷಿಣ ಅಂತ ಬದಲಾಗಬೇಕೆಂದು ಸೂಚನೆ ನೀಡಿದ್ದರು. ಆದರೆ, ಈವರೆಗೂ ಸಹ ಹಳೆಯ ನಾಮಫಲಕಗಳೇ ಇವೆ. ಕಂದಾಯ ಭವನ, ಜಿಲ್ಲಾ ಪಂಚಾಯತ್ ಭವನ, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಯಲ್ಲಿಯೂ ಸಹ ಹಳೇ ನಾಮಫಲಕಗಳೇ ಇವೆ. ನಾಮಫಲಕ ಬದಲಿಸದ ಸರ್ಕಾರ, ಅಭಿವೃದ್ಧಿ ಏನು ಮಾಡಲಿದೆ ಎಂದು ಜಿಲ್ಲೆಯ ಜನರು ಪ್ರಶ್ನೆ ಮಾಡುತ್ತಿದ್ದಾರೆ.

ರಾಮನಗರ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿತ್ತು. ನಂತರ ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 2007ರ ಆಗಸ್ಟ್ 23 ರಂದು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಬಲ ಆಕಾಂಕ್ಷೆಯ ಮೇರೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ.

ಇದನ್ನೂ ಓದಿ
Image
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
Image
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
Image
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
Image
ಕಲುಷಿತಗೊಂಡ ಅರ್ಕಾವತಿ ನದಿ ಪುನಶ್ಚೇತನಕ್ಕೆ ಸಾರ್ವಜನಿಕರ ಆಗ್ರಹ

ಇದನ್ನೂ ಓದಿ: ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ

ಒಟ್ಟಾರೆಯಾಗಿ ಸಚಿವ ಸಂಪುಟದಲ್ಲಿ ಅಧಿಕೃತವಾಗಿ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾದರೂ ಸಹ ಜಿಲ್ಲೆಯ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ನಾಮಪಲಕ ಬದಲಾವಣೆ ಮಾಡಲು ಇನ್ನೆಷ್ಟು ದಿನ ಬೇಕು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Mon, 16 June 25