AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್​ನಲ್ಲಿ ಇದ್ದುಕೊಂಡೇ ತಯಾರಿ.. ಸಿಡಿ ಯುವತಿ ಹೇಳಿಕೆ ಬೆನ್ನಲ್ಲೇ ವಕೀಲರ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ

ಏಪ್ರಿಲ್ 13ರಂದು ಸಿಡಿ ಲೇಡಿಯ ವಿಡಿಯೋ ಬಿಡುಗಡೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ವಕೀಲರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಸಿಡಿ ಲೇಡಿ ನಿನ್ನೆ ಹೇಳಿಕೆ ನೀಡಿ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಕ್ವಾರಂಟೈನ್​ನಲ್ಲಿ ಇದ್ದುಕೊಂಡೇ ತಯಾರಿ.. ಸಿಡಿ ಯುವತಿ ಹೇಳಿಕೆ ಬೆನ್ನಲ್ಲೇ ವಕೀಲರ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ
ರಮೇಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on:Apr 14, 2021 | 8:05 AM

Share

ಬೆಂಗಳೂರು: ರಾಜಕೀಯದಲ್ಲಿ ಭಾರಿ ಸದ್ದು ಮಾಡಿದ್ದ ಅನೇಕ ತಿರುವುಗಳಿಂದ ಕುತೂಹಲ ಹುಟ್ಟು ಹಾಕಿದ್ದ ಸಿಡಿ ಪ್ರಕರಣ ಸಂಬಂಧ ನಿನ್ನೆ ರಮೇಶ್ ಜಾರಕಿಹೊಳಿ ತಮ್ಮ ವಕೀಲರ ಜೊತೆ ಚರ್ಚೆ ನಡೆಸಿದ್ದಾರಂತೆ. ಏಪ್ರಿಲ್ 13ರಂದು ಸಿಡಿ ಲೇಡಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ವಕೀಲರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಸಿಡಿ ಲೇಡಿ ನಿನ್ನೆ ಹೇಳಿಕೆ ನೀಡಿ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿದೆ ಎಂಬ ಕಾರಣಕ್ಕಾಗಿ ಹೋಮ್​ ಕ್ವಾರಂಟೈನ್ ಆಗಿರುವ ರಮೇಶ್ ಜಾರಕಿಹೊಳಿ ಕ್ವಾರಂಟೈನ್ ಮುಗಿದ ಬಳಿಕ ದಾಖಲೆ ಜೊತೆ ಎಸ್​ಐಟಿ ಮುಂದೆ ಹಾಜರಾಗಲಿದ್ದಾರೆ. ಎಸ್​ಐಟಿಗೆ ಪೂರಕ ದಾಖಲೆಗಳನ್ನು ಒದಗಿಸಿ ಆರೋಪ ಮುಕ್ತರಾಗಿ ಬರಲು ರಮೇಶ್ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈಗಾಗಲೇ ಕೆಲ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಸಂತ್ರಸ್ತ ಯುವತಿಯ ಆರೋಪಗಳಿಗೆ ತಕ್ಕ ಉತ್ತರ ನೀಡಲು ವಕೀಲರ ಸಲಹೆಯಂತೆ ಸಾಕ್ಷಗಳ ಜೊತೆಗೆ ವಿಚಾರಣೆಗೆ ಬರಲು ರಮೇಶ್ ತಯಾರಿ ನಡೆಸಿದ್ದಾರೆ.

ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಯುವತಿ ಹೇಳಿದ್ದೇನು? ‘ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದೇನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಉಲ್ಟಾ ಹೇಳಿಕೆ ನೀಡಿಲ್ಲ. ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆಂಬುದು ಸತ್ಯಕ್ಕೆ ದೂರವಾದ ಮಾತು. ಜಡ್ಜ್‌ ಮುಂದೆ ಮತ್ತೊಮ್ಮೆ ಹೇಳಿಕೆ ನೀಡಲು ಮನವಿ ಮಾಡಿಲ್ಲ. ಪೋಷಕರ ಜೊತೆ ಚರ್ಚಿಸಿದ ಬಳಿಕ ಮನಸ್ಸು ಬದಲಾಯಿಸಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ನಿನ್ನೆ ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಹಾಜರಾಗಿದ್ದೆ. ಆದ್ರೆ ಎಸ್‌ಐಟಿ ಮುಂದೆ ಉಲ್ಟಾ ಹೇಳಿಕೆ ನೀಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಕರೆಸಿಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ರಮೇಶ್ ಜಾರಕಿಹೊಳಿ ಕೊರೊನಾ ಪೀಡಿತರಂತೆ ನಟಿಸುತ್ತಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಸುದ್ದಿ ಸೃಷ್ಟಿಸಿ ನನ್ನ ವಿರುದ್ದ ಷಡ್ಯಂತ್ರ ಮಾಡಿರುವ ಸಾಧ್ಯತೆ ಇದೆ’ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ರು. ಇದಕ್ಕೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದಾರೆ. ಆ ಪತ್ರ ಹಾಗೂ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆ ಆದ ಬಳಿಕ ರಮೇಶ್​ ಜಾರಕಿಹೊಳಿ ವಕೀಲರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

(Ramesh Jarkiholi CD Case Ramesh discussed With his Lawyer through Phone)

ಇದನ್ನೂ ಓದಿ: ಸಿಡಿ ಸಂತ್ರಸ್ತೆಯಿಂದ ಮತ್ತೊಂದು ವಿಡಿಯೋ ಅಸ್ತ್ರ: ಕ್ವಾರಂಟೈನ್​ ಆಗಿರುವ ರಮೇಶ್​ ಜಾರಕಿಹೊಳಿಗೆ ಶುರುವಾಯ್ತಾ ಅಸಲಿ ಪರೀಕ್ಷೆ?

Published On - 8:02 am, Wed, 14 April 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!