ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದಾರೆ.

ಯುವತಿ ಕೋರ್ಟ್‌ ಹೇಳಿಕೆ ಹಿನ್ನೆಲೆ: ಕಂಗೆಟ್ಟ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಕೊಲ್ಹಾಪುರದ ಮಹಾಲಕ್ಷ್ಮಿ ದೇಗುಲದತ್ತ ಪಯಣ
ರಮೇಶ್​ ಜಾರಕಿಹೊಳಿ
Follow us
TV9 Web
| Updated By: ganapathi bhat

Updated on:Apr 05, 2022 | 1:04 PM

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ರಮೇಶ್ ಜಾರಕಿಹೊಳಿ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯದತ್ತ ಪ್ರಯಾಣ ಬೆಳೆಸಿದ್ದಾರೆ. ಪೂಜೆ ಮಾಡಿಸಲು ಸಮಯ ಕೇಳಿದ್ದ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, CD ಕೇಸ್‌ನಿಂದ ಕಂಗೆಟ್ಟಿದ್ದಾರೆ. ಹೀಗಾಗಿ ದೇವರ ಮೊರೆ ಹೋಗಿದ್ದಾರೆ.

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಕಂಗೆಟ್ಟಿದ್ದ, ರಮೇಶ್ ಜಾರಕಿಹೊಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಮನೆಯಿಂದ ತೆರಳಿದ್ದರು. ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ್‌ನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದರು. ಗೋಕಾಕ್ ಫಾಲ್ಸ್ ರಸ್ತೆಯಲ್ಲಿ ತೆರಳಿದ್ದರು. ನಿನ್ನೆ ರಾತ್ರಿ ಗೋಕಾಕ್‌ಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಬೆಳಗ್ಗೆಯಿಂದ ಮನೆಯಿಂದ ಹೊರಬಂದಿರಲಿಲ್ಲ. ಯುವತಿ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಮನೆಯಿಂದ ಹೊರಕ್ಕೆ ಹೊರಟಿದ್ದರು. ಮಾಧ್ಯಮಗಳ ಕಣ್ತಪ್ಪಿಸಿ ಮನೆಯಿಂದ ತೆರಳಿದ್ದರು.

ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ SIT ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಆಡುಗೋಡಿಯ SIT ವಿಂಗ್‌ನಲ್ಲಿ ವಿಚಾರಣೆ ಎದುರಿಸಿದ್ದರು. ನಿನ್ನೆಯೂ ಮಾಧ್ಯಮಗಳ ಕಣ್ತಪ್ಪಿಸಿ ತೆರಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಇಂದೂ ಕೂಡ ಹಾಗೇ ತೆರಳಿದ್ದರು.

ವಸಂತನಗರದ ಕೋರ್ಟ್​ಗೆ ತೆರಳಿ ಹೇಳಿಕೆ ಪಡೆಯುತ್ತಿರುವ ನ್ಯಾಯಾಧೀಶರು ಬೆಂಗಳೂರಿನ ವಸಂತನಗರದಲ್ಲಿರುವ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​​ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲು ಮಹಿಳಾ ಟೈಪಿಸ್ಟ್ ಜತೆ ಎಸಿಎಂಎಂ ನ್ಯಾಯಾಧೀಶರು ತೆರಳಿದ್ದಾರೆ. ಯುವತಿ ಮೂರು ಗಂಟೆಯ ಹೊತ್ತಿಗೆ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ಹಾಲ್​ನಲ್ಲಿ ಉಪಸ್ಥಿತರಿದ್ದು,  ಮಧ್ಯಾಹ್ನ 3 ಗಂಟೆಗೆ ಕಾರಿನಲ್ಲಿ ಸ್ಥಳಕ್ಕೆ ನ್ಯಾಯಾಧೀಶರು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕೊವಿಡ್ ಹಿನ್ನೆಲೆಯಲ್ಲಿ ಗುರುನಾನಕ್ ಭವನದಲ್ಲಿ ವಿಶೇಷ ನ್ಯಾಯಾಲಯ ‌ನಿರ್ಮಾಣವಾಗಿತ್ತು. ಈ ಸ್ಥಳಕ್ಕೆ ಹೇಳಿಕೆ ಪಡೆಯಲು ನ್ಯಾಯಾಧೀಶರು ತೆರಳಿದ್ದಾರೆ. ನ್ಯಾಯಾಧೀಶರ ಜತೆ ಮಹಿಳಾ ಟೈಪಿಸ್ಟ್, ಯುವತಿ ಮಾತ್ರ ಉಪಸ್ಥಿತರಿದ್ದಾರೆ. CRPC ಸೆಕ್ಷನ್ 164ರಡಿ ಯುವತಿಯ ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಯುವತಿಯಿರುವ ಸ್ಥಳಕ್ಕೇ ತೆರಳಿ ಹೇಳಿಕೆ ಪಡೆಯಲು 24ನೇ ಎಸಿಎಂಎಂ ನ್ಯಾಯಾಧೀಶರು ನಿಶ್ಚಯಿಸಿದ್ದಾರೆ.  ಎಸಿಎಂಎಂ ನ್ಯಾಯಾಲಯಕ್ಕೆ ಯುವತಿ ಆಗಮಿಸುತ್ತಾಳೆ ಎಂಬ ನಿರೀಕ್ಷೆ ಮೀರಿ ಕ್ಷಣ ಕ್ಷಣಕ್ಕೂ ಈ ಪ್ರಕರಣ ತಿರುಚು ಪಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್

ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಬೆಂಬಲಕ್ಕೆ ನಿಂತ ಸಚಿವ ಮುರುಗೇಶ್‌ ನಿರಾಣಿ

Published On - 4:24 pm, Tue, 30 March 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ