ಮುಚ್ಚಿದ ಲಕೋಟೆಯಲ್ಲಿ ಸಿಡಿ ಲೇಡಿ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಹೈಕೋರ್ಟ್ ಸೂಚನೆ
ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ವಕೀಲ ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ.
ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ತನಿಖೆಯ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಹೈಕೋರ್ಟ್ನ ವಿಭಾಗೀಯ ಪೀಠವು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಸೂಚಿಸಿದೆ. ವಕೀಲ ಜಿ.ಆರ್. ಮೋಹನ್ ಮಾಡಿದ್ದ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಆರೋಪದ ಕುರಿತು ಕಾನೂನುಬಾಹಿರವಾಗಿ ವರ್ತಿಸಿರುವುದಕ್ಕೆ ಸಾಕ್ಷ್ಯ ಇದೆಯಾ? ಎಸ್ಐಟಿಯಿಂದ ಮಾಹಿತಿ ಸೋರಿಕೆ ಆರೋಪಕ್ಕೆ ಆಧಾರವೇನು? ಎಂದಿರುವ ಕೋರ್ಟ್, ವಿನಾಕಾರಣ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಅಲ್ಲದೇ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ವಕೀಲ ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ. ವಕೀಲ ಜಿ.ಆರ್. ಮೋಹನ್ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಯ ರಚನೆಯನ್ನೇ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದರು.
Published On - 4:54 pm, Mon, 5 April 21