ರಾಮನಗರ: ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ವರ್ಗಾವಣೆಯನ್ನು ತಡೆಹಿಡಿದ ಡಿಡಿಪಿಐ

ಕನಕಪುರ ತಾಲೂಕಿನ ಸರಕಾರಿ ಶಾಲೆಯ 138 ಶಿಕ್ಷಕರ ವರ್ಗಾವಣೆಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದರು, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣಸ್ವಾಮಿ ಈ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಆದೇಶದ ಪ್ರಕಾರ ವರ್ಗಾವಣೆ ನೀಡುವಂತೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ತವರು ಕ್ಷೇತ್ರದಲ್ಲೇ ಶಿಕ್ಷರ ಕೊರತೆ ಇರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆಹಿಡಿಯಲಾಗಿದೆ.

ರಾಮನಗರ: ಡಿಕೆ ಶಿವಕುಮಾರ್​ ತವರು ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ವರ್ಗಾವಣೆಯನ್ನು ತಡೆಹಿಡಿದ ಡಿಡಿಪಿಐ
ವರ್ಗಾವಣೆ ಬಯಸಿದ ಶಿಕ್ಷಕರು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on:Aug 16, 2023 | 3:08 PM

ರಾಮನಗರ: ಕನಕಪುರ (Kanakpur) ತಾಲೂಕಿನ ಸರಕಾರಿ ಶಾಲೆಯ (Government School) 138 ಶಿಕ್ಷಕರ (Teachers) ವರ್ಗಾವಣೆಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದರು, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (DDPI) ಗಂಗಣ್ಣಸ್ವಾಮಿ ಈ ವರ್ಗಾವಣೆಯನ್ನು ತಡೆಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಆದೇಶದ ಪ್ರಕಾರ ವರ್ಗಾವಣೆ ನೀಡುವಂತೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ತವರು ಕ್ಷೇತ್ರದಲ್ಲೇ ಶಿಕ್ಷರ ಕೊರತೆ ಇರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ತಡೆಹಿಡಿಯಲಾಗಿದೆ. “ಶಿಕ್ಷಕರು ವರ್ಗಾವಣೆ ಆದರೆ‌ 96 ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗುತ್ತದೆ” ಎಂದು ಡಿಡಿಪಿಐ ಗಂಗಣ್ಣಸ್ವಾಮಿ ಹೇಳಿದ್ದಾರೆ.

ತಮಿಳುನಾಡಿನ ಗಡಿಯಲ್ಲಿರುವ ಕನಕಪುರ ತಾಲೂಕಿನ ಉಯ್ಯಂಬಳಿ, ಕೋಡಿಹಳ್ಳಿ ಹೋಬಳಿಗಳಲ್ಲಿ 122 ಸರಕಾರಿ ಶಾಲೆಗಳಿವೆ. 3,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 122 ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಲು 318 ಮಂದಿ ಶಿಕ್ಷಕರ ಅವಶ್ಯಕತೆ ಇದೆ. ಆದರೆ ಕೇವಲ 115 ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ 115 ಶಿಕ್ಷಕರಲ್ಲಿ 92 ಮಂದಿ ಶಿಕ್ಷಕರು ವರ್ಗಾವಣೆ ಬಯಸಿದ್ದಾರೆ. ಒಂದುವೇಳೆ ಶಿಕ್ಷಕರು ವರ್ಗವಾದರೇ 48 ಶಾಲೆಗಳಿಗೆ ಬೀಗ ಹಾಕಬೇಕಾಗುತ್ತದೆ. ಈ ಹಿನ್ನೆಲೆ 92 ಶಿಕ್ಷಕರು ಸೇರಿದಂತೆ ಉಳಿದ 136 ಶಿಕ್ಷಕರ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ.

ಇದನ್ನೂ ಓದಿ:  ಶತಮಾನದ ಬಾಲಕಿಯರ ಸರ್ಕಾರಿ ಶಾಲೆ ಶಿಥಿಲಾವಸ್ಥೆಯಲ್ಲಿದೆ

ಅಲ್ಲದೇ ಗಡಿ ಭಾಗದ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ ಉಂಟಾಗಿದ್ದು, ಕೇವಲ ಅತಿಥಿ ಶಿಕ್ಷಕರುಗಳೇ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಕನಕಪುರದ ಒಟ್ಟು 78 ಶಾಲೆಗಳಲ್ಲೂ ವಿದ್ಯಾರ್ಥಿಗಳಿದ್ದರೂ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ಒಂದು ವಾರ ಅವಕಾಶ ನೀಡುವಂತೆ ಶಿಕ್ಷಣ ಇಲಾಖೆಗೆ ಡಿಡಿಪಿಐ ಗಂಗಣ್ಣಸ್ವಾಮಿ ಕೋರಿದ್ದರು. ಇದೀಗ ಎರಡು ವಾರ ಕಳೆದರೂ ಡಿಡಿಪಿಐ ಗಂಗಣ್ಣಸ್ವಾಮಿ ಸ್ಪಂದಿಸಿಲ್ಲ.

ಶಿಕ್ಷಕರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ‌ ಮಾಡಬೇಡಿ

ಇನ್ನು ಈ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ‌ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರಂತೆ. ಮುಖ್ಯಮಂತ್ರಿಗಳು ಹೇಳಿದರೂ ವರ್ಗಾವಣೆ ಮಾಡಿಬೇಡಿ ಎಂದಿದ್ದಾರಂತೆ. ಇನ್ನು ಈ ಸಂಬಂಧ ಇಲಾಖೆ ಆಯುಕ್ತರಿಗೆ ಪತ್ರ ಕೂಡ ಬರೆದಿದ್ದಾರಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Wed, 16 August 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್