AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್

ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್
ಪ್ರಾತಿನಿಧಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 29, 2023 | 11:20 AM

Share

ರಾಮನಗರ, ಜು.29: ನ್ಯಾಯಾಧೀಶ(Judge)ರ ಮನೆಯಲ್ಲೇ‌ ಕಳ್ಳತನ(Theft) ಮಾಡಿದ್ದ ಖದೀಮನನ್ನ ಇದೀಗ ಐಜೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ(Ramanagara) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶೆಯವರ ಮನೆಯಲ್ಲಿ ಜು.25 ರಂದು ಕಳ್ಳತನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಧೀಶೆ ಪತಿಯವರು ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಕಾರ್ಯ ಸನ್ನದ್ಧರಾದ ಪೊಲೀಸರು, ಇದೀಗ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಾಧೀಶರ ಕಾರು ಚಾಲಕನಿಂದಲೇ ನಡೆದಿದ್ದ ಕೃತ್ಯ

ಹೌದು, ಇವತ್ತೀನ ಕಾಲದಲ್ಲಿ ಯಾರನ್ನ ನಂಬುವುದು ತಿಳಿಯದಂತಹ ಪರಿಸ್ಥಿತಿ ಬಂದಿದೆ. ಅದರಂತೆ ನ್ಯಾಯಾಧೀಶರ ಕಾರು ಚಾಲಕನಿಂದಲೇ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಇತ 7 ಗ್ರಾಂ ಚಿನ್ನ, 30ಗ್ರಾಂ ಬೆಳ್ಳಿ ಕಳ್ಳತನವನ್ನ ಮಾಡಿ, ಎಸ್ಕೇಪ್ ಆಗಿದ್ದ. ಈ ಘಟನೆ ನಿಮಿತ್ತ ಐಜೂರು ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಚಾಲಕನನ್ನ ಬಂಧಿಸಿದ್ದು, ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:Yadgir police: ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ: 1 ತಿಂಗಳಲ್ಲಿ ಪತ್ನಿಯ ಕಳ್ಳಾಟ ಬಯಲಿಗೆಳೆದ ಯಾದಗಿರಿ ಪೊಲೀಸರು!

ಟ್ರಂಡ್ಸ್ ಶಾಫಿಂಗ್ ಮಾಲ್ ಒಳಗೆ ನುಗ್ಗಿದ ಕಳ್ಳ; ಖದೀಮನಿಗಾಗಿ ಪೊಲೀಸರ ಶೋಧ

ದಾವಣಗೆರೆ: ನಗರದ ಬಿಪಿ ರಸ್ತೆಯಲ್ಲಿರುವ ಟ್ರೆಂಡ್ಸ್ ಶಾಫಿಂಗ್ ಮಾಲ್ ಒಳಗೆ ಕಳ್ಳ ನುಗ್ಗಿರುವ ಘಟನೆ ನಡೆದಿದೆ. ಬೆಳಗ್ಗೆ ಸೆಕ್ಯೂರಿಟಿಗೆ ಕಳ್ಳ ಕಾಣಿಸಿಕೊಂಡಿದ್ದು, ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಹಿನ್ನಲೆ ಕಳ್ಳನನ್ನು ಹಿಡಿಯಲು ಕಳೆದ ಮೂರು ಗಂಟೆಗಳಿಂದ ಪೊಲೀಸರು ಇಡೀ ಶಾಫಿಂಗ್​ ಮಾಲ್​ನ್ನು ಶೋಧ ಮಾಡುತ್ತಿದ್ದಾರೆ. ಹೌದು ಇದೀಗ ಡಾಗ್ ಸ್ಕ್ವಾಡ್, ಹಾಗೂ ಕೆಟಿಜೆ ನಗರ ಠಾಣೆ ಪೊಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡುತ್ತಿದ್ದು, ಶಾಪಿಂಗ್ ಮಾಲ್ ಮುಂಭಾಗದಲ್ಲಿ ಜನರು ಜಮಾಯಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Sat, 29 July 23

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್