AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temple Run: ಅಪ್ಪನ ಕರ್ಮಭೂಮಿ ರಾಮನಗರದಲ್ಲಿ ಟೆಂಪಲ್ ಪಾಲಿಟಿಕ್ಸ್, ಮಹಿಳೆಯರಿಗೆ ಉಚಿತ ಧಾರ್ಮಿಕ ಪ್ರವಾಸ ಭಾಗ್ಯ ಕಲ್ಪಿಸಿದ ನಿಖಿಲ್ ಕುಮಾರಸ್ವಾಮಿ!

Nikhil Kumaraswamy: ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರ ಹಾಗೂ ಹೋಬಳಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಮಹಿಳಾ ಮತದಾರರಿಗೆ ಉಚಿತ ಪ್ರವಾಸ ಭಾಗ್ಯ ಕಲ್ಪಿಸುತ್ತಿದ್ದಾರೆ. ಎರಡು ದಿನಕ್ಕೊಮ್ಮೆ ಎರಡು ದಿನಗಳ ಕಾಲ ಧರ್ಮಸ್ಥಳ ಹಾಗೂ ಕುಕ್ಕೆ ಧಾರ್ಮಿಕ ಕ್ಷೇತ್ರಗಳಿಗೆ ಕಳುಹಿಸಿಕೊಡಲಾಗುತ್ತಿದೆ.

Temple Run: ಅಪ್ಪನ ಕರ್ಮಭೂಮಿ ರಾಮನಗರದಲ್ಲಿ ಟೆಂಪಲ್ ಪಾಲಿಟಿಕ್ಸ್, ಮಹಿಳೆಯರಿಗೆ ಉಚಿತ ಧಾರ್ಮಿಕ ಪ್ರವಾಸ ಭಾಗ್ಯ ಕಲ್ಪಿಸಿದ ನಿಖಿಲ್ ಕುಮಾರಸ್ವಾಮಿ!
ಅಪ್ಪನ ಕರ್ಮಭೂಮಿ ರಾಮನಗರದಲ್ಲಿ ಟೆಂಪಲ್ ಪಾಲಿಟಿಕ್ಸ್, ಮಹಿಳೆಯರಿಗೆ ಉಚಿತ ಧಾರ್ಮಿಕ ಪ್ರವಾಸ ಭಾಗ್ಯ ಕಲ್ಪಿಸುತ್ತಿರುವ ನಿಖಿಲ್ ಕುಮಾರಸ್ವಾಮಿ!
TV9 Web
| Updated By: ಸಾಧು ಶ್ರೀನಾಥ್​|

Updated on: Jan 21, 2023 | 12:42 PM

Share

ಚುನಾವಣೆಗೆ (Karnataka Assembly Elections 2023) ಇನ್ನೇನೂ ಕೆಲವು ತಿಂಗಳುಗಳು ಬಾಕಿ ಇವೆ. ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಅಭ್ಯರ್ಥಿಗಳು ಸಹಾ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮನಗರ ಕ್ಷೇತ್ರದಲ್ಲಿ ರಾಜಕೀಯ ಸೂಕ್ಷ್ಮವೊಂದು ಧಾರ್ಮಿಕ ಸೂಕ್ಷ್ಮದೊಂದಿಗೆ ತಳುಕು ಹಾಕಿಕೊಂಡಿದೆ. ರೇಷ್ಮೆನಗರಿ ರಾಮನಗರದಲ್ಲಿ ಟೆಂಪಲ್ ಪಾಲಿಟಿಕ್ಸ್ (Temple Run) ಆರಂಭವಾಗಿದೆ. ಮಹಿಳಾ (Women) ಮತದಾರರ ಮನಸ್ಸು ಗೆಲ್ಲಲು ಉಚಿತ ಧಾರ್ಮಿಕ ಕ್ಷೇತ್ರಗಳ ಪ್ರವಾಸ ಭಾಗ್ಯ ಕಲ್ಪಿಸುತ್ತಿದ್ದಾರೆ. ಮಹಿಳಾ ಮತದಾರರಿಗೆ ಎರಡು ದಿನ ಉಚಿತ ಪ್ರವಾಸ ಭಾಗ್ಯ: ಹೌದು ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಬಾಕಿ ಇವೆ. ಈಗಾಗಲೇ ಎಲ್ಲ ಪಕ್ಷಗಳು ಮತದಾರನ್ನ ಸೆಳೆಯಲು ಮುಂದಾಗಿವೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಅದೇ ರೀತಿ ಜೆಡಿಎಸ್ (JDS) ಭದ್ರ ಕೋಟೆ, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಶತಾಯಗತಾಯ ಗೆಲ್ಲಲು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಮಹಿಳಾ ಮತದಾರರ ಮನಸ್ಸು ಗೆಲ್ಲಲು ಮಹಿಳಾ ಮತದಾರರಿಗೆ ಉಚಿತ ಪ್ರವಾಸ ಭಾಗ್ಯ ಕಲ್ಪಿಸುತ್ತಿದ್ದಾರೆ.

ಹೌದು ಮಾಜಿ ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಪುತ್ರನಿಗಾಗಿ ರಾಮನಗರ ವಿಧಾನಸಭಾ ಕ್ಷೇತ್ರವನ್ನ ಶಾಸಕಿ ಅನಿತಾ ಕುಮಾರಸ್ವಾಮಿ ತ್ಯಾಗ ಮಾಡಿದ್ದಾರೆ. ಈಗಾಗಲೇ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ನಿಂದ ನಿಖಿಲ್ ಸ್ವರ್ಧೆ ಮಾಡುತ್ತಾರೆ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಮಹಿಳಾ ಮತದಾರರ ಮನಸ್ಸನ್ನ ಗೆಲ್ಲಲು ಮಹಿಳೆಯರಿಗೆ ಉಚಿತವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಭಾಗ್ಯ ಕಲ್ಪಿಸುತ್ತಿದ್ದಾರೆ.

ಸದ್ಯಕ್ಕೆ ಮಹಿಳೆಯರು ಕೂಡ ನಿಖಿಲ್ ಆಮಿಷಕ್ಕೆ ಬೋಲ್ಡ್ ಆಗಿದ್ದಾರೆ!

ಅಂದಹಾಗೆ ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರ ಹಾಗೂ ಹೋಬಳಿಗಳಲ್ಲಿ ಮಹಿಳಾ ಮತದಾರರಿಗೆ ಉಚಿತ ಪ್ರವಾಸ ಭಾಗ್ಯ ಕಲ್ಪಿಸುತ್ತಿದ್ದಾರೆ. ಪ್ರತಿ ಎರಡು ದಿನಗಳಿಗೆ ಒಮ್ಮೆ ಎರಡು ದಿನಗಳ ಕಾಲ ಧರ್ಮಸ್ಥಳ ಹಾಗೂ ಕುಕ್ಕೆ ಧಾರ್ಮಿಕ ಕ್ಷೇತ್ರಗಳಿಗೆ ಕಳುಹಿಸಿಕೊಡಲಾಗುತ್ತಿದೆ. ಉಚಿತ ಊಟ, ವಸತಿ ವ್ಯವಸ್ಥೆಯನ್ನ ಕಲ್ಪಿಸುತ್ತಿದ್ದಾರೆ. ಪ್ರತಿ ಎರಡು ದಿನಗಳಿಗೆ ಒಮ್ಮೆ ಸುಮಾರು ಹತ್ತು ಬಸ್ ಗಳ ಮೂಲಕ ಮಹಿಳೆಯರನ್ನ ಧರ್ಮಸ್ಥಳಕ್ಕೆ ಕಳುಹಿಸುತ್ತಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೇ ಬೇಕು ಎಂದು ನಿಖಿಲ್ ಪಣ ತೊಟ್ಟಿದ್ದಾರೆ. ಮಹಿಳೆಯರು ಕೂಡ ಇದಕ್ಕೆ ಬೋಲ್ಡ್ ಆಗಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ 9, ರಾಮನಗರ

ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ