ರಾಮನಗರ: ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ (Selfie Video) ಮಾಡಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ರಾಮನಗರ(Ramanagara) ಜಿಲ್ಲೆ ವಾಸುದೇವಪುರ ಗ್ರಾಮದಲ್ಲಿ ನಡೆದಿದೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಶಿವರಾಜ್(35) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿವರಾಜ್ ತನ್ನ ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಶಿವರಾಜ್ಗೆ ತೀವ್ರ ಕಿರುಕುಳ ಶುರುವಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ಈ ಬಗ್ಗೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.