ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ, ಮೂಲಭೂತ ಸೌಕರ್ಯ ಸಿಗಬೇಕು ಅಷ್ಟೇ -ರಾಮಲಿಂಗಾ ರೆಡ್ಡಿ
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಮನಗರ, ಅ.27: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಕ್ರಿಯೆ ನೀಡಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಆದರೆ ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದ್ರೆ ಯಾವುದೇ ನಷ್ಟ ಆಗಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆ ಆದರೆ ತೊಂದರೆ ಇಲ್ಲ ಎಂದರು.
ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಉಪವಾಸ ಸತ್ಯಾಗ್ರಹ: ಡಿಕೆಶಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ
ಇನ್ನು ಇದೇ ವೇಳೆ ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣತಿಂದಿಲ್ಲ ಎಂದು ಪ್ರಮಾಣ ಮಾಡಲಿ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ. ಅವರ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕು ಅಂತ ಜನ ತೀರ್ಮಾನ ಮಾಡ್ತಾರೆ. ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ. ಅವರ ಸರ್ಕಾರ ಇದ್ದಾಗ ಅವರೇನು ಮಾಡಿದ್ದಾರೆ ಅಂತಾ ಗೊತ್ತು. ನಮ್ಮ ಮೇಲೆ ಆರೋಪ ಮಾಡುವ ಬದಲು ಲೋಕಾಯುಕ್ತಕ್ಕೆ ದೂರು ಕೊಡಲಿ. ಇಲ್ಲ ಯಾವುದೇ ತನಿಖೆಗೆ ಒತ್ತಾಯ ಮಾಡಲಿ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.
ನಮ್ಮ ಪಾಡಿಗೆ ನಮ್ಮನ್ನ ಬಿಟ್ಟುಬಿಡಿ
ಮತ್ತೊಂದೆಡೆ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು ಜಾಣ ಉತ್ತರ ನೀಡಿದ್ದಾರೆ. ನಗುತ್ತಲೇ ನಮ್ಮನ್ಯಾಕೆ ಕಾಂಟ್ರೊವರ್ಸಿಗೆ ಎಳೀತಿರಾ. ತುಮಕೂರಿನವರು ಶಾಂತಿಯಿಂದ ಇದ್ದೀವಪ್ಪ. ನಮ್ಮ ಪಾಡಿಗೆ ನಮ್ಮನ್ನ ಬಿಟ್ಟುಬಿಡಿ ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ