ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಮನಗರದಲ್ಲಿ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಸ್ಥಾಪನೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸೆ.8 ರಂದು ರಾಮನಗರ ಬಂದ್​ಗೆ ಕರೆ ಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬಂದ್ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ ಎಂದರು.

ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಡಿಕೆ ಶಿವಕುಮಾರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Sep 05, 2023 | 4:52 PM

ರಾಮನಗರ, ಸೆಪ್ಟೆಂಬರ್ 5: ರಾಮನಗರದಿಂದ (Ramanagara) ಕನಕಪುರಕ್ಕೆ (Kanakapura) ಮೆಡಿಕಲ್ ಕಾಲೇಜು (Medical College) ಸ್ಥಳಾಂತರಗೊಳ್ಳುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಮಂಗಳವಾರ ಮಾತನಾಡಿದ ಅವರು, ಕನಕಪುರಕ್ಕೆ ಮೊದಲೇ ಮೆಡಿಕಲ್ ಕಾಲೇಜು ಮಂಜೂರು ಆಗಿತ್ತು. ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬಜೆಟ್​ನಲ್ಲಿ ಘೋಷಣೆ ಮಾಡಿದ್ದರು. ಈಗ ಎರಡೂ ಕಡೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದೆ. ಕನಕಪುರದಲ್ಲಿ ನಿರ್ಮಾಣ ಆಗುತ್ತಿರುವ ಕಾಲೇಜು ರಾಮನಗರ ಬಳಿ ಇದೆ. ರಾಮನಗರದಲ್ಲಿ ಯೂನಿವರ್ಸಿಟಿ ಆಗಲಿದೆ ಎಂದು ಹೇಳಿದ್ದಾರೆ.

ಮೆಡಿಕಲ್ ಕಾಲೇಜಿಗೆ ರಾಮನಗರ, ಕನಕಪುರದಲ್ಲಿ ಟೆಂಡರ್ ಆಗಿದೆ. ನನ್ನ ಆದ್ಯತೆ ಮೊದಲು ರಾಮನಗರ, ನಂತರ ಕನಕಪುರ ಎಂದು ಶಿವಕುಮಾರ್ ಹೇಳಿದ್ದಾರೆ.

ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸೆ.8 ರಂದು ರಾಮನಗರ ಬಂದ್​ಗೆ ಕರೆ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಂದ್ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ ಎಂದರು.

ರಾಮನಗರದಲ್ಲಿ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಸ್ಥಾಪನೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಸಮಿತಿ ಬಂದ್​ಗೆ ಕರೆ ನೀಡಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿಯ ಮೆಡಿಕಲ್ ಕಾಲೇಜು ಯೋಜನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಬಲವಂತವಾಗಿ ರಾಜೀವ್ ಗಾಂಧಿ ವಿವಿ ಅವರಣದಿಂದ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ ಎಂದು‌ ಸಮಿತಿ ಆರೋಪಿಸಿದೆ.

ಇದನ್ನೂ ಓದಿ: ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್, ಸೆ.8ರಂದು ರಾಮನಗರ ಬಂದ್​ಗೆ ಕರೆ

ಭಾರತ್ ಜೋಡೋ ಯಾತ್ರೆ ಸ್ಮರಣಾರ್ಥ ಕಾಲ್ನಡಿಗೆ; ಡಿಕೆ ಶಿವಕುಮಾರ್

ಸೆಪ್ಟೆಂಬರ್ 7ರಂದು ಭಾರತ್ ಜೋಡೋ ಯಾತ್ರೆ 1 ವರ್ಷ ಪೂರೈಸುತ್ತಿರುವ ಕಾರಣ ಅದರ ಸ್ಮರಣಾರ್ಥ ರಾಮನಗರದಲ್ಲಿ ಕಾಲ್ನಡಿಗೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್​ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಕೆಲವು ಮಂದಿ ಸಚಿವರು 1 ಗಂಟೆ ಪಾದಯಾತ್ರೆ ಮಾಡುತ್ತೇವೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕಾಲ್ನಡಿಗೆ ಮಾಡುತ್ತೇವೆ. ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಮನಗರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us