ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಿದರೆ ಬಿಜೆಪಿಗೆ ದೊಡ್ಡ ಕಳಂಕ ಅಂಟಿಕೊಳ್ಳಲಿದೆ: ರಂಭಾಪುರಿ ಶ್ರೀ

ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಆದರೆ, ಯಾರು ಏನೇ ಹೇಳಿದರೂ ನಮಗೆ ಆತ್ಮವಿಶ್ವಾಸವಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ರಂಭಾಪುರಿ ಪೀಠದ ಜಗದ್ಗುರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಿದರೆ ಬಿಜೆಪಿಗೆ ದೊಡ್ಡ ಕಳಂಕ ಅಂಟಿಕೊಳ್ಳಲಿದೆ: ರಂಭಾಪುರಿ ಶ್ರೀ
ರಂಭಾಪುರಿ ಶ್ರೀ

ರಾಯಚೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪರನ್ನು ಬದಲಾವಣೆ ಮಾಡಿದ್ರೆ ಬಿಜೆಪಿ ಪಕ್ಷಕ್ಕೆ ದೊಡ್ಡ ಕಳಂಕ ಆಗಲಿದೆ. ರಾಷ್ಟ್ರೀಯ ಪಕ್ಷಕ್ಕೆ ದೊಡ್ಡ ಕಳಂಕ ಅಂಟಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪನವರನ್ನು ಬದಲಿಸಲು ಹೋದರೆ ಪಕ್ಷ ಮುಂದೆ ಬಹುದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಅದರಿಂದ ಬಿಜೆಪಿ ಮೇಲೆ ಬಹುದೊಡ್ಡ ಹೊಡೆತ ಬೀಳುತ್ತದೆ. ಬಿ.ಎಸ್‌. ಯಡಿಯೂರಪ್ಪ ತಮ್ಮ ‌ಇಳಿವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪಗೆ ಎಲ್ಲಾ ಜನಾಂಗದವರು ಬೆಂಬಲ ಕೊಟ್ಟಿದ್ದಾರೆ ಎಂದು ರಂಭಾಪುರಿ ಪೀಠದ ಜಗದ್ಗುರು ಹೇಳಿಕೆ ನೀಡಿದ್ದಾರೆ.

ಅವರ ಜನಪರ ಕಾಳಜಿಯನ್ನು ಯಾರೂ ಅಲ್ಲಗಳೆಯಲು ಆಗುವುದಿಲ್ಲ. ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಆದರೆ, ಯಾರು ಏನೇ ಹೇಳಿದರೂ ನಮಗೆ ಆತ್ಮವಿಶ್ವಾಸವಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ರಂಭಾಪುರಿ ಪೀಠದ ಜಗದ್ಗುರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ನಾವು ಅಷ್ಟೇ ಅಲ್ಲ. ಸುತ್ತೂರು ಶ್ರೀಗಳು, ಆದಿಚುಂಚನಗಿರಿಯವರು ಸಹ ಬೆಂಬಲ ಸೂಚಿಸಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

ದೆಹಲಿ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೇಂದ್ರದ ನಾಯಕರ ಅಪೇಕ್ಷೆಯಿದೆ. ಈ ಅಪೇಕ್ಷೆಯಂತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa)  ದೆಹಲಿ ಪ್ರವಾಸದಿಂದ ರಾಜ್ಯಕ್ಕೆ ಮರಳಿದ ನಂತರ ವಿಶ್ವಾಸ ವ್ಯಕ್ತಪಡಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಜತೆ ರಾಜ್ಯದಲ್ಲಿ ಯಾವುದೇ ಪರ್ಯಾಯ ನಾಯಕತ್ವದ ಬಗ್ಗೆ ಚರ್ಚೆಯಾಗಿಲ್ಲ. ಸದ್ಯಕ್ಕೆ ಎಲ್ಲರೂ ಒಗ್ಗಟ್ಟಾಗಿ ಹೋಗಲು ಜವಾಬ್ದಾರಿ ನೀಡಿದ್ದಾರೆ. ಕೆಲವರು ಸುಧಾರಣೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಜುಲೈ 26ರಂದು ಶಾಸಕಾಂಗ ಪಕ್ಷದ ಸಭೆ ಕರೆಯುತ್ತಿದ್ದೇನೆ. ನಾನು ಸಿಎಂ ಆಗಿ ಜುಲೈ 26ಕ್ಕೆ 2 ವರ್ಷ ಪೂರ್ಣಗೊಳ್ಳಲಿದೆ. ಬಿಎಲ್​ಪಿ ಸಭೆ ಕರೆದು ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಸಲಹೆ ನೀಡಿದ್ದಾರೆ; ಅಮಿತ್ ಶಾ ಭೇಟಿ ಬಳಿಕ ಬಿ ಎಸ್ ಯಡಿಯೂರಪ್ಪ ಹೇಳಿಕೆ

ದೆಹಲಿ ಪ್ರವಾಸ ಯಶಸ್ವಿ; ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಸಿಎಂ ಯಡಿಯೂರಪ್ಪ ವಿಶ್ವಾಸ