AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಐಟಿ ತನಿಖೆ ಬಗ್ಗೆ ಸಂತ್ರಸ್ತ ಯುವತಿಯ ಆರೋಪ; ಪ್ರಾಥಮಿಕ ತನಿಖೆಗೆ ಕಮಿಷನರ್ ಕಮಲ್ ಪಂತ್ ಆದೇಶ

ಎಸ್​ಐಟಿ ತನಿಖೆ ಬಗ್ಗೆ ಸಂತ್ರಸ್ತ ಯುವತಿ ಆಕ್ಷೇಪಿಸಿ ಪತ್ರ ಬರೆದಿದ್ದಳು. ಎಸ್​ಐಟಿ ತನಿಖೆ ಬಗ್ಗೆ ಅನುಮಾನವಿದೆ ಎಂದು ಯುವತಿ ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ, ಪ್ರಾಥಮಿಕ ತನಿಖೆಗೆ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.

ಎಸ್ಐಟಿ ತನಿಖೆ ಬಗ್ಗೆ ಸಂತ್ರಸ್ತ ಯುವತಿಯ ಆರೋಪ; ಪ್ರಾಥಮಿಕ ತನಿಖೆಗೆ ಕಮಿಷನರ್ ಕಮಲ್ ಪಂತ್ ಆದೇಶ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Apr 05, 2022 | 12:43 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ತನಿಖೆ ಬಗ್ಗೆ ಸಂತ್ರಸ್ತ ಯುವತಿ ಆಕ್ಷೇಪಿಸಿ ಪತ್ರ ಬರೆದಿದ್ದಳು. ಎಸ್​ಐಟಿ ತನಿಖೆ ಬಗ್ಗೆ ಅನುಮಾನವಿದೆ ಎಂದು ಯುವತಿ ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ, ಪ್ರಾಥಮಿಕ ತನಿಖೆಗೆ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.

ಎಸ್ಐಟಿಯಿಂದ ಪ್ರಕರಣದ ತನಿಖಾ ಪ್ರಗತಿ ಕುರಿತು ಇಂದು (ಏಪ್ರಿಲ್ 7) ಸಭೆ ನಡೆಸಲಾಗಿದೆ. ಬೆಂಗಳೂರಿನ ಆಡುಗೋಡಿ ಟೆಕ್ನಿಕಲ್ ಸೆಂಟರ್‌ನಲ್ಲಿ ಸಭೆ ನಡೆಸಲಾಗಿದೆ. ಎಸ್​ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಸಭೆ ನಡೆದಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ವಿಚಾರಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು. ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಪತ್ರ ಬರೆದು ನನಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು.

ಆರೋಪಿಯನ್ನು ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು. ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಹೇಳಿ ವಾಪಸ್ ಕಳುಹಿಸಿದ್ದರು. ಅವರು ಮುಕ್ತವಾಗಿ ಓಡಾಡಲು ಎಸ್ಐಟಿ ಅವಕಾಶ ನೀಡಿದೆ ಎಂದು ಆರೋಪಿಸುತ್ತಿರುವ ಯುವತಿ ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ನನ್ನ ಹೆಸರು ಉಲ್ಲೇಖವಾಗದಿದ್ದರೂ ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷಿಯನ್ನು ನಾಶ ಮಾಡಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಎಸ್ಐಟಿ ಅಧಿಕಾರಿಗಳು ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದಿದ್ದಾರೆ. ಈವರೆಗೂ ನನ್ನನ್ನು ತೇಜೋವಧೆ ಮಾಡುವ ಸುದ್ದಿ ಪ್ರಸಾರವಾಗುತ್ತಿವೆ. ನಾನು ಪ್ರಕರಣದ ದೂರುದಾರಳಾಗಿದ್ದರೂ ನನ್ನ ಚಾರಿತ್ರ್ಯವಧೆ ಮಾಡುವ ಷಡ್ಯಂತ್ರ ರಮೇಶ್ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನನಗೆ ತೀವ್ರ ಆತಂಕ ಮೂಡಿಸಿದೆ. ನನ್ನ ಸಹಮತ ಪಡೆಯದೆ ಪಿಪಿ ನೇಮಕ ಮಾಡಲಾಗಿದೆ. ಇಡೀ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣದ ತನಿಖೆ ಮೇಲೆ ನಂಬಿಕೆ ಇಲ್ಲದಂತಾಗಿದೆ. ಸರ್ಕಾರದ ಒತ್ತಡಕ್ಕೆ ಮಣಿಯದೆ ನನಗೆ ನ್ಯಾಯ ಕೊಡಿಸಿ. ನ್ಯಾಯಸಮ್ಮತ ವಿಚಾರಣೆ ನಡೆಸಬೇಕೆಂದು ಸಂತ್ರಸ್ತೆ ಪತ್ರದಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ‌ ಬೇಗ ಗುಣಮುಖರಾಗಿ ಬರಲಿ ಅಂತ ಗೋಕಾಕ್ ಲಕ್ಷ್ಮಿ ದೇವಿಗೆ ಅಭಿಮಾನಿಗಳ ಪೂಜೆ

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಇಲ್ಲ, ಅವರದು ನಾಟಕ: ವಕೀಲ ಜಗದೀಶ್ ದೂರು

Published On - 11:33 pm, Wed, 7 April 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್