ಮೂರನೇ ಸಿಡಿ ಬಿಡುಗಡೆ: ಜೀವ ಬೆದರಿಕೆ ಇದೆ; ರಮೇಶ್ ಜಾರಕಿಹೊಳಿ ವಿರುದ್ಧ ಮಧ್ಯಾಹ್ನ ದೂರು ಕೊಡುವೆ ಎಂದ ಯುವತಿ

ಇಂದು ಯುವತಿ ಇನ್ನೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಇತ್ತೀಚಿಗೆ ಈ ಪ್ರಕರಣದಲ್ಲಿ ಬಿಡುಗಡೆಯಾದ ವಿಡಿಯೋದ ಸಂಖ್ಯೆ ಮೂರಕ್ಕೇರಿದೆ. (Ramesh Jarkiholi CD case lady released 3rd video says will register complaint against former minister Ramesh Jarkiholi)

ಮೂರನೇ ಸಿಡಿ ಬಿಡುಗಡೆ: ಜೀವ ಬೆದರಿಕೆ ಇದೆ; ರಮೇಶ್ ಜಾರಕಿಹೊಳಿ ವಿರುದ್ಧ ಮಧ್ಯಾಹ್ನ ದೂರು ಕೊಡುವೆ ಎಂದ ಯುವತಿ
ಸಂತ್ರಸ್ತ ಯುವತಿ
Follow us
guruganesh bhat
|

Updated on: Mar 26, 2021 | 11:48 AM

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ. ವಕೀಲ ಜಗದೀಶ್ ಮೂಲಕ ದೂರು ನೀಡುತ್ತೇನೆ. 24 ದಿನದಿಂದ ಜೀವಭಯದಲ್ಲಿದ್ದೆ. ಜೀವ ಬೆದರಿಕೆಯಿಂದ ಕಂಗಾಲಾಗಿದ್ದೆ. ಎಲ್ಲ ಪಕ್ಷದ ನಾಯಕರು, ಎಲ್ಲ ಸಂಘಟನೆಗಳು, ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ, ಈಗ ನನಗೆ ಧೈರ್ಯ ಬಂದಿದೆ. ನನಗೆ ಧೈರ್ಯ ಬಂದಿರುವುದರಿಂದ ದೂರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡ್ತಿದ್ದೇನೆ’ ಎಂದು ಯುವತಿ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ.

ನಿನ್ನೆಯಷ್ಟೇ 2ನೇ ವಿಡಿಯೋ ಬಿಡುಗಡೆ ಮಾಡಿದ್ದಳು!

ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರಿಗೆ ಪ್ರಕರಣದ ಪಾತ್ರಧಾರಿಗಳು ಚಳ್ಳೆಹಣ್ಣು ತಿನ್ನಿಸುತ್ತಲೇ ಇದ್ದಾರೆ. ಅದರಲ್ಲೂ CD ಲೇಡಿಯಂತೂ ತನಗೆ ನಾಲ್ಕಾರು ನೋಟಿಸ್​ಗಳು ಬಂದಿದ್ದರೂ ಯಾವುದಕ್ಕೂ ಕ್ಯಾರೆ ಅನ್ನುತ್ತಿಲ್ಲ. ಪೊಲೀಸರ ಕರೆಗೆ ರೆಸ್ಪಾನ್ಸ್​ ನೀಡುತ್ತಿಲ್ಲ. ಈ ಮಧ್ಯೆ, ನಿನ್ನೆ ಎರಡನೇ ವಿಡಿಯೋವನ್ನು ಮಾಧ್ಯಮಗಳ ಮೂಲಕ ಒಂದು ನಿಮಿಷ 13 ಸೆಕೆಂಡ್​ಗಳ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಿಡಿ ಲೇಡಿಯಿಂದ ನಿನ್ನೆ 2ನೇ ವಿಡಿಯೋ ಬಿಡುಗಡೆಯಾಗಿತ್ತು. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಲೇಡಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.

ಇಂದು ಯುವತಿ ಇನ್ನೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಇತ್ತೀಚಿಗೆ ಈ ಪ್ರಕರಣದಲ್ಲಿ ಬಿಡುಗಡೆಯಾದ ವಿಡಿಯೋದ ಸಂಖ್ಯೆ ಮೂರಕ್ಕೇರಿದೆ.

ಇದನ್ನೂ ಓದಿ:  ಈಗ ನನ್ನ ಜೇಬಿನಲ್ಲಿಯೇ ಎವಿಡೆನ್ಸ್ ಇದೆ, ಬಿಡುಗಡೆ ಮಾಡಿದರೆ ನೀವೇ ಶಾಕ್ ಆಗ್ತೀರಿ: ರಮೇಶ್ ಜಾರಕಿಹೊಳಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್