AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?

ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಮುಂದಿನ ನಡೆ ತೀರ್ಮಾನಕ್ಕೆ ಜಾರಕಿಹೊಳಿ ಸಹೋದರರ ಮಾತುಕತೆ: ರಮೇಶ್, ಬಾಲಚಂದ್ರ, ಲಖನ್ ಭಾಗಿ?
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
TV9 Web
| Edited By: |

Updated on:Apr 05, 2022 | 1:01 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ತಮ್ಮ ಮುಂದಿನ ನಡೆಯನ್ನು ತೀರ್ಮಾನಿಸಲು ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಹೋದರರೊಂದಿಗೆ ಚರ್ಚೆಗೆ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಮುಂದಿನ ನಡೆಯ ಬಗ್ಗೆ ಸಹೋದರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ರಮೇಶ್ ಭೇಟಿಗೆ ಸಹೋದರ ಲಖನ್ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ. ಸಂಜೆ ಬಳಿಕ ಮೂವರು ಸಹೋದರರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.

ಸಂತ್ರಸ್ತ ಯುವತಿ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಮತ್ತೊಂದೆಡೆ, ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಲು ವಿಶೇಷ ತನಿಖಾ ದಳ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಮೊದಲು ಯುವತಿಯ ಧ್ವನಿ ಮಾದರಿಯನ್ನು (ವಾಯ್ಸ್ ಸ್ಯಾಂಪಲ್ಸ್) ಎಸ್​ಐಟಿ ಸಂಗ್ರಹಿಸಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಸಂತ್ರಸ್ತೆ ವಾಯ್ಸ್ ಸ್ಯಾಂಪಲ್ಸ್ ಸಂಗ್ರಹಿಸಿದೆ. ಮುಂದೆ, ಈ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ, ವೈರಲ್ ವಿಡಿಯೋ ತುಣುಕು ಸಹ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗುತ್ತದೆ. ಎರಡು ಧ್ವನಿಯಲ್ಲೂ ಹೊಂದಾಣಿಕೆ ಇದೆಯಾ ಎಂದು ಪರಿಶೀಲನೆ ಮಾಡಲಾಗುತ್ತದೆ.

ಇಂದು ಮಧ್ಯಾಹ್ನ ವೇಳೆ ಮೆಡಿಕಲ್ ಟೆಸ್ಟ್ ಮುಗಿಸಿ ಬಂದಿರುವ ಹಿನ್ನೆಲೆಯಲ್ಲಿ ಯುವತಿಗೆ ವಿಶ್ರಾಂತಿ ನೀಡಲಾಗಿತ್ತು. ಆಡುಗೋಡಿಯ ಟೆಕ್ನಿಕಲ್ ವಿಂಗ್‌ನಲ್ಲಿ ಸಂತ್ರಸ್ತೆ ವಿಶ್ರಾಂತಿ ಪಡೆದಿದ್ದಳು. ಕೆಲಕಾಲ ವಿಶ್ರಾಂತಿಯ ಬಳಿಕ ಸಂತ್ರಸ್ತೆಯ ವಿಚಾರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆಯಲ್ಲಿ ಚಿತ್ರಾನ್ನ ಸೇವಿಸಿದ ಸಿಡಿ ಲೇಡಿ; ಕೌನ್ಸೆಲಿಂಗ್ ನಡೆಸಿ ಸಂತ್ರಸ್ತೆಗೆ ಧೈರ್ಯ ತುಂಬಿದ ಮನೋವೈದ್ಯರು

Published On - 6:50 pm, Wed, 31 March 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್