AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್

Channapattana: ಒಟ್ಟಾರೆ ಹೆಚ್ ಡಿಕೆ ರನ್ನ ಮಣಿಸಲು ಸಿದ್ದು ಮಾಸ್ಟರ್ ಮಾಡಿ ಇಬ್ಬರಲ್ಲಿ ಒಬ್ಬರನ್ನ ಕಣಕ್ಕೆ ಇಳಿಸುತ್ತಾರೆ ಎಂದು ಹೇಳಲಾಗುತ್ತಿದ್ದು, ಇದೇ ವಿಚಾರ ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆಗೂ ಕೂಡ ಕಾರಣವಾಗಿದೆ.

Siddaramaiah: ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್
ಮದಗಜಗಳ ಕಾದಾಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ನಟಿ ರಮ್ಯಾರನ್ನ ಕಣಕ್ಕಿಳಿಸುವ ಗೇಮ್​ ಪ್ಲಾನ್
TV9 Web
| Edited By: |

Updated on:Feb 16, 2023 | 9:55 AM

Share

ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಚುನಾವಣೆ ಕಾವು ರಂಗು ಪಡೆದಿದೆ. ಅದರಲ್ಲೂ ಬೊಂಬೆನಗರಿ ಚನ್ನಪಟ್ಟಣದಲ್ಲಿ (Channapattana) ರಣಕಣ ಕಾವು ಪಡೆದಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ಮಧ್ಯೆ ಇಬ್ಬರಿಗೂ ಟಕ್ಕರ್ ಕೊಡಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದ್ದು, ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಅಥವಾ ಚಿತ್ರ ನಟಿ ರಮ್ಯಾರನ್ನ (Actress Ramya) ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದು, ಚುನಾವಣಾ ಕಣ ಮತ್ತಷ್ಟು ರಂಗು ಪಡೆಯಲಿದೆ.

ಹೌದು ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಮೂರು ಪಕ್ಷಗಳು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಅದರಲ್ಲೂ ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣಾ ಕಾವು ರಂಗೇರಿದೆ. ದಳಪತಿ ಹಾಗೂ ಸೈನಿಕನ ನಡುವೆ ನೇರಾ ಪೈಪೋಟಿ ಏರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನಡುವೆ ಹಣಾಹಣಿ ನಡೆಯುತ್ತಿದೆ.

ಇದೇ ವೇಳೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನ ಬಲಪಡಿಸಬೇಕು ಎಂದು, ಇಬ್ಬರು ನಾಯಕರಿಗೂ ಟಕ್ಕರ್ ಕೊಡಲು ಮಾಜಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರವನ್ನ ಹೇಗಾದರೂ ಮಾಡಿ ಗೆಲ್ಲಿಸಿಕೊಳ್ಳಲು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅಥವಾ ಚಿತ್ರನಟಿ ರಮ್ಯಾರನ್ನ ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

Will former MP, Actress Ramya contest in Assembly Elections from Mandya 2

ಇದೇ ವಿಚಾರ ಕ್ಷೇತ್ರದಲ್ಲಿ ಸಾಕಷ್ಟು ಸಂಚಲನ ಸಹಾ ಮೂಡಿಸಿದೆ. ಈ ಇಬ್ಬರು ನಾಯಕರು ಬಂದರೆ ಕ್ಷೇತ್ರದ ರಾಜಕೀಯ ಚಿತ್ರಣವೇ ಬದಲಾಗಲಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಂಸದ ಡಿ ಕೆ ಸುರೇಶ್, ಈ ಬಗ್ಗೆ ನನಗೆ ಗೊತ್ತಿಲ್ಲ. ಸದ್ಯ ನಾನು ಲೋಕಸಭಾ ಸದಸ್ಯನಿದ್ದೇನೆ. ಎಲ್ಲ ಕಡೆ ಪ್ರವಾಸ ಮಾಡಿ ಸಂಘಟನೆ ಮಾಡುತ್ತಿದ್ದೇನೆ. ಎಲ್ಲ ಕಡೆ ಆಹ್ವಾನ ಇದೆ. ನನಗೆ ಆಸಕ್ತಿ ಇಲ್ಲ ಎನ್ನುತ್ತಿದ್ದಾರೆ.

ಅಂದಹಾಗೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಷ್ಟಕಷ್ಟೆ. ಕಳೆದ ಬಾರಿ ಚುನಾವಣೆಯಲ್ಲಿ ಹೆಚ್ ಎಂ ರೇವಣ್ಣ ಅವರನ್ನ ಕಣಕ್ಕೆ ಇಳಿಸಿ 30 ಸಾವಿರ ಮತಗಳು ಪಡೆಯುವಂತೆ ಮಾಡಲಾಗಿದೆ. ಆದರೆ ಸಂಘಟನೆ, ಲೀಡರ್ ಇಲ್ಲದಂತೆ ಆಗಿದ್ದು, ಕಾಂಗ್ರೆಸ್ ನಲ್ಲಿಯೇ ಒಳಜಗಳ ಏರ್ಪಟ್ಟಿದೆ. ಹೀಗಾಗಿ ಒಂದು ಕಡೆ ಪಕ್ಷ ಸಂಘಟನೆ, ಮತ್ತೊಂದು ಕಡೆ ಹೆಚ್ ಡಿಕೆ ಹಾಗೂ ಸೈನಿಕನ ತಿಕ್ಕಾಟದಲ್ಲಿ ಕಾಂಗ್ರೆಸ್ ಲಾಭ ಪಡೆಯಲು ರಮ್ಯಾರನ್ನ ಕಣಕ್ಕೆ ಇಳಿಸುವ ಪ್ಲಾನ್ ಇದೆ ಎನ್ನಲಾಗುತ್ತಿದೆ.

ಇನ್ನು ಚನ್ನಪಟ್ಟಣದಿಂದ ಸಮರ್ಥವಾದ ಅಭ್ಯರ್ಥಿ ಇಲ್ಲ. ಸದ್ಯ ಉದ್ಯಮಿ ಪ್ರಸನ್ನ ಗೌಡರನ್ನ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಆದರೆ ವರ್ಚಸ್ಸು ಇಲ್ಲ. ಹೀಗಾಗಿ ರಮ್ಯಾ ಅಥವಾ ಸುರೇಶ್ ರನ್ನ ಕಣಕ್ಕೆ ಇಳಿಸಿದ್ದೇ ಆದರೆ ಪಕ್ಷ ಸಂಘಟನೆ ಜೊತೆ ಗೆಲವು ಕೂಡ ಸಾಧ್ಯವಾಗಲಿದೆ ಎಂಬ ಲೆಕ್ಕಚಾರವಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಇಬ್ಬರ ಸ್ವರ್ಧೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾವು ಸುರೇಶ್ ರನ್ನ ಚುನಾವಣೆಯಲ್ಲಿ ಸ್ವರ್ಧೆ ಮಾಡುವಂತೆ ಒತ್ತಾಯ ಮಾಡಿದ್ದೇವೆ ಎನ್ನುತ್ತಿದ್ದಾರೆ.

ಒಟ್ಟಾರೆ ಹೆಚ್ ಡಿಕೆ ರನ್ನ ಮಣಿಸಲು ಸಿದ್ದು ಮಾಸ್ಟರ್ ಮಾಡಿ ಇಬ್ಬರಲ್ಲಿ ಒಬ್ಬರನ್ನ ಕಣಕ್ಕೆ ಇಳಿಸುತ್ತಾರೆ ಎಂದು ಹೇಳಲಾಗುತ್ತಿದ್ದು, ಇದೇ ವಿಚಾರ ಜಿಲ್ಲೆಯಲ್ಲಿ ಬಿಸಿ ಬಿಸಿ ಚರ್ಚೆಗೂ ಕೂಡ ಕಾರಣವಾಗಿದೆ. ಇಬ್ಬರಲ್ಲಿ ಯಾರು ಸ್ವರ್ಧಿಸುತ್ತಾರೆ ಕಾದು ನೋಡಬೇಕು.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9, ರಾಮನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:26 am, Wed, 15 February 23

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ