‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

|

Updated on: Mar 22, 2021 | 5:47 PM

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ.  ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಬೇಕು. ಕೂಡಲೇ ಐಪಿಸಿ ಸೆಕ್ಷನ್ 376 ಪ್ರಕಾರ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸಿ ಯುವತಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ
ಸಿದ್ದರಾಮಯ್ಯ
Follow us on

ಬೆಂಗಳೂರು:  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ.  ಹೀಗಾಗಿ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನದಲ್ಲಿ ಒತ್ತಾಯಿಸಿದರು.  ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಒಂದು ನ್ಯಾಯ, ಯುವತಿಗೆ ಒಂದು ನ್ಯಾಯವೇ ಎಂದು ಪ್ರಶ್ನಿಸಿದ  ಸಿದ್ದರಾಮಯ್ಯ, ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ಮುಂದುವರೆಸಿದ ಅವರು, ಇದುವರೆಗೂ ಆ ಯುವತಿಯನ್ನು ಪತ್ತೆ ಹಚ್ಚಲು ಆಗಿಲ್ಲವೆ? ಆ ಯುವತಿಯ ಸಮ್ಮತಿ ಇಲ್ಲ ಎಂದರೆ ಅದು ಅತ್ಯಾಚಾರವೇ ಆಗುತ್ತದೆ. ಇಷ್ಟು ಗಂಭೀರ ಪ್ರಕರಣದಲ್ಲಿ ಕೇಸ್‌ ರಿಜಿಸ್ಟರ್ ಮಾಡದೇ ವಿಳಂಬ ಮಾಡಿದ್ದೇಕೆ? ಸರ್ಕಾರ ರಮೇಶ್ ಜಾರಕಿಹೊಳಿ ಪರ ತನಿಖೆ ನಡೆಸುತ್ತಿದೆಯೇ ಹೊರತು, ಯುವತಿ ಆಯಾಮದಲ್ಲಿ ನಡೆಸುತ್ತಿಲ್ಲ. ಕೂಡಲೇ ಐಪಿಸಿ ಸೆಕ್ಷನ್ 376 ಪ್ರಕಾರ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸಿ ಯುವತಿಗೆ ನ್ಯಾಯ ಒದಗಿಸಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

6 ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಇವರಿಂದ ಆ ಯುವತಿಗೆ ರಕ್ಷಣೆ ಕೊಡುವ ಕೆಲಸ ಆಗುತ್ತಿಲ್ಲ. ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ಬಸನಗೌಡ ಪಾಟೀಲ್ ಯತ್ನಾಳ್ CD ಮಾಡುವ ಗ್ಯಾಂಗ್ ಇದೆ ಎಂದು ಹೇಳಿದ್ದಾರೆ. ಸಿಎಂಗೆ CD ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಈ ರೀತಿಯಾಗಿ ಬಿಜೆಪಿ ಶಾಸಕ ಯತ್ನಾಳ್ ಹೇಳುತ್ತಿದ್ದಾರೆ. ಈ ಕುರಿತು ಸಹ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ  ತನಿಖೆಯಾಗಲಿ. ಇಲ್ಲದಿದ್ದರೆ ಇಂತಹ ಪ್ರಕರಣಗಳಲ್ಲಿ ನ್ಯಾಯ ಸಿಗುವುದಿಲ್ಲ. ಈ ಪ್ರಕರಣದಲ್ಲಿ ಒಂದು ಒಳ್ಳೆಯ ಸಂದೇಶ ಹೋಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.ಕೋರ್ಟ್​ಗೆ ಹೋದ 6 ಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಎಲ್ಲಾ 6 ಸಚಿವರುಗಳು ತಕ್ಷಣ ರಾಜೀನಾಮೆ ನಿಡಬೇಕು ಎಂದು ಒತ್ತಾಯಿಸಿದರು.

ಲೈಂಗಿಕ ದೌರ್ಜನ್ಯ ಆಗಿದೆ ಅಂತ ಯುವತಿ ಎಲ್ಲೂ ಹೇಳಿಯೇ ಇಲ್ಲ  ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾತಿನ ವೇಳೆ ಸಚಿವ ಜಗದೀಶ್ ಶೆಟ್ಟರ್ ಆಕ್ಷೇಪ ವ್ಯಕ್ತಪಡಿಸಿದರು.  ಆ ಯುವತಿ ಆ ರೀತಿ ಹೇಳಿದ್ದರೆ ಮಾತ್ರ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಹೇಳಿ. ಯುವತಿ ನನ್ನ ಮೇಲೆ ದೌರ್ಜನ್ಯ ಆಗಿದೆ ಅಂತಾ ಹೇಳೇ ಇಲ್ಲ. ಇಲ್ಲದ ಸ್ಟೇಟ್‌ಮೆಂಟ್​ನ್ನು  ನೀವ್ಯಾಕೆ ಹೇಳುತ್ತಿದ್ದೀರಾ ಎಂದು ಸಚಿವ ಜಗದೀಶ್  ಶೆಟ್ಟರ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಹೇಳಿಕೆಯ ಬಗ್ಗೆ ಮಾತ್ರ ಸದನದಲ್ಲಿ ನೀವು ಹೇಳಿ. ಯುವತಿ ಹೇಳದೆ ಇರುವುದನ್ನು ಸದನದಲ್ಲಿ ಹೇಳಬೇಡಿ ಎಂದು ಜಗದೀಶ್ ಶೆಟ್ಟರ್ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಹರಿಹಾಯ್ದರು.

ಇದನ್ನೂ ಓದಿ: ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ

1 ಸಿಡಿ ಅಲ್ಲ, ಎಲ್ಲಾ 19 ಸಿಡಿಗಳ ಬಗ್ಗೆಯೂ ತನಿಖೆ ಮಾಡುತ್ತೇವೆ; ಗೃಹ ಸಚಿವ ಬಸವರಾಜ ಬೊಮ್ಮಾಯಿ

Published On - 5:31 pm, Mon, 22 March 21