ನಾನು ಉಲ್ಟಾ ಹೊಡೆದಿಲ್ಲ, ಈ ಹಿಂದೆ ನೀಡಿದ ಹೇಳಿಕೆಗೆ ಬದ್ಧಳಾಗಿದ್ದೇನೆ.. ರಿಲೀಸ್ ಆಯ್ತು ಸಿಡಿ ಲೇಡಿಯ ಮತ್ತೊಂದು ವಿಡಿಯೋ

"ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದೇನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಉಲ್ಟಾ ಹೇಳಿಕೆ ನೀಡಿಲ್ಲ. ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆಂಬುದು ಸತ್ಯಕ್ಕೆ ದೂರವಾದ ಮಾತು. -ಸಿಡಿ ಲೇಡಿ

ನಾನು ಉಲ್ಟಾ ಹೊಡೆದಿಲ್ಲ, ಈ ಹಿಂದೆ ನೀಡಿದ ಹೇಳಿಕೆಗೆ ಬದ್ಧಳಾಗಿದ್ದೇನೆ.. ರಿಲೀಸ್ ಆಯ್ತು ಸಿಡಿ ಲೇಡಿಯ ಮತ್ತೊಂದು ವಿಡಿಯೋ
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
Follow us
ಆಯೇಷಾ ಬಾನು
|

Updated on:Apr 13, 2021 | 7:26 AM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೇಳಿಕೆ ನೀಡಿದ್ದಾರೆ. ನನ್ನನ್ನು ಹನಿ ಟ್ರ್ಯಾಪ್‌ಗೆ ಬಳಿಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಸಿಡಿ ಲೇಡಿ ಸ್ಫೋಟಕ ಆರೋಪ ಮಾಡಿರುವುದಾಗಿ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಮಾತನಾಡಿದ್ದ ವಕೀಲರಾದ ಸೂರ್ಯ ಮುಕುಂದರಾಜ್ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದಿದ್ದರು. ಸದ್ಯ ಈ ಬಗ್ಗೆ ಸ್ವತಃ ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು ನಾನು ಉಲ್ಟಾ ಹೊಡೆದಿಲ್ಲ ಎಂದಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಸಿಡಿ ಲೇಡಿ ‘ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದೇನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಉಲ್ಟಾ ಹೇಳಿಕೆ ನೀಡಿಲ್ಲ. ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆಂಬುದು ಸತ್ಯಕ್ಕೆ ದೂರವಾದ ಮಾತು. ಜಡ್ಜ್‌ ಮುಂದೆ ಮತ್ತೊಮ್ಮೆ ಹೇಳಿಕೆ ನೀಡಲು ಮನವಿ ಮಾಡಿಲ್ಲ. ಪೋಷಕರ ಜೊತೆ ಚರ್ಚಿಸಿದ ಬಳಿಕ ಮನಸ್ಸು ಬದಲಾಯಿಸಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ನಿನ್ನೆ ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಹಾಜರಾಗಿದ್ದೆ. ಆದ್ರೆ ಎಸ್‌ಐಟಿ ಮುಂದೆ ಉಲ್ಟಾ ಹೇಳಿಕೆ ನೀಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಕರೆಸಿಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ರಮೇಶ್ ಜಾರಕಿಹೊಳಿ ಕೊರೊನಾ ಪೀಡಿತರಂತೆ ನಟಿಸುತ್ತಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಸುದ್ದಿ ಸೃಷ್ಟಿಸಿ ನನ್ನ ವಿರುದ್ದ ಷಡ್ಯಂತ್ರ ಮಾಡಿರುವ ಸಾಧ್ಯತೆ ಇದೆ’ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದಾರೆ. ಸದ್ಯ ಆ ಪತ್ರ ಹಾಗೂ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆ ಆಗಿದೆ.

CD Lady Letter

ಸಿಡಿ ಲೇಡಿ

ಆರೋಪಿ‌ ವಿಚಾರಣೆ ನಡೆಸದಿದ್ದಕ್ಕೆ ಸಿಡಿ ಲೇಡಿ ಗರಂ ರಮೇಶ್ ಜಾರಕಿಹೊಳಿಯನ್ನು ವಿಚಾರಣೆ ನಡೆಸದಿದ್ದಕ್ಕೆ ಸಿಡಿ ಲೇಡಿ ಗರಂ ಆಗಿದ್ದಾರೆ. ಐಸ್‌ಐಟಿಯವ್ರು ನನ್ನ ಫ್ಯಾಮಿಲಿಯನ್ನ ವಿಚಾರಣೆ ನಡೆಸಿದ್ದಾರೆ. ನನ್ನ ಫ್ರೆಂಡ್ ಆಕಾಶ್​ರಿಂದ ಸ್ಟೇಟ್​ಮೆಂಟ್ ಪಡೆದಿದ್ದಾರೆ. ನನ್ನ ರಿಲೇಟಿವ್‌ಗಳಿಗೆಲ್ಲಾ ಎಸ್‌ಐಟಿ ನೋಟಿಸ್ ಕೊಟ್ಟಿದ್ದಾರೆ. ಆದ್ರೆ ಆರೋಪಿಯನ್ನು ಕೊವಿಡ್ ಪೇಷಂಟ್‌ ಅಂತ ಬಿಟ್ಟಿದ್ದಾರೆ. ಕೂಡಲೇ ಆರೋಪಿ ರಮೇಶ್‌ನನ್ನು ಎಸ್‌ಐಟಿ ವಿಚಾರಣೆ ನಡೆಸಲಿ. ರಮೇಶ್ ಕುಟುಂಬಕ್ಕೂ ನೋಟಿಸ್ ನೀಡಿ ವಿಚಾರಣೆ ನಡೆಸಲಿ ಎಂದು ಇಂದು ರಿಲೀಸ್ ಮಾಡಿದ ವಿಡಿಯೋದಲ್ಲಿ ಸಿಡಿ ಲೇಡಿ SIT ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಹೇಳಿಕೆ; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬ್ಲಾಸ್ಟಿಂಗ್ ಟ್ವಿಸ್ಟ್

Published On - 7:15 am, Tue, 13 April 21

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ