AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆತ, ಪೊಲೀಸ್‌ ಕಾನ್ಸ್‌ಟೇಬಲ್‌ ಎಳೆದಾಟ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಬೆಳಗಾವಿ ನಗರ ಪ್ರವೇಶ ವೇಳೆ ರಮೇಶ್ ಬೆಂಬಲಿಗರಿಂದ ಡಿ.ಕೆ. ಶಿವಕುಮಾರ್ ವಾಹನಕ್ಕೆ ತಡೆಯೊಡ್ಡಿದ್ದಾರೆ. ಶಿವಕುಮಾರ್​ ಪ್ರಯಾಣಿಸುತ್ತಿದ್ದ ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಕುಳಿತಿದ್ದ ಕಾರಿಗೆ ಗುದ್ದಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆತ, ಪೊಲೀಸ್‌ ಕಾನ್ಸ್‌ಟೇಬಲ್‌ ಎಳೆದಾಟ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ
ಡಿ.ಕೆ. ಶಿವಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ
TV9 Web
| Edited By: |

Updated on:Apr 05, 2022 | 1:08 PM

Share

ಬೆಳಗಾವಿ: ಡಿ.ಕೆ. ಶಿವಕುಮಾರ್ ಬೆಂಗಾವಲು ವಾಹನದ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಚಪ್ಪಲಿ ಎಸೆದಿದ್ದಾರೆ. ಡಿ.ಕೆ. ಶಿವಕುಮಾರ್ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಿಂದ ಹೋಟೆಲ್​ಗೆ ತೆರಳುವ ವೇಳೆ ಘಟನೆ ನಡೆದಿದೆ. ಏರ್​ಪೋರ್ಟ್​ ರಸ್ತೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಬೆಳಗಾವಿ ಜಿಲ್ಲಾ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಬೆಳಗಾವಿ ನಗರ ಪ್ರವೇಶ ವೇಳೆ ರಮೇಶ್ ಬೆಂಬಲಿಗರಿಂದ ಡಿ.ಕೆ. ಶಿವಕುಮಾರ್ ವಾಹನಕ್ಕೆ ತಡೆಯೊಡ್ಡಿದ್ದಾರೆ. ಶಿವಕುಮಾರ್​ ಪ್ರಯಾಣಿಸುತ್ತಿದ್ದ ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಕುಳಿತಿದ್ದ ಕಾರಿಗೆ ಗುದ್ದಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಈ ವೇಳೆ ಶಿವಕುಮಾರ್ ಕಾರಿನ ಗಾಜು ಪುಡಿಪುಡಿಯಾಗಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು, ಶಿವಕುಮಾರ್‌ ತೆರಳುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ. ಗಲಾಟೆ ಹತ್ತಿಕ್ಕಲು ಪ್ರತಿಭಟನಾಕಾರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ, ಕಾರ್ಯಕರ್ತನ ಮೇಲೆ ಲಾಠಿ ಬೀಸಿದ್ದಕ್ಕೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಕಾನ್ಸ್‌ಟೇಬಲ್‌ ಎಳೆದಾಡಿದ ರಮೇಶ್‌ ಬೆಂಬಲಿಗರು ಶರ್ಟ್ ಬಿಚ್ಚಿ ಅರೆನಗ್ನರಾಗಿ ಪ್ರತಿಭಟನೆ ಮಾಡಿದ್ದಾರೆ.

ಬೆಂಬಲಿಗರಿಂದ ತಪ್ಪಿಸಿಕೊಂಡು ಓಡಿದ ಕಾನ್ಸ್‌ಟೇಬಲ್‌ನನ್ನು ವಶಕ್ಕೆ ಕೊಡಿ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ಉದ್ನಿಗ್ನ ವಾತಾವರಣ ನೆಲೆಯಾಗಿದೆ. ಕಾನ್ಸ್‌ಟೇಬಲ್‌ ಮಲ್ಲಿಕಾರ್ಜುನ ಯಾದವಾಡರನ್ನು ಕಾರ್ಯರ್ತರು ಅಟ್ಟಾಡಿಸಿದ್ದಾರೆ. ಘಟನೆ ಹತ್ತಿಕ್ಕಲು ಪೊಲೀಸರು, ಕಾರ್ಯಕರ್ತರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.

ಭದ್ರತೆಗೆ ನಿಯೋಜನೆಯಾಗಿರುವ ಪೊಲೀಸರ ಜತೆ ವಾಗ್ವಾದ ನಡೆಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರು, ಪೊಲೀಸರ ಸೂಚನೆ ಲೆಕ್ಕಿಸದೆ ಮುಂದೆ ನುಗ್ಗಿ ಚಪ್ಪಲಿ ಎಸೆದಿದ್ದಾರೆ. ಡಿ.ಕೆ.ಶಿವಕುಮಾರ್​ಗೆ ಕಪ್ಪುಬಾವುಟ ಪ್ರದರ್ಶಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ.ಕೆ. ಶಿವಕುಮಾರ್ ನಾಳೆ ಸತೀಶ್​ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಲಿದ್ದಾರೆ. ಇದೀಗ ಏರ್​ಪೋರ್ಟ್​ನಿಂದ ಖಾಸಗಿ ಹೋಟೆಲ್​ಗೆ ತೆರಳಿರುವ ಶಿವಕುಮಾರ್, ಸಂಜೆ 7ಕ್ಕೆ ಕಾಂಗ್ರೆಸ್​ ಕಚೇರಿಯಲ್ಲಿ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಬೆಳಗಾವಿ ಹೋಟೆಲ್​ಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬಂದು, ಹೋಟೆಲ್ ತಲುಪಿದ್ದಾರೆ. ಆದರೆ ಇನ್ನೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಶಿವಕುಮಾರ್​ರನ್ನು ಭೇಟಿಯಾಗಿಲ್ಲ. ಡಿ.ಕೆ. ಶಿವಕುಮಾರ್ ತಂಗಿರುವ ಹೋಟೆಲ್ ಬಳಿ ‘ಕೈ’ ಕಾರ್ಯಕರ್ತರ ಜಮಾವಣೆಯಾಗಿದೆ. ಕಾರ್ಯಕರ್ತರ ಭೇಟಿಗೆ ಡಿ.ಕೆ.ಶಿವಕುಮಾರ್ ಅವಕಾಶ ನೀಡಿಲ್ಲ. ಖಾಸಗಿ ಹೋಟೆಲ್‌ ಬಳಿಯೂ ಬೆಂಬಲಿಗರಿಂದ ಧರಣಿ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹೋಟೆಲ್‌ ಮುಂಭಾಗ ಪೊಲೀಸ್ ಭದ್ರತೆ ನೀಡಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಹೋಟೆಲ್‌ ಮುಂಭಾಗ ಬಂದೋಬಸ್ತ್‌ ಮಾಡಲಾಗಿದೆ.

ಇದನ್ನೂ ಓದಿ: ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

‘ಗೋ ಬ್ಯಾಕ್ ಡಿಕೆಶಿ’ ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ; ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ ಎಂದ ಸತೀಶ್ ಜಾರಕಿಹೊಳಿ

Published On - 4:40 pm, Sun, 28 March 21