ಬಸ್‌ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಖಾಸಗಿ ಬಸ್‌ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಮಂಗಳವಾರಪೇಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕೂಡ್ಲೂರಿನ ಸಚಿನ್(24), ಪ್ರತಾಪ್(24) ಮೃತಪಟ್ಟಿದ್ದಾರೆ. ಮೈಸೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಖಾಸಗಿ ಬಸ್ ಪೆಟ್ರೋಲ್ ಹಾಕಿಸಿಕೊಳ್ಳಲು ಕ್ರಾಸ್​ ತೆಗೆದುಕೊಂಡಿದೆ. ಈ ವೇಳೆ ರಸ್ತೆ ತಿರುವಿನಲ್ಲಿದ್ದ ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮೃತ ದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. […]

ಬಸ್‌ ಡಿಕ್ಕಿ, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
Follow us
ಸಾಧು ಶ್ರೀನಾಥ್​
|

Updated on:Mar 02, 2020 | 12:21 PM

ರಾಮನಗರ: ಖಾಸಗಿ ಬಸ್‌ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಮಂಗಳವಾರಪೇಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕೂಡ್ಲೂರಿನ ಸಚಿನ್(24), ಪ್ರತಾಪ್(24) ಮೃತಪಟ್ಟಿದ್ದಾರೆ.

ಮೈಸೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಖಾಸಗಿ ಬಸ್ ಪೆಟ್ರೋಲ್ ಹಾಕಿಸಿಕೊಳ್ಳಲು ಕ್ರಾಸ್​ ತೆಗೆದುಕೊಂಡಿದೆ. ಈ ವೇಳೆ ರಸ್ತೆ ತಿರುವಿನಲ್ಲಿದ್ದ ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮೃತ ದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಂತರ ಬಸ್ ಚಾಲಕ‌ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬಸ್​ನಲ್ಲಿ ಪ್ರಯಾಣಿಕರಿರಲಿಲ್ಲ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:44 am, Mon, 2 March 20