ರಾಮನಗರದಲ್ಲಿ ಸಚಿವ-ಸಂಸದ ಮಧ್ಯೆ ಜಟಾಪಟಿ: ಜಿಲ್ಲಾಧಿಕಾರಿ-ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಮತ್ತು ಎಂಎಲ್‌ಸಿ ಎಸ್.ರವಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್, ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಹಾಗೂ ಎಸ್ಪಿ ಗಿರೀಶ್ಗೆ ದೂರು ನೀಡಿದ್ದಾರೆ.

ರಾಮನಗರದಲ್ಲಿ ಸಚಿವ-ಸಂಸದ ಮಧ್ಯೆ ಜಟಾಪಟಿ: ಜಿಲ್ಲಾಧಿಕಾರಿ-ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಕೆ
ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ
Follow us
TV9 Web
| Updated By: ಆಯೇಷಾ ಬಾನು

Updated on: Jan 05, 2022 | 1:57 PM

ರಾಮನಗರ: ರೇಷ್ಮೆ ನಾಡು ರಾಮನಗರದಲ್ಲಿ(Ramanagara) ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ(CN Ashwath Narayan) ಮತ್ತು ಸಂಸದರ ಡಿ‌ಕೆ ಸುರೇಶ್ (DK Suresh) ನಡುವೆ ಗಲಾಟೆ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಮತ್ತು ಎಂಎಲ್‌ಸಿ ಎಸ್.ರವಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ದಾಖಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ರವಿಕುಮಾರ್, ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಹಾಗೂ ಎಸ್ಪಿ ಗಿರೀಶ್ಗೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 120(ಬಿ), 143, 353 ರ ಅಡಿ ಕಾನೂನು ಕ್ರಮ ಕೈಗೊಳ್ಳಲು ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ದೂರು ನೀಡಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಉದ್ದೇಶ ಪೂರ್ವಕವಾಗಿ ಸಂಚು ಮಾಡಿದ್ದಾರೆ. ಕಾರ್ಯಕರ್ತರಿಗೆ ಪ್ರಚೋದನೆ ನೀಡಿ ಘಟನೆ ಮಾಡಿಸಿದ್ದಾರೆ ಎಂದು ರವಿಕುಮಾರ್ ಆರೋಪ ಮಾಡಿದ್ದಾರೆ.

ರಾಮನಗರದಲ್ಲಾದ ಜಟಾಪಟಿ ಹಿನ್ನೆಲೆ ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ, ಸಂಸದರ ಗಲಾಟೆ ನಡೆದಿದೆ. ಡಾ.ಅಶ್ವತ್ಥ್ ನಾರಾಯಣ, ಸಂಸದ ಡಿ.ಕೆ.ಸುರೇಶ್ ಮಧ್ಯೆ ಗಲಾಟೆ ಉಂಟಾಗಿದೆ. ಸಚಿವ ಡಾ.ಅಶ್ವತ್ಥ್ ಭಾಷಣಕ್ಕೆ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ‘ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’ ಎಂದು ಅಶ್ವತ್ಥ್ ನಾರಾಯಣ ಭಾಷಣ ಮಾಡಿದ್ದಾರೆ. ನೀರಾವರಿ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಮ್ಮ ಅಭಿವೃದ್ಧಿ ಮಾಡಿಕೊಳ್ಳುವುದನ್ನು ಮಾತ್ರ ಮಾಡಿಕೊಳ್ಳಲ್ಲ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಜತೆ ಡಿ.ಕೆ.ಸುರೇಶ್ ವಾಕ್ಸಮರ ನಡೆದಿದೆ.

ಅಶ್ವತ್ಥ್ ಬಳಿಯಿದ್ದ ಮೈಕ್ ಎಂಎಲ್ಸಿ ರವಿ ಹಿಡಿದು ಎಳೆದಾಡಿದ್ದಾರೆ. ಏನು ತಪ್ಪಾಗಿದೆ ಎಂದು ಕೂಗೋದು, ಕೆಲಸದಲ್ಲಿ ತೋರಿಸಿ. ಕಾರ್ಯಕ್ರಮದಲ್ಲಿ ಗಲಾಟೆ ಮಾಡೋದಾ? ಎಂದು ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ. ನಾವು ಏನು ಮಾಡಿದ್ದೇವೆ ಎಂಬುದನ್ನು ತೋರಿಸುತ್ತೇವೆ. ಜಿಲ್ಲೆಗೆ ವಂಚನೆ ಮಾಡಲು ಬಂದಿಲ್ಲ. ಸಿಎಂ ಬಂದಾಗ ಅವರಿಗೆ ಅಗೌರವ ತೋರಿಸುತ್ತೀರಾ? ಸಿಎಂ ಸಹಕಾರ ಕೊಡಲು ಬಂದಿದ್ದಾರೆ, ರಾಜಕಾರಣಕ್ಕೆ ಅಲ್ಲ. ರಾಮನಗರ ಜಿಲ್ಲೆಯಲ್ಲಿ ನಮ್ಮ ಪ್ರತಿನಿಧಿ ಇಲ್ಲದಿದ್ದರೂ ಕೈಬಿಟ್ಟಿಲ್ಲ. ಜಿಲ್ಲೆಯನ್ನು ಅಭಿವೃದ್ಧಿಯಿಂದ ಕೈಬಿಟ್ಟಿಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸಚಿವ ಅಶ್ವತ್ಥ್ ಭಾಷಣ ವಿರೋಧಿಸಿ ವೇದಿಕೆಯಲ್ಲೇ ಧರಣಿ ನಡೆಸಲಾಗಿದೆ. ವೇದಿಕೆಯಲ್ಲೇ ಕುಳಿತು ಕೈ ಸಂಸದ ಡಿ.ಕೆ.ಸುರೇಶ್ ಧರಣಿ ಮಾಡಿದ್ದಾರೆ.

ಇದನ್ನೂ ಓದಿ: ರಾಮನಗರಕ್ಕೆ ಬಂದು ಗಂಡಸ್ತನದ ಮಾತಾಡ್ತೀರಾ, ಇದು ರಾಮನಗರದ ಜನತೆಗೇ ಹಾಕಿದ ಸವಾಲು ಗೊತ್ತಾ? ಡಿಕೆ ಸುರೇಶ್ ಗುಡುಗು 

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ