‘ಗೋ ಬ್ಯಾಕ್ ಡಿಕೆಶಿ’ ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ; ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

‘ಗೋ ಬ್ಯಾಕ್ ಡಿಕೆಶಿ’ ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ; ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ ಎಂದ ಸತೀಶ್ ಜಾರಕಿಹೊಳಿ
ಡಿ.ಕೆ. ಶಿವಕುಮಾರ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ
Follow us
| Updated By: ganapathi bhat

Updated on:Apr 05, 2022 | 1:08 PM

ಬೆಳಗಾವಿ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್‌ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯಿಸಿದ್ದಾರೆ. ಎಸ್‌ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್‌ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್‌ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್‌ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ ಬೆಳಗಾವಿಗೆ ಡಿ.ಕೆ.ಶಿವಕುಮಾರ್‌ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್‌ಪೋರ್ಟ್‌ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.

ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ ಸಾಂಬ್ರಾ ಏರ್‌ಪೋರ್ಟ್‌ ಬಳಿ ಧರಣಿ ನಡೆಸುತ್ತಿರುವ ರಮೇಶ್‌ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್‌ಪೋರ್ಟ್‌ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಿಲ್ಲೆಗೆ ಆಗಮಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್​ರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಲು ಸಜ್ಜಾಗಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನಗರ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಜಿಲ್ಲೆಯ ಸ್ಥಳೀಯ ಮುಖಂಡರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ?; ವಿಪಕ್ಷ ನಾಯಕ ಸಿದ್ದರಾಮಯ್ಯ

ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್, ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

Published On - 3:18 pm, Sun, 28 March 21

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ