AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ತನಿಖೆ ನಡೆಸಿಲ್ಲ: ಹೈಕೋರ್ಟ್‌ಗೆ ಯುವತಿಯಿಂದ‌ ಅರ್ಜಿ

Ramesh Jarkiholi cd case: ಆರೋಪಿಯ ಸಮರ್ಪಕ ವೈದ್ಯಕೀಯ ಪರೀಕ್ಷೆ ನಡೆದಿಲ್ಲ. ಕೇವಲ ಬಿಪಿ, ಶುಗರ್ ಚೆಕ್ ಮಾಡಿದ್ದಾರೆ. ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದಿಲ್ಲ. ಆರೋಪಿಗೆ ಗೃಹ ಸಚಿವರೊಂದಿಗೆ ಸಂಪರ್ಕವಿದೆ. ಹೀಗಾಗಿ ಸರ್ಕಾರ ನೇಮಿಸಿದ ತಂಡದಿಂದ‌ ತನಿಖೆ ಸಾಧ್ಯವಿಲ್ಲ ಎಂದು ಸಿಡಿಯಲ್ಲಿರುವ ಯುವತಿ ಹೈಕೋರ್ಟ್‌ ಗಮನ ಸೆಳೆದಿದ್ದಾರೆ.

ರಮೇಶ್ ಜಾರಕಿಹೊಳಿ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ತನಿಖೆ ನಡೆಸಿಲ್ಲ: ಹೈಕೋರ್ಟ್‌ಗೆ ಯುವತಿಯಿಂದ‌ ಅರ್ಜಿ
ರಮೇಶ್​ ಜಾರಕಿಹೊಳಿ
TV9 Web
| Edited By: |

Updated on:Jun 08, 2021 | 1:15 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕಣದಲ್ಲಿ ಆರೋಪಿಯ ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದು ಸೂಕ್ತ ತನಿಖೆ ನಡೆಸಿಲ್ಲ ಎಂದು ಹೈಕೋರ್ಟ್‌ಗೆ ಯುವತಿ ಅರ್ಜಿ ಸಲ್ಲಿಸಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.

ಆರೋಪಿಯ ಸಮರ್ಪಕ ವೈದ್ಯಕೀಯ ಪರೀಕ್ಷೆ ನಡೆದಿಲ್ಲ. ಕೇವಲ ಬಿಪಿ, ಶುಗರ್ ಚೆಕ್ ಮಾಡಿದ್ದಾರೆ. ರಕ್ತ, ವೀರ್ಯ, ಉಗುರು, ಕೂದಲ ಸ್ಯಾಂಪಲ್ ಪಡೆದಿಲ್ಲ. ಇನ್ನು, SIT ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆಯಲ್ಲಿದ್ದಾರೆ. ಆರೋಪಿಗೆ ಗೃಹ ಸಚಿವರೊಂದಿಗೆ ಸಂಪರ್ಕವಿದೆ. ಹೀಗಾಗಿ ಸರ್ಕಾರ ನೇಮಿಸಿದ ತಂಡದಿಂದ‌ ತನಿಖೆ ಸಾಧ್ಯವಿಲ್ಲ ಎಂದು ಸಿಡಿಯಲ್ಲಿರುವ ಯುವತಿ ತಮ್ಮ ಅರ್ಜಿಯಲ್ಲಿ ಹೈಕೋರ್ಟ್‌ ಗಮನ ಸೆಳೆದಿದ್ದಾರೆ.

ಎಸ್ಐಟಿ ರದ್ದುಪಡಿಸಿ ಎಂದು ಕೋರಿದ ಯುವತಿ; ಎಸ್ಐಟಿ, ಸರ್ಕಾರ, ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ

ತನ್ಮೂಲಕ, ರಮೇಶ್ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ಯುವತಿ ಎಸ್ಐಟಿ ತನಿಖೆ ರದ್ದುಪಡಿಸಲು ಕೋರಿದ್ದಾರೆ. ಎಸ್ಐಟಿ ರದ್ದುಪಡಿಸಿ ಹೊಸ ತಂಡ ರಚಿಸಲು ಮನವಿ ಮಾಡಿರುವ ಯುವತಿ ಈವರೆಗಿನ ಎಸ್ಐಟಿ ತನಿಖೆ ಪರಿಗಣಿಸದಂತೆಯೂ ಮನವಿ ಮಾಡಿಕೊಂಡಿದ್ದಾರೆ. ಅರ್ಜಿಯ ಫಲವಾಗಿ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರ ನ್ಯಾಯಪೀಠವು ಎಸ್ಐಟಿ, ಸರ್ಕಾರ, ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (Central Bureau of Investigation – CBI) ತನಿಖೆ ನಡೆಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್​ ಇತ್ತೀಚೆಗೆ ವಿಚಾರಣೆ ನಡೆಸಿತ್ತು. ಈ ವೇಳೆ ಪ್ರಕರಣದ ತನಿಖೆಗೆಂದು ರಚಿಸಿರುವ ವಿಶೇಷ ತನಿಖಾ ದಳ (Special Investigation Team – SIT) ಹೈಕೋರ್ಟ್​ಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಿತು. ಸೀಲ್ ಮಾಡಿದ್ದ ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಸೀಲ್ ತೆರೆದು ವಿಭಾಗೀಯ ಪೀಠ ಪರಿಶೀಲನೆ ನಡೆಸಿತ್ತು.

ಸಿಬಿಐ ತನಿಖೆ ನಡೆಸಬೇಕು ಎಂದು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ರಮೇಶ್ ಜಾರಕಿಹೊಳಿ ಪರ ವಕೀಲ ಸಿ.ವಿ.ನಾಗೇಶ್ ಆಕ್ಷೇಪಣೆ ಸಲ್ಲಿಸಿದ್ರು. ಮೂರನೇ ವ್ಯಕ್ತಿಗಳು ತನಿಖೆಯನ್ನು ನಿರ್ಧರಿಸಬಾರದು ಎಂದು ಅವರು ವಾದಿಸಿದ್ದರು. ಈ ವೇಳೆ ಮಾತನಾಡಿದ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ, ‘ನ್ಯಾಯ ಸಮ್ಮತ ತನಿಖೆ ನಡೆಸುವುದು ನಮ್ಮ ಉದ್ದೇಶ. ನಿಮಗೆ ನ್ಯಾಯಸಮ್ಮತ ತನಿಖೆ ಇಷ್ಟವಿಲ್ಲವೇ. ನೀವು ಆಕ್ಷೇಪ ಎತ್ತಿದರೆ ನಾವು ಹಾಗೆ ಭಾವಿಸಬೇಕಾಗುತ್ತದೆ’ ಎಂದು ಹೇಳಿದ್ದರು.

(Ramesh Jarkiholi cd case accused medical examination not done woman in the cd files application in high court)

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಂದೆ ಜೊತೆ ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಕೋರ್ಟ್​ಗೆ ತಿಳಿಸಿದ ಯುವತಿ

Published On - 12:52 pm, Tue, 8 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?