Bengaluru Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ, ಆಟೋಗಳಿಗೆ ನಿಷೇಧ, AI ಆಧಾರಿತ ಕ್ಯಾಮೆರಾ ಅಳವಡಿಕೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

Bengaluru Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ, ಆಟೋಗಳಿಗೆ ನಿಷೇಧ, AI ಆಧಾರಿತ ಕ್ಯಾಮೆರಾ ಅಳವಡಿಕೆ
ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇ
Follow us
ಆಯೇಷಾ ಬಾನು
|

Updated on: Jul 26, 2023 | 8:28 AM

ರಾಮನಗರ, ಜುಲೈ 26: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಆಗಸ್ಟ್ 1 ರಿಂದ ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಹೇರಿದೆ. ಹಾಗೂ ಈ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡುವ ಸಂಬಂಧ ಫೀಲ್ಡ್‌ಗೆ ಇಳಿದಿರುವ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್(Alok Kumar) ಅವರು ಎರಡನೇ ಬಾರಿ ಭೇಟಿ ನೀಡಿ ನೂತನ ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನೂತನ ಹೆದ್ದಾರಿಯಲ್ಲಿ ಯಾವುದಕೆಲ್ಲಾ ನಿಷೇಧ

ದ್ವಿಚಕ್ರ ವಾಹನಗಳು, ಆಟೋ, ಟ್ರಾಕ್ಟರ್‌ಗಳು, ಮೋಟಾರ್ ರಹಿತ ವಾಹನಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು, ಕ್ವಾಡ್ರಿ ಸೈಕಲ್‌ಗಳ ಸಂಚಾರವನ್ನು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಷೇಧಿಸಲಾಗಿದೆ. ಇವುಗಳು ನಿಧಾನವಾಗಿ ಚಲಿಸುವ ವಾಹನಗಳು. ಎಕ್ಸ್‌ಪ್ರೆಸ್‌ವೇ ವೇಗವಾಗಿ ಚಲಿಸುವ ವಾಹನಗಳಿಗೆ ಮಾಡಲಾಗಿದೆ. ಹೀಗಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ನಿಧಾನಗತಿಯ ವಾಹನಗಳಿಗೆ ಪರ್ಯಾಯ ಮಾರ್ಗಗಳು ಮತ್ತು ಪ್ರತ್ಯೇಕ ರಸ್ತೆಗಳು ಲಭ್ಯವಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ AI ಆಧಾರಿತ ಕ್ಯಾಮೆರಾ ಅಳವಡಿಕೆ

ನೂತನ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದ ಹಿನ್ನೆಲೆ ಅವಘಡ ತಡೆಯಲು ಫೀಲ್ಡ್​ಗೆ ಇಳಿದ ಎಡಿಜಿಪಿ ಅಲೋಕ್ ಕುಮಾರ್ ಮಂಗಳವಾರ (ಜು.25) 2ನೇ ಬಾರಿಗೆ ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅತಿ ವೇಗದ ಚಾಲನೆಯನ್ನು ನಿಭಾಯಿಸಲು, ಪೊಲೀಸ್ ಇಲಾಖೆಯು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ. ಶೀಘ್ರದಲ್ಲೇ ಮೈಸೂರಿನಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಪ್ರಯೋಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಸಂಚಾರ ಅಪಾಯಗಳು! ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ನೂತನ ಹೆದ್ದಾರಿ

ಇನ್ನು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ರಸ್ತೆ ಸುರಕ್ಷತೆ ಸಂಬಂಧಿತ ಪರಿಶೀಲನೆ ನಡೆಸಿದೆ. ಅತಿ ವೇಗ ಸಂಚಾರವನ್ನು ಪತ್ತೆ ಹಚ್ಚಲು ಪ್ರಾಯೋಗಿಕ ಆಧಾರದ ಮೇಲೆ AI ಆಧಾರಿತ ಕ್ಯಾಮರಾಗಳನ್ನು ನಿಯೋಜಿಸಲಾಗಿದೆ. ಶೀಘ್ರದಲ್ಲೇ ಮೈಸೂರು ನಗರದಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಪರಿಚಯಿಸಲಾಗುವುದು, ಈ ನಿಟ್ಟಿನಲ್ಲಿ ನಾಗರಿಕರ ಯಾವುದೇ ಸಲಹೆ ಸ್ವಾಗತಾರ್ಹ ಎಂದು ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಹಲವು ವಾಹನಗಳು ರಾಂಗ್ ರೂಟ್‌ನಲ್ಲಿ ಸಂಚರಿಸುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಇತರ ಪ್ರಯಾಣಿಕರಿಗೆ ಅಪಾಯ ತಂದೊಡ್ಡುತ್ತಿವೆ. ಹೆದ್ದಾರಿಯಲ್ಲಿ ಯಾರಾದರೂ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದರೆ ಲೈಸೆನ್ಸ್ ರದ್ದುಪಡಿಸುವುದಾಗಿ ಎಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್