AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramnagar: ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ

ಸ್ತ್ರೀ ಶಕ್ತಿ ಯೋಜನೆ ಅಡಿ ಸಾಲ ಪಡೆದು ಮರು ಪಾವತಿಸಬೇಡಿ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ ಮೇಲೆ ಮನ್ನಾ ಮಾಡುತ್ತಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

Ramnagar: ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಕುಮಾರಣ್ಣ ಮನ್ನಾ ಮಾಡ್ತಾರೆ: ಅನಿತಾ ಕುಮಾರಸ್ವಾಮಿ
ಶಾಸಕಿ ಅನಿತಾ ಕುಮಾರಸ್ವಾಮಿ
TV9 Web
| Edited By: ವಿವೇಕ ಬಿರಾದಾರ|

Updated on: Dec 24, 2022 | 6:44 PM

Share

ರಾಮನಗರ: ಸ್ತ್ರೀ ಶಕ್ತಿ ಯೋಜನೆ ಅಡಿ ಸಾಲ ಪಡೆದು ಮರು ಪಾವತಿಸಬೇಡಿ. ನನ್ನ ಪತಿ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಅವರು ಅಧಿಕಾರಕ್ಕೆ ಬಂದ 24 ಗಂಟೆ ಒಳಗಾಗಿ ಸಾಲ ಮನ್ನಾ ಮಾಡುತ್ತಾರೆ ಎಂದು ರಾಮನಗರದ (Ramnagar) ಜೆಡಿಎಸ್ (JDS) ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಹೇಳಿರುವ ವಿಡಿಯೋ ವೈರಲ್​ ಆಗುತ್ತಿದೆ.

ರಾಮನಗರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಈಗಾಗಲೇ ಸ್ತ್ರೀ ಶಕ್ತಿ ಯೋಜನೆ ಅಡಿಯಲ್ಲಿ ಪಡೆದ ಸಾಲಗಳನ್ನು ಮನ್ನಾ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಹೀಗಾಗಿ ಸಾಕಷ್ಟು ಸಾಲ ಪಡೆಯಿರಿ ಆದರೆ ಯಾರು ಕೂಡ ಮರು ಪಾವತಿಸಬೇಡಿ ಕುಮಾರಸ್ವಾಮಿಯವರು ಮನ್ನಾ ಮಾಡುತ್ತಾರೆ ಎಂದಿದ್ದಾರೆ. ಸದ್ಯ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಕಾಮೆಂಟ್​ಗಳು ಬರುತ್ತಿವೆ.

ಜೆಡಿಎಸ್​ ಪಂಚರತ್ನ ಯಾತ್ರೆ ನಡೆಸುತ್ತಿದೆ. ಯಾತ್ರೆ ಕಾಲಿಟ್ಟಲೆಲ್ಲಾ ಅಭೂತಪೂರ್ವ ಸ್ವಾಗತ ದೊರೆಯುತ್ತಿದೆ. ಅನಿತಾ ಕುಮಾರಸ್ವಾಮಿಯವರು ಕಳೆದ ವಾರವಷ್ಟೇ ಮಗ ನಿಖಿಲ್​ ಕುಮಾರಸ್ವಾಮಿಯವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟರು. ಈ ಮೂಲಕ ನಿಖಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ