AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್‌ನ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್‌ರನ್ನು ತಂದಿದ್ದೇವೆ -ಸಿ.ಪಿ.ಯೋಗೇಶ್ವರ್

5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಡಿ.ಕೆ.ಸುರೇಶ್ ಗೆಲ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಅಂತ ಮಂಜುನಾಥ್ ರನ್ನ ತಂದಿದ್ದೇವೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಚಿವ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಡಾ.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

ಡಿಕೆ ಸುರೇಶ್‌ನ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್‌ರನ್ನು ತಂದಿದ್ದೇವೆ -ಸಿ.ಪಿ.ಯೋಗೇಶ್ವರ್
ಸಿ.ಪಿ ಯೋಗೇಶ್ವರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಆಯೇಷಾ ಬಾನು|

Updated on: Mar 17, 2024 | 2:50 PM

Share

ರಾಮನಗರ, ಮಾರ್ಚ್​.17: ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ (CP Yogeshwar) ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆಂಬ ಡಿಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ತಿರುಗೇಟು ನೀಡಿದ್ದಾರೆ. 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಡಿ.ಕೆ.ಸುರೇಶ್ (DK Suresh) ಗೆಲ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಅಂತ ಮಂಜುನಾಥ್ (Dr. Manjunath) ರನ್ನ ತಂದಿದ್ದೇವೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಚಿವ ಯೋಗೇಶ್ವರ್ ಹೇಳಿದರು.

ನಾನು ಪಾರ್ಲಿಮೆಂಟ್​ಗೆ ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿ ಇರಬೇಕೆಂದು ನನ್ನ ನಿಲುವು. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡ್ತಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ. ಡಾ.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡ್ತಿದ್ದರು? ಕಳೆದ ಬಾರಿ ಮುನಿರತ್ನ ಕಾಂಗ್ರೆಸ್ ಪರವಾಗಿದ್ದರು, ಆದರೂ ಬಿಜೆಪಿಗೆ ಅಲ್ಲಿ 30 ಸಾವಿರ ಲೀಡ್ ಇತ್ತು. ಇವತ್ತು ಮುನಿರತ್ನ ಬಿಜೆಪಿಯಲ್ಲಿದ್ದಾರೆ. ಹಾಗಾಗಿ ನಮ್ಮ ಗೆಲುವು ನಿಶ್ಚಿತ. ನಮ್ಮ ದೌರ್ಭಾಗ್ಯ ನಾವು, ಜೆಡಿಎಸ್ ಕಿತ್ತಾಡಿ ಅವರಿಗೆ ಲಾಭ ಆಗಿತ್ತು. ಈಗ ನಾವು, ಜೆಡಿಎಸ್ ನವರು ಒಂದಾಗಿದ್ದೇವೆ. ದೇವೇಗೌಡರು ಬಿಜೆಪಿ ಜೊತೆಗೆ ಒಂದಾಗಿದ್ದಾರೆ ಎಂದರು.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

28 ಕ್ಷೇತ್ರಗಳದ್ದು ಒಂದು ಲೆಕ್ಕವಾದ್ರೆ, ಬೆಂಗಳೂರು ಗ್ರಾಮಾಂತರ ಅಖಾಡದ್ದೇ ಮತ್ತೊಂದು ಲೆಕ್ಕ. ಇದು ಡಿ.ಕೆ.ಸುರೇಶ್ ವರ್ಸಸ್ ಡಾ.ಸಿ.ಎನ್​​​.ಮಂಜುನಾಥ್ ನಡುವಿನ ಕದನವಲ್ಲ. ಡಿಕೆ ಬ್ರದರ್ಸ್ ವರ್ಸಸ್ ಹೆಚ್‌ಡಿಕೆ ನಡುವಿನ ಯುದ್ಧ. ಈಗಾಗ್ಲೇ ದೋಸ್ತಿಗಳು ಹೃದಯವಂತ ಡಾಕ್ಟರ್‌ ಕಣಕ್ಕಿಳಿಸಿ ಪ್ರಾಮಾಣಿಕ ವರ್ಸಸ್ ಭ್ರಷ್ಟಾಚಾರ ಅಂತಾ ತಂತ್ರ ಹೂಡಿದೆ. ಇದಕ್ಕೆ ಕೌಂಟರ್ ನೀಡಲು ಡಿಕೆ ಬ್ರದರ್ಸ್​, ಸೈಲೆಂಟಾಗಿ ಪ್ಲ್ಯಾನ್ ಮಾಡ್ತಿದ್ದಾರೆ. ಅದಕ್ಕಾಗಿ ನಿನ್ನೆ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನೆಪದಲ್ಲಿ ಚುನಾವಣಾ ತಂತ್ರಗಾರಿಕೆ ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಮಂಜುನಾಥ್ ಕಣಕ್ಕಿಳಿದಿರೋದ್ರಿಂದ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ನಾಯಕರು ಬೇಸರಗೊಂಡಿದ್ದಾರೆ ಅಂತಾ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಡಿಕೆ ಬ್ರದರ್ಸ್ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ